ಮಣಿಪಾಲ: ತೋಡಿಗೆ ಉರುಳಿ ಬಿದ್ದ ಬಸ್, 7 ಮಂದಿ ವಿದ್ಯಾರ್ಥಿಗಳಿಗೆ ಗಾಯ

ಮಣಿಪಾಲ: ಶಾಲಾ ಬಸ್ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ನಡೆದಿದೆ. ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಸ್ಕೂಲ್ ಬಸ್ ತಿರುವಿನಲ್ಲಿ ಹಿಂದಕ್ಕೆ ತೆಗೆಯುವಾಗ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ತೋಡಿಗೆ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ. ಈ ಬಸ್ ನಲ್ಲಿ 20 ಮಕ್ಕಳಿದ್ದು, ಇದರಲ್ಲಿ ಏಳು ಮಕ್ಕಳಿಗೆ ಗಾಯಗಳಾಗಿವೆ. ಈ ಪೈಕಿ ಬಾಲಕಿಗೆ ತೀವ್ರ ಗಾಯಗಳಾಗಿವೆ, […]

Continue Reading

ಹೊರ ಜಿಲ್ಲೆಗಳಿಂದ ರೋಗಿಗಳ ಶಿಫಾರಸು ಮಾಡುವಾಗ ಹೆಲ್ಪ್ ಡೆಸ್ಕ್ ಸಂಪರ್ಕಿಸಿ, ನಂತರ ಪರದಾಟ ಬೇಡ, ದ.ಕ. ಜಿಲ್ಲೆಯ ರೋಗಿಗಳಿಗೂ ವೆನ್ಲಾಕ್ ಆಸ್ಪತ್ರೆ ಸೌಲಭ್ಯ ಸಿಗಲಿ: ಅಧೀಕ್ಷಕ ಡಾ. ಶಿವಪ್ರಕಾಶ್

ಮಂಗಳೂರು: ರಾಜ್ಯದ ಹೊರ ಜಿಲ್ಲೆಗಳಿಂದ ತುರ್ತು ಚಿಕಿತ್ಸೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳನ್ನು ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಐಸಿಯು ಹಾಸಿಗೆ ಕೊರತೆ ಕಾಡುತ್ತಿದೆ. ಪರಿಣಾಮ ಒತ್ತಡ ಹೆಚ್ಚಿದ್ದು, ರೋಗಿಗಳನ್ನು ಶಿಫಾರಸು ಮಾಡುವ ಮೊದಲು ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯತೆ ಪರಿಶೀಲಿಸುವ ವ್ಯವಸ್ಥೆ ಕಡ್ಡಾಯಗೊಳಿಸಬೇಕು. ಇದಕ್ಕಾಗಿ ಸಹಾಯವಾಣಿ ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆಗಳ ರೋಗಿಗಳನ್ನು ಏಕಾಏಕಿ ಕರೆತರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಾಕಷ್ಟು ಅರ್ಹ ಬಡ ರೋಗಿಗಳಿಗೆ ವೆನ್ಲಾಕ್ ಆಸ್ಪತ್ರೆಯ ಲಾಭ ಸಿಗದೇ ಇರುವಂತಹ ಸ್ಥಿತಿ ನಿರ್ಮಾಣ ಆಗಿದೆ […]

Continue Reading

ಶಾಸಕ ವೇದವ್ಯಾಸ ಕಾಮತ್ ವಿರುದ್ಧದ ಎಫ್ಐಆರ್ ಹೈಕೋರ್ಟ್ ರದ್ದು, ರಾಜಕೀಯ ಪ್ರೇರಿತ ದೂರ ಆಗಿತ್ತು: ಕಾಮತ್

ಮಂಗಳೂರು: ಶಕ್ತಿನಗರದ ಕೃಷ್ಣ ಭಜನಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿತು. ಕಳೆದ ವರ್ಷ ಮಾರ್ಚ್ ನಲ್ಲಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಇದೊಂದು ರಾಜಕೀಯ ಪ್ರೇರಿತ ದುರುದ್ದೇಶದ ಪ್ರಕರಣ ಆಗಿತ್ತು. ಹೈಕೋರ್ಟ್ ನೀಡಿರುವ ತೀರ್ಪು ನ್ಯಾಯಕ್ಕೆ ಸಂದ ಜಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನನ್ನ […]

Continue Reading

ಅಕ್ರಮ ಬಾಂಗ್ಲಾ ಪ್ರಜೆಗಳ ಪತ್ತೆ, ಇದು ಎಚ್ಚರಿಕೆ ಗಂಟೆ, ಸರಕಾರ ಎಚ್ಚೆತ್ತುಕೊಳ್ಳಲಿ: ಶಾಸಕ ಡಾ. ಭರತ್ ಶೆಟ್ಟಿ

