ಖಾದರ್ ಆರೋಗ್ಯ ಸಚಿವರಾದ ಬಳಿಕ ವೆನ್ಲಾಕ್ ನಲ್ಲಿ ಸಾಮಾನ್ಯ ಹಾಸಿಗೆಗೂ ಪರದಾಡಬೇಕು, ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ದುರ್ಬಲ: ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ದುರ್ಬಲವಾಗಿದ್ದು, ಈಗಾಗಲೇ ಘೋಷಿಸಿರುವ ಯೋಜನೆಗಳಿಗೂ ಅನುದಾನದ ಕೊರತೆ ಎದುರಾಗಿದೆ ಎಂದು ಆರ್ಥಿಕ ಇಲಾಖೆಯೇ ಮುಖ್ಯಮಂತ್ರಿಗೆ ಪತ್ರ ಬರೆದಿರುವಾಗ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊಸ ಯೋಜನೆಗಳಿಗೆ ಭಾರಿ ಮೊತ್ತದ ಅನುದಾನ ಘೋಷಿಸಿರುವುದು ಪ್ರಶ್ನಾರ್ಹ. ಯು.ಟಿ. ಖಾದರ್ ಅವರು ಸ್ಪೀಕರ್ ಆಗಿದ್ದಾಗ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸಿಯು ಹಾಸಿಗೆಗಳ ಕೊರತೆ ಇತ್ತು, ಆದರೆ ಅವರು ಆರೋಗ್ಯ ಸಚಿವರಾದ ಬಳಿಕ ಸಾಮಾನ್ಯ ಹಾಸಿಗೆಗಳಿಗೂ ಜನರು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ ಎಂದು ಶಾಸಕ ವೇದವ್ಯಾಸ […]

Continue Reading

ಎಂಆರ್‌ಪಿಎಲ್ ಸ್ಫೋಟ, ಉನ್ನತ ಮಟ್ಟದ ತನಿಖೆ, ಸಂತ್ರಸ್ತರಿಗೆ ಪರಿಹಾರಕ್ಕೆ ಕ್ರಮ: ಸಚಿವ ಯು.ಟಿ. ಖಾದರ್

ಮಂಗಳೂರು: ಎಂಆರ್‌ಪಿಎಲ್ ಘಟಕದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಫೋಟದ ಘಟನೆ ಕುರಿತು ಮುಖ್ಯಮಂತ್ರಿ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆಗಾಗಿ ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದು, ಗುರುವಾರ ತನಿಖಾ ಅಧಿಕಾರಿಗಳ ಹೆಸರನ್ನು ಪ್ರಕಟಿಸುವ […]

Continue Reading

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ:, ಒಬ್ಬನ ಸಾವು, 9 ಕಾರ್ಮಿಕರಿಗೆ ಗಾಯ

ಮಂಗಳೂರು: ಇಲ್ಲಿನ ಹೊರವಲಯದ ಜೋಕಟ್ಟೆ ಸಮೀಪದ ಎಂಆರ್‌ಪಿಎಲ್‌ ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದ ಶಬ್ದಕ್ಕೆ ಮಂಗಳೂರು ಸೇರಿದಂತೆ ಸುತ್ತಲಿನ ಹಲವು ಪ್ರದೇಶಗಳು ಬೆಚ್ಚಿಬಿದ್ದಿವೆ.ಘಟಕದಲ್ಲಿ ಪರೀಕ್ಷೆ ನಡೆಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ತೀವ್ರ ಗಾಯಗಳಾಗಿದ್ದು, 8 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಫೋಟದ ಬಳಿಕ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಮೃತ ವ್ಯಕ್ತಿಯನ್ನು ಮನೀಶ್ ಕರ್ಕೇಡ (30) ಎಂದು ತಿಳಿದು ಬಂದಿದ್ದು, ಈ ವ್ಯಕ್ತಿ ಗುತ್ತಿಗೆ ಆಧಾರದ […]

