ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕುರಿತು ಹರಿದಾಡುತ್ತಿರುವ ಆರೋಪಗಳು ಸುಳ್ಳು: ಜಿಲ್ಲಾ ಸರ್ಜನ್ ಡಾ. ಅಶೋಕ್ ಸ್ಪಷ್ಟನೆ

ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ದಾಖಲಾತಿ ಅಥವಾ ರಶೀದಿ ಇಲ್ಲದೆ ರಕ್ತ ವಿತರಿಸಲಾಗುತ್ತಿದೆ ಎಂಬ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತವಾಗಿದ್ದು, ರಕ್ತ ವಿತರಣೆಯ ಎಲ್ಲ ಪ್ರಕ್ರಿಯೆಗಳೂ ಸರ್ಕಾರದ ಮಾರ್ಗಸೂಚಿ ಮತ್ತು ಕಾನೂನು ನಿಯಮಾವಳಿಗಳ ಪ್ರಕಾರವೇ ನಡೆಯುತ್ತಿವೆ ಎಂದು ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ಸ್ಪಷ್ಟನೆ ನೀಡಿದ್ದಾರೆ. ಜುಲೈ 7 ರಂದು  ಜಾಲತಾಣಗಳಲ್ಲಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ಒಂದೇ ಬಾರಿ 15 ಯುನಿಟ್ ರಕ್ತವನ್ನು ಖಾಸಗಿ ಆಸ್ಪತ್ರೆಗೆ ಯಾವುದೇ ದಾಖಲಾತಿ ಇಲ್ಲದೆ […]

Continue Reading

ಕ್ಷಣಿಕ ಸುಖಕ್ಕೆ ಮಾದಕ ವ್ಯಸನ ಬೇಡ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಕಿವಿಮಾತು

ಕಾರವಾರ: ಕ್ಷಣಿಕ ಸುಖಕ್ಕಾಗಿ ಯುವಜನತೆ ಮಾದಕ ದ್ರವ್ಯ ಹಾಗೂ ಮದ್ಯಪಾನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ವಿದ್ಯಾರ್ಥಿಗಳು ಇಂತಹ ವ್ಯಸನಗಳಿಂದ ಸಂಪೂರ್ಣ ದೂರವಿರಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಹೇಳಿದರು. ನಗರದ ಬಿಣಗಾದ ಸೋಮನಾಥ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ನಡೆದ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ಷಣಿಕ ಸಂತೋಷಕ್ಕಾಗಿ ಕೆಲವರು ಮಾದಕ ದ್ರವ್ಯ ಮತ್ತು ಮದ್ಯಪಾನದ ಮೊರೆ ಹೋಗುತ್ತಾರೆ. ಆದರೆ ಅದು ಅವರ ಶಿಕ್ಷಣ ಹಾಗೂ ಭವಿಷ್ಯದ […]

Continue Reading

ಲೇಡಿಗೋಷನ್ ಆಸ್ಪತ್ರೆಗೆ ಆಧುನಿಕ ಸ್ಪರ್ಶ: ಸುಸಜ್ಜಿತ ವಿಡಿಯೊ ಕಾನ್ಫರೆನ್ಸ್ ಹಾಲ್, ನೂತನ ಸಭಾಗೃಹ

ಮಂಗಳೂರು: ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳ ಜತೆಗೆ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಮಾರ್ಪಡಿತ ವಿಡಿಯೋ ಕಾನ್ಫರೆನ್ಸ್ ಹಾಲ್ ಹಾಗೂ ಆಧುನೀಕೃತ ಸಭಾಗೃಹ ಸೌಲಭ್ಯವನ್ನು ಅಭಿವೃದ್ಧಿಪಡಿಸಲಾಗಿದೆ. ಈ ವಿಡಿಯೋ ಕಾನ್ಫರೆನ್ಸ್ ಹಾಲ್‌ನ್ನು ಈ ಹಿಂದೆ ಲಯನ್ಸ್ ಕ್ಲಬ್ ಇಂಟರ್ನೇಶನಲ್ ಸಂಸ್ಥೆಯ ಸಹಕಾರದೊಂದಿಗೆ, ಅಂದಿನ ಲಯನ್ಸ್ ಗವರ್ನರ್ ವಸಂತ್ ಶೆಟ್ಟಿ ಅವರ ಅನುದಾನದ ಮೂಲಕ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾಗಿತ್ತು. ಇದೀಗ ಹೆಚ್ಚುವರಿ ತಾಂತ್ರಿಕ ಸೌಲಭ್ಯಗಳ ಅಳವಡಿಕೆಯಿಂದ ಸಭಾಂಗಣವು ಇನ್ನಷ್ಟು […]

