ಎತ್ತಿನಹೊಳೆ ಯೋಜನೆಯ ವೈಜ್ಞಾನಿಕ ಸಮೀಕ್ಷೆ ನಡೆಸಿ: ವೇಕಾನಂದ ಸಾಲಿನ್ಸ್

ಮಂಗಳೂರು: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರುಣಿಸುವ ಉದ್ದೇಶದಿಂದ ಆರಂಭಿಸಿರುವ ಎತ್ತಿನಹೊಳೆ ಯೋಜನೆ ಕುರಿತು ಸಮಗ್ರ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಹಾಗೂ ಕರಾವಳಿಯ ಪರಿಸರ ವ್ಯವಸ್ಥೆ ರಕ್ಷಿಸಲು ಸರ್ಕಾರ ಖಚಿತ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಉಡುಪಿ ವಾರಾಹಿ ನೀರಾವರಿ ಯೋಜನೆ, ಎಡದಂಡೆ ಕಾಲುವೆ ಹಾಗೂ ಅಕ್ವಿಡಕ್ಟ್ ಯೋಜನೆಗಳಿಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚವಾಗಿದ್ದರೂ ನಾಲ್ಕು ದಶಕಗಳ ಬಳಿಕವೂ ಪೂರ್ಣಗೊಂಡಿಲ್ಲ. ಇದೇ ರೀತಿಯಾಗಿ […]

Continue Reading

ವಿಧಾನ ಪರಿಷತ್ ಫೈಟ್: ಕಾಂಗ್ರೆಸ್‌ಗೆ 5 ಸ್ಥಾನಗಳ ಭರ್ಜರಿ ಗೆಲುವು, ಅಡ್ಡ ಮತದಾನ ಓಟಿಂಗ್ ಏಟು, ಮೈತ್ರಿ ಸದಸ್ಯರಿಂದಲೇ ಕೈಗೆ ಮತ, ಜೆಡಿಎಸ್ ಗೆ ಹೀನಾಯ ಸೋಲು

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ಐವರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಚುನಾವಣಾ ಫಲಿತಾಂಶವು ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣ ಆಗಿದೆ. ಚುನಾವಣೆಯಲ್ಲಿ ಮೈತ್ರಿ ಪಕ್ಷದ ಕೆಲವು ಶಾಸಕರು ಅಡ್ಡಮತದಾನ ಮಾಡಿರುವುದು ಫಲಿತಾಂಶದ ಮೇಲೆ ಮಹತ್ವದ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. ಬಿಜೆಪಿ 3 ರಿಂದ 4 ಮಂದಿ ಹಾಗೂ ಜೆಡಿಎಸ್‌ 6 ರಿಂದ 7 ಮಂದಿ ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ ಎಂಬ ಮಾಹಿತಿ ಲಭ್ಯ […]

Continue Reading

ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಆಯೋಗ ಬದ್ದ: ಯು. ನಿಸಾರ್ ಅಹಮದ್

ಕಾರವಾರ: ರಾಜ್ಯದಲ್ಲಿನ ಅಲ್ಪಸಂಖ್ಯಾತರ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸದಿದ್ದರೆ ಅವರನ್ನು ಆಯೋಗಕ್ಕೆ ಕರೆಸಿ ನಿರ್ದೇಶನ ನೀಡುವ ಹಾಗೂ ಅಗತ್ಯವಿದ್ದರೆ ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿನ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ, ಸಿಖ್ […]

Continue Reading

ಜೋಯಿಡಾ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಭೀಕರ ಡಿಕ್ಕಿ; 10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

ಕಾರವಾರ( ಜೋಯಿಡಾ): ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪೋಲಿ ಸಮೀಪ ಗುರುವಾರ ಬೆಳಿಗ್ಗೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣ ಆಗಿದ್ದು, ಕಾರವಾರ–ಜೋಯಿಡಾ ರಸ್ತೆಯ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಉಳವಿ–ಇಚಲಕರಂಜಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೆಳಗಾವಿ–ಕಾರವಾರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಚಾಪೋಲಿ ಸಮೀಪ ಈ ಅಪಘಾತ ಸಂಭವಿಸಿದೆ. ಡಿಕ್ಕಿ ತೀವ್ರತೆಗೆ ಎರಡೂ ಬಸ್‌ಗಳ ಮುಂಭಾಗ […]