Continue Reading

ಎಂಆರ್‌ಪಿಎಲ್‌ ಬೆಂಕಿ ಅವಘಡ:ಒಬ್ಬರ ಮೃತದೇಹ ಪತ್ತೆ, ಎಂಆರ್ ಪಿಎಲ್ ಪ್ರಕಟಣೆ

ಮಂಗಳೂರು: ನಗರದ ಹೊರವಲಯದ ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬೆಂಕಿ ಅವಘಡದ ಬಳಿಕ ನಡೆಸಿದ ಶೋಧ ಕಾರ್ಯದಲ್ಲಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬರು ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಂಆರ್ ಪಿಎಲ್ ಸಾರ್ವಜನಿಕ ಸಂಪರ್ಕಾಧಿಕಾರಿ ರುಡಾಲ್ಫ್ ನೊರೊನ್ಹಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಘಟಕದಲ್ಲಿ ಹೆಚ್ಚಿನ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೀತ ವಿಭಜಕ ಸ್ಫೋಟಗೊಂಡ ಪರಿಣಾಮ ಮಧ್ಯಾಹ್ನ 12.20ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಘಟಕದ ವ್ಯಾಪ್ತಿಯನ್ನು ತಕ್ಷಣ ಪ್ರತ್ಯೇಕಿಸಿ, ಸಂಸ್ಥೆಯ ತುರ್ತು ಪ್ರತಿಕ್ರಿಯಾ […]

Continue Reading

ಯೋನೆಕ್ಸ್ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಕ್ರೀಡಾಕೂಟ: ಸಂತೋಷ್ ಕುಮಾರ್ ಶೆಟ್ಟಿ ಮುಂದಾಳತ್ವ

ಮಂಗಳೂರು: ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್‌ ವತಿಯಿಂದ ಸೆ.27ರಂದು ಆಯೋಜಿಸಿದ್ದ ಯೋನೆಕ್ಸ್ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಸಬ್ ಜೂನಿಯರ್ ಹಾಗೂ ಜೂನಿಯರ್ ಬ್ಯಾಡ್ಮಿಂಟನ್ ಕ್ರೀಡಾಕೂಟವು ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಬ್ ಜೂನಿಯರ್ ಹಾಗೂ ಜೂನಿಯರ್ ವಿಭಾಗದ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಯುವ ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಕ್ರೀಡಾಕೂಟ ಉತ್ತಮ ವೇದಿಕೆಯಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳು […]

Continue Reading

Thumbay Hospital Fujairah reports encouraging results from awake spine fusion

Mangalore/Fujairah: Thumbay Hospital Fujairah has reported encouraging results following an awake lumbar spine fusion procedure performed on a patient suffering from sciatica, reinforcing its specialised services in spine and pain management. The procedure was carried out by Dr Hillol Kanti Pal, Consultant Neurosurgeon, with support from Dr Azharuddin Mohammad and Dr Ravindra Reddy, Specialists in […]

Continue Reading

ಸಿಪಿಸಿ ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿಗಳ ಸಂಘದ 28ನೇ ವಾರ್ಷಿಕ ಮಹಾಸಭೆ, ಅಪ್ರಾಪ್ತ ವಯಸ್ಸಿನಲ್ಲಿ ವಾಹನ ಚಾಲನೆ ಬೇಡ: ಜೆ.ಪಿ. ಗಂಗಾಧರ್