Continue Reading

ಅತ್ತಾವರ ಕೆಎಂಸಿ ಆಸ್ಪತ್ರೆಗೆ ಎನ್‌ಎಬಿಎಚ್ 6 ನೇ ಆವೃತ್ತಿಯ ಪ್ರತಿಷ್ಠಿತ ಮಾನ್ಯತೆ

ಮಂಗಳೂರು: ಇಲ್ಲಿನ ಅತ್ತಾವರ ಕೆಎಂಸಿ ಆಸ್ಪತ್ರೆ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಗೆ ಸಂಬಂಧಿಸಿದ ಎನ್‌ಎಬಿಎಚ್ (ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್‌ಕೇರ್ ಪ್ರೊವೈಡರ್ಸ್) 6 ನೇ ಆವೃತ್ತಿಯ ಮಾನದಂಡಗಳ ಅಡಿಯಲ್ಲಿ ಪ್ರತಿಷ್ಠಿತ ಮಾನ್ಯತೆ ಪಡೆದುಕೊಂಡಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಅಂಗ ಸಂಸ್ಥೆ ಆಗಿರುವ ಎನ್‌ಎಬಿಎಚ್ ಈ ಮಾನ್ಯತೆಯನ್ನು ನೀಡಿದ್ದು, ಆಸ್ಪತ್ರೆ 610 ಮಂಜೂರಾದ ಹಾಸಿಗೆಗಳ ವ್ಯಾಪ್ತಿಯಲ್ಲಿ ರೋಗಿಗಳ ಸುರಕ್ಷತೆ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನಿರಂತರವಾಗಿ ಒದಗಿಸುತ್ತಿರುವುದನ್ನು ಗುರುತಿಸಿ ಗೌರವಿಸಿದೆ. ಕೆಎಂಸಿ ಆಸ್ಪತ್ರೆ […]

Continue Reading

ಉಕ ಜಿಲ್ಲೆಯಲ್ಲಿ 873 ಲಸಿಕಾ ಕೇಂದ್ರ, 28ಕ್ಕೆ ಪಲ್ಸ್ ಪೊಲಿಯೋ ಅಭಿಯಾನ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಉ.ಕ ಜಿಲ್ಲೆಯಾದ್ಯಂತ ಇದೇ 28 ರಂದು ನಡೆವ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಯಶಸ್ವಿಗೊಳಿವುದಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ತಲುಪಬೇಕು ಹಾಗೂ ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟು 873 ಲಸಿಕಾ […]

Continue Reading

ವಿಶ್ವ ಯೋಗ ದಿನ, ಕಾರಿಂಜೇಶ್ವರ ಬೆಟ್ಟದಲ್ಲಿ ಯೋಗ ವಿದ್ ಯೋಧ ಕಾರ್ಯಕ್ರಮ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣ ಕಾರಿಂಜೇಶ್ವರ ಬೆಟ್ಟದಲ್ಲಿ ‘ಯೋಗ ವಿದ್ ಯೋಧ’ ಬೃಹತ್ ಯೋಗಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂನ್ 21ರಂದು 3 ಗಂಟೆಗೆ ಮಹಾತೋಭಾರ ಕಾರಿಂಜೇಶ್ವರ ದೇವಸ್ಥಾನದ ಆವರಣದಲ್ಲಿ 3ನೇ ಆವೃತ್ತಿಯ ಯೋಗ ವಿದ್ ಯೋಧ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ನಿವೃತ್ತ ಯೋಧರು, ಗಣ್ಯರು, ಯೋಗಾಸಕ್ತರು ಹಾಗೂ ಸಾರ್ವಜನಿಕರು […]

Continue Reading

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ಮೊದಲ ಜೆಂಡರ್ ಅಫರ್ಮಿಂಗ್ ಯಶಸ್ವಿ ಶಸ್ತ್ರಚಿಕಿತ್ಸೆ, ವೈದ್ಯರ ಸಾಧನೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಟ್ರಾನ್ಸ್ಜೆಂಡರ್ ಮಹಿಳೆಗೆ ಮೊದಲ ಬಾರಿಗೆ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಚೆಗೆ ನಡೆದ ಈ ಶಸ್ತ್ರಚಿಕಿತ್ಸೆ ನಂತರ ರೋಗಿ ವೈದ್ಯಕೀಯ ತಂಡದ ಆರೈಕೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಸಂಯುಕ್ತ ತಂಡವು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಎರಡೂ ವಿಭಾಗಗಳ ನಿಕಟ ಸಮನ್ವಯದಲ್ಲಿ ಹಲವು