Continue Reading

ಸಾರಿಗೆ ಇಲಾಖೆಯ ಪರಿವಾಹನ್’ ‘ಸಾರಥಿ’ ಸರ್ವರ್‌ ಹಾವು – ಏಣಿ ಆಟ, ನೋಂದಣಿಗಾಗಿ ಜನರ ಪರದಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸೇರಿದಂತೆ ರಾಜ್ಯದಾದ್ಯಂತ ಪರಿವಾಹನ್’ ಮತ್ತು ‘ಸಾರಥಿ’ ಸರ್ವರ್‌ಗಳ ಪದೇ ಪದೇ ಡೌನ್ ಆಗುವುದರಿಂದ ಸಾರಿಗೆ ಇಲಾಖೆಗೆ ಸಂಬಂಧಿಸಿದ ಆರ್‌ಟಿಒ ಕೆಲಸಗಳು ಮತ್ತು ಚಾಲನಾ ಪರವಾನಗಿ ಕಾರ್ಯಗಳಿಗೆ ಸಾರ್ವಜನಿಕರು ಪರದಾಡುವಂತಾಗಿದೆ. ಸಾರಿಗೆ ಇಲಾಖೆಯ ಸರ್ವರ್ ಡೌನ್ ಕಣ್ಣಾಮುಚ್ಚಾಲೆ ಕಳೆದ ಗುರುವಾರದಿಂದಲೇ ಶುರುವಾಗಿದೆ ಎಂಬ ಮಾಹಿತಿ ಇದೆ. ಗಂಟೆಗೊಮ್ಮೆ ಸರ್ವರ್ ಡೌನ್‌ ಆಗುತ್ತಿರುವುದರಿಂದ ಸಾರಿಗೆ ಇಲಾಖೆಯ ಕೆಲಸ ಕಾರ್ಯಗಳಿಗೆ ಬರುವ ಜನರು ಹಿಡಿಶಾಪ ಹಾಕಿ ವಾಪಸ್ ಆಗುವಂತಹ ಸ್ಥಿತಿ ನಿರ್ಮಾಣ ಆಗಿದೆ. ರಾಷ್ಟ್ರಮಟ್ಟದ ಪರಿವಾಹನ್ […]

Continue Reading

ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ಭಾರತೀಯ ಹಡಗು ವಿರಾಟ್-1: 14 ನಾವಿಕರು ಸುರಕ್ಷಿತ ರಕ್ಷಣೆ

ಮಸ್ಕತ್: ತಾಂತ್ರಿಕ ವೈಫಲ್ಯದಿಂದ ಒಮಾನ್ ಕರಾವಳಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸ್ಥಿತಿಗೆ ತಲುಪಿದ್ದ ಭಾರತೀಯ ವ್ಯಾಪಾರಿ ಹಡಗು ವಿರಾಟ್-1ನಲ್ಲಿದ್ದ 14 ನಾವಿಕರನ್ನು ಅಮೆರಿಕ ನೌಕಾಪಡೆ ಯಶಸ್ವಿಯಾಗಿ ರಕ್ಷಿಸಿದ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದು ಉತ್ತಮ ಆರೋಗ್ಯದಲ್ಲಿದ್ದಾರೆ ಎಂದು ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ನಂತರ ಅವರನ್ನು ಮುಂಬೈಗೆ ತೆರಳುತ್ತಿದ್ದ ಮತ್ತೊಂದು ಹಡಗಿಗೆ ಸ್ಥಳಾಂತರಿಸಲಾಗಿದೆ. ಮಧ್ಯಪ್ರಾಚ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಜೂನ್ 14ರಂದು ಅರಬ್ಬಿ ಸಮುದ್ರದಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿದ್ದ […]

Continue Reading

ಚಿನ್ನಯ್ಯ ಜಾಮೀನು ರದ್ದತಿಗೆ ಮಟ್ಟಣ್ಣವರ್ ತಂಡದಿಂದ ಎಸ್ ಐಟಿಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೆ, ಜಾಮೀನು ಷರತ್ತು ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ನೇತೃತ್ವದ ತಂಡವು ಬೆಳ್ತಂಗಡಿ ಎಸ್‌ಐಟಿ ದೂರು ಸಲ್ಲಿಸಿದೆ. ಎಸ್‌ಐಟಿ ಕಚೇರಿಗೆ ಭೇಟಿ ನೀಡಿದ ತಂಡ, ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಆಗ್ರಹಿಸಿತು. ಅಲ್ಲದೆ, ಪ್ರಕರಣದ ಸತ್ಯಾಸತ್ಯತೆ ಹೊರಬರಲು ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಮನವಿ ಮಾಡಿತು. ಹೈಕೋರ್ಟ್‌ಗೆ ಸಲ್ಲಿಸಿರುವ ಹೇಳಿಕೆಯನ್ನು […]