 ಸುರತ್ಕಲ್ : ಮಂಗಳೂರಿನ ಸುರತ್ಕಲ್ ಸಮೀಪದ ಮುಕ್ಕಾದಲ್ಲಿ 8 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಕೂಲಿ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿ, ಅನಧಿಕೃತ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವ ಘಟನೆ ರಾಜ್ಯದ ಭದ್ರತೆಗೆ ಎಚ್ಚರಿಕೆಯ ಗಂಟೆ ಆಗಿದೆ. ಇಂತಹ ಅಕ್ರಮ ನುಸುಳುವಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ಇದರ ಪರಿಣಾಮ ಭೀಕರ ಆಗಿರುತ್ತದೆ. ಬಾಂಗ್ಲಾದೇಶಿಗರನ್ನು ಹೊರಹಾಕಲು ಕೇಂದ್ರ ಸರಕಾರದ ಜತೆ ರಾಜ್ಯ ಸರಕಾರ ಕೈಜೋಡಿಸಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ. ದುರದೃಷ್ಟವಶಾತ್ ರಾಜ್ಯದ ಗೃಹ ಮಂತ್ರಿ […]

Continue Reading

ನಕಲಿ ಆಧಾರ ಕಾರ್ಡ್ ಬಳಸಿ ಅಕ್ರಮವಾಗಿ ಭಾರತಕ್ಕೆ ಪ್ರವೇಶ,  ಮಂಗಳೂರಿನ ಮುಕ್ಕದಲ್ಲಿ 8 ಮಂದಿ ಬಾಂಗ್ಲಾದೇಶದ ಪ್ರಜೆಗಳ ಪತ್ತೆ: ಸುಧೀರ್ ಕುಮಾರ್

ಮಂಗಳೂರು: ಅಕ್ರಮವಾಗಿ ಭಾರತ ಪ್ರವೇಶಿಸಿ, ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ಮಂಗಳೂರಿನ ಮುಕ್ಕಾ ಪ್ರದೇಶದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ. ಬಂಧಿತರು ಸುಮಾರು ಮೂರು ತಿಂಗಳ ಹಿಂದೆ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದು, ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಮೂಲಕ ದೇಶ ಪ್ರವೇಶ ಮಾಡಿದ್ದಾರೆ. ಬಳಿಕ ಮುರ್ಶಿದಾಬಾದ್ ವಿಳಾಸ ಹೊಂದಿರುವ ಆಧಾರ್ ಕಾರ್ಡ್‌ಗಳ […]

Continue Reading

ಯಲ್ಲಾಪುರ: ಭೀಕರ ರಸ್ತೆ ಅಪಘಾತ 7 ಮಂದಿ ಸಾವು, ಡಿಸಿ ಲಕ್ಷ್ಮಿಪ್ರಿಯಾ, ಎಸ್ಪಿ ದೀಪನ್ ಸ್ಥಳಕ್ಕೆ ದೌಡು, ಪರಿಶೀಲನೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಆರತಿಬೈಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಸೂತಕದ ವಾತಾವರಣ ನಿರ್ಮಾಣ ಮಾಡಿದೆ. ಕ್ರೂಸರ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಪ್ರಯಾಣಿಸುವವರಲ್ಲಿ ಭಯ ಹುಟ್ಟಿಸಿದೆ. ಘಟನೆಯಲ್ಲಿ ಮೃತಪಟ್ಟವರು ಧಾರವಾಡದ ಬಸವರಾಜ್ ಕನಕನವರ್ (48), ಧಾರವಾಡ ಜಯನಗರದ ಅಭಿಷೇಕ ಈಶ್ವರ (28) ವರ್ಷ, ಸಾಧನಕೇರಿಯ ಅಕ್ಷಯ (26), ಸಪ್ತಾಪುರದ ಅಭಿಷೇಕ ಮಲ್ಲೇಶ ಮಡಬಾವಿ (26), ಕುರುಬಗಟ್ಟಿಯ ಸಂಜೀವ […]

Continue Reading

ಮಂಗಳೂರಿನಲ್ಲಿ ಅಗಸ್ಟ್ 2 ರಿಂದ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ ಷಿಪ್ ಹಬ್ಬ: ಡಾ. ಅಮರಶ್ರೀ ಅಮರನಾಥ ಶೆಟ್ಟಿ

ಮಂಗಳೂರು: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ವತಿಯಿಂದ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ ಷಿಪ್- ಅ. 2 ರಿಂದ 8 ರವರೆಗೆ ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಚೆಸ್ ಅಸೋಸಿಯೇಷನ್ ಅಧ್ಯಕ್ಷೆ ಡಾ. ಅಮರಶ್ರೀ ಅಮರನಾಥ ಶೆಟ್ಟಿ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ದೇಶದ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 600 ಕ್ಕೂ ಹೆಚ್ಚು ಮಂದಿ ಆಟಗಾರರು, ತರಬೇತುದಾರರು ಮತ್ತು ಪೋಷಕರು ಭಾಗವಹಿಸುವ ನಿರೀಕ್ಷೆ ಇದ್ದು, […]