ಮೈಸೂರು: ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿಗಳ ಸಂಘದ 28ನೇ ವಾರ್ಷಿಕ ಮಹಾಸಭೆ ನಗರದ ಸಂಘದ ಕಟ್ಟಡದಲ್ಲಿ ನಡೆಯಿತು. ಸಂಸ್ಥೆಯ ಪ್ರಾಂಶುಪಾಲೆ ರಾಜೇಶ್ವರಿ ಎಂ.ಯು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರೊ. ಡಿ. ಆನಂದ್ ಹಾಗೂ ಎಸ್. ಅನಂತ್ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಎನ್.ಎಸ್. ಬಸವರಾಜ್ ಸ್ವಾಗತಿಸಿದರು. ಬಳಿಕ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು. 15 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ 15 ವಿದ್ಯಾರ್ಥಿಗಳಿಗೆ ತಲಾ ₹5,000 ನಗದು ಬಹುಮಾನ ನೀಡಿ […]

Continue Reading

ವೆನ್ಲಾಕ್‌ ಆಸ್ಪತ್ರೆಗೆ 400 ಹಾಸಿಗೆ ಹೆಚ್ಚಳ ಸರಕಾರದ ಅನುಮೋದನೆ, ಸಂಪುಟದ ನಿರ್ಣಯಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಇಲ್ಲಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಹೆಚ್ಚುವರಿ 400 ಹಾಸಿಗೆಯ ಹೆಚ್ಚಳದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಮೊದಲ ಹಂತದಲ್ಲಿ 200 ಹಾಸಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಸ್ತಾವನೆ ಹಾಗೂ ಸಚಿವ ಸಂಪುಟದ ನಿರ್ಣಯದ ಆಧಾರದಲ್ಲಿ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಆಸ್ಪತ್ರೆಯ ಅಭಿವೃದ್ಧಿ ಕಾಮಗಾರಿಯನ್ನು ಹಂತ ಹಂತವಾಗಿ ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಮೊದಲ ಹಂತದಲ್ಲಿ 200 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗುವುದು. ಈ ಹಂತಕ್ಕೆ 200 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಹೊಸ […]

Continue Reading

ಎಸ್ ಐಟಿ ಮುಖ್ಯಸ್ಥರಾಗಿ ಎನ್. ಶಶಿಕುಮಾರ್ ನೇಮಕ

ಬೆಂಗಳೂರು: ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರಕಾರ ಎಸ್ಐಟಿ ರಚಿಸಿದ್ದು, ಪೊಲೀಸ್ ಮಹಾ ನಿರೀಕ್ಷಕ ಎನ್. ಶಶಿಕುಮಾರ್ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಸದಸ್ಯರಾಗಿ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕ ಲೋಕೇಶ್ ಜಗಲಸಾರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಅವರನ್ನು ಎಸ್.ಐ.ಟಿ ತಂಡದ ಸದಸ್ಯರಾಗಿ ನೇಮಿಸಿ ಸರಕಾರ ಆದೇಶ […]

Continue Reading

ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಶಿವಕುಮಾರ್

ಬೆಂಗಳೂರು: ಈ ಬಾರಿಯ ನಾಡ ಹಬ್ಬ ಮೈಸೂರು ದಸರಾವನ್ನು ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸದನದಲ್ಲಿ ಘೋಷಿಸಿದರು. ವಿಧಾನಸಭೆಯಲ್ಲಿ ಗುರುವಾರ ನಡೆದ ಬರಗಾಲದ ಚರ್ಚೆ ವೇಳೆ ಉತ್ತರಿಸಿದ ಅವರು ಈ ವಿಚಾರ ತಿಳಿಸಿದ್ದು, ಇದೇ ವೇಳೆ ಸಿಎಂ ಸದನದ ಎಲಲಾ ಸದಸ್ಯರನ್ನು ದಸರಾ ಉತ್ಸವಕ್ಕೆ ಆಹ್ವಾನಿಸಿದರು. ಈ ಬಾರಿ ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ಉದ್ಘಾಟನೆ ಮಾಡಬೇಕು ಎಂದು ಆಹ್ವಾನ ಪತ್ರ ಕಳುಹಿಸಿದ್ದೇನೆ. ಅವರ ಜೊತೆ ದೂರವಾಣಿ ಮೂಲಕವೂ […]

Continue Reading