Continue Reading

ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ: ಐವನ್ ಡಿಸೋಜ

ಮಂಗಳೂರು: ಬಿಜೆಪಿಯು ವೋಟ್ ಚೋರಿ ಜತೆಗೆ ಸೀಟ್ ಚೋರಿಯನ್ನೂ ನಡೆಸುತ್ತಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ ತಂದಿದೆ ಎಂದರು. ಜಾರ್ಖಂಡ್‌ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ನಾಮಪತ್ರದ ದೋಷ ಸರಿಪಡಿಸಲು ಅವಕಾಶ ನೀಡಿದ್ದರೂ, ಮೀನಾಕ್ಷಿ ನಟರಾಜನ್ ಅವರಿಗೆ ಅದೇ ಅವಕಾಶ […]

Continue Reading

ಬ್ಯಾಂಕ್ ಆಫ್ ಬರೋಡಾದ ಹೊಸ ವಿಶೇಷ ಉಳಿತಾಯ ಖಾತೆ; ಆರೋಗ್ಯ ಸೇವೆ, ಮನೆಬಾಗಿಲು ಬ್ಯಾಂಕಿಂಗ್ ಸೌಲಭ್ಯ

ಮಂಗಳೂರು: ಹಿರಿಯ ನಾಗರಿಕರ ಆರೋಗ್ಯ ಮತ್ತು ಆರ್ಥಿಕ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕ್ ಆಫ್ ಬರೋಡಾ ‘ಬಿಒಬಿ ಹಿರಿಯ ನಾಗರಿಕ ವಿಶೇಷ ಸಮ್ಮಾನ’ ಹೆಸರಿನ ಹೊಸ ವಿಶೇಷ ಉಳಿತಾಯ ಖಾತೆಯನ್ನು ಪರಿಚಯಿಸಿದೆ. 60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಗ್ರಾಹಕರಿಗಾಗಿ ರೂಪಿಸಲಾದ ಈ ಖಾತೆಯು ಆರೋಗ್ಯ ಸೇವೆಗಳ ಪ್ರಯೋಜನಗಳು, ಉಚಿತ ಮನೆಬಾಗಿಲು ಬ್ಯಾಂಕಿಂಗ್ ಸೇವೆಗಳು ಹಾಗೂ ಹಲವು ಬ್ಯಾಂಕಿಂಗ್ ಮತ್ತು ಜೀವನಶೈಲಿ ಸೌಲಭ್ಯಗಳನ್ನು ಒಂದೇ ಯೋಜನೆಯಡಿ ಒದಗಿಸುತ್ತದೆ. ಈ ಖಾತೆಯ ಮೂಲಕ ಗರಿಷ್ಠ ಆರು ಕುಟುಂಬ ಸದಸ್ಯರು […]

Continue Reading

ಎಂಸಿಸಿ ಬ್ಯಾಂಕ್‌ಗೆ ಐತಿಹಾಸಿಕ ಶೇ 25 ರಷ್ಟು ಸಾಧನೆ, ಸಾಧಕರಿಗೆ ಪ್ರಶಸ್ತಿ ಪ್ರದಾನ

ಮಂಗಳೂರು: ಎಂಸಿಸಿ ಬ್ಯಾಂಕ್‌ನ 2025-26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ವ್ಯವಸ್ಥಾಪಕ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಂಸಿಸಿ ಬ್ಯಾಂಕ್ ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಹಾಗೂ ಅಮೂಲ್ಯ ಸಂಸ್ಥೆ ಆಗಿದೆ. ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ಅವರ ನಾಯಕತ್ವ, ನಿರ್ದೇಶಕರ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿ ಸಮರ್ಪಿತ ಸೇವೆ ಶ್ಲಾಘಿಸಿದರು. ಅಧ್ಯಕ್ಷ ಅನಿಲ್ ಲೋಬೊ ಅವರು ಮಾತನಾಡಿ, 2025-26ನೇ […]

Continue Reading