Continue Reading

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕುರಿತು ಹರಿದಾಡುತ್ತಿರುವ ಆರೋಪಗಳು ಸುಳ್ಳು: ಜಿಲ್ಲಾ ಸರ್ಜನ್ ಡಾ. ಅಶೋಕ್ ಸ್ಪಷ್ಟನೆ

ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ದಾಖಲಾತಿ ಅಥವಾ ರಶೀದಿ ಇಲ್ಲದೆ ರಕ್ತ ವಿತರಿಸಲಾಗುತ್ತಿದೆ ಎಂಬ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತವಾಗಿದ್ದು, ರಕ್ತ ವಿತರಣೆಯ ಎಲ್ಲ ಪ್ರಕ್ರಿಯೆಗಳೂ ಸರ್ಕಾರದ ಮಾರ್ಗಸೂಚಿ ಮತ್ತು ಕಾನೂನು ನಿಯಮಾವಳಿಗಳ ಪ್ರಕಾರವೇ ನಡೆಯುತ್ತಿವೆ ಎಂದು ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ಸ್ಪಷ್ಟನೆ ನೀಡಿದ್ದಾರೆ. ಜುಲೈ 7 ರಂದು  ಜಾಲತಾಣಗಳಲ್ಲಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ಒಂದೇ ಬಾರಿ 15 ಯುನಿಟ್ ರಕ್ತವನ್ನು ಖಾಸಗಿ ಆಸ್ಪತ್ರೆಗೆ ಯಾವುದೇ ದಾಖಲಾತಿ ಇಲ್ಲದೆ […]

Continue Reading

ಎಂಎಸ್‌ಎಂಇಗಳ ಬೆಳವಣಿಗೆಗೆ ಬ್ಯಾಂಕಿಂಗ್ ಬೆಂಬಲ ಅಗತ್ಯ: ಸಿಎ ಎಸ್.ಎಸ್. ನಾಯಕ್

ಮಂಗಳೂರು: ಅಂತರರಾಷ್ಟ್ರೀಯ ಎಂಎಸ್‌ಎಂಇ ದಿನದ ಅಂಗವಾಗಿ ಮಂಗಳೂರಿನ ಎಸ್‌ಡಿಎಂ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಹಯೋಗದಲ್ಲಿ “ಎಂಎಸ್‌ಎಂಇ ಮತ್ತು ಬ್ಯಾಂಕಿಂಗ್ ವ್ಯವಸ್ಥೆ: ಭಾರತೀಯ ಆರ್ಥಿಕತೆಯ ಸಬಲೀಕರಣ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ […]

Continue Reading

ರಾಷ್ಟ್ರ ಮಟ್ಟಕ್ಕೆ ಮಂಗಳೂರಿನ ವೀವನ್ ಈಜು ಪಟುಗಳು, 18 ಪದಕಗಳ ಸಾಧನೆ

ಮಂಗಳೂರು: ಕರ್ನಾಟಕ ರಾಜ್ಯ ಈಜು ಸಂಸ್ಥೆ ಹಾಗೂ ವೀ ವನ್ ಅಕ್ವಾ ಸೆಂಟರ್ ಆಶ್ರಯದಲ್ಲಿ ಮಂಗಳೂರಿನ ಎಮ್ಮೆಕೆರೆ ಅಂತರ ರಾಷ್ಟ್ರೀಯ ಈಜುಕೊಳದಲ್ಲಿ ನಡೆದ ಎನ್‌ಆರ್‌ಜೆ ರಾಜ್ಯ ಸಬ್ ಜೂನಿಯರ್ ಈಜು ಸ್ಪರ್ಧೆಯಲ್ಲಿ ವೀ ವನ್ ಅಕ್ವಾ ಸೆಂಟರ್‌ ಈಜುಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಒಟ್ಟು 18 ಪದಕಗಳನ್ನು ಗೆದ್ದು ಗಮನ ಸೆಳೆದಿದ್ದಾರೆ. ಮೂರು ಮಂದಿ ಈಜುಪಟುಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶ್ವಿತಿ ದಿವಾಕರ್, ಅಲಿಟಾ ಡಿಸೋಜಾ ಹಾಗೂ ಸಿದ್ಧಿ ಶೆಟ್ಟಿ ಅವರು ಆಗಸ್ಟ್ 6ರಿಂದ 9ರವರೆಗೆ ಜೈಪುರದಲ್ಲಿ […]

Continue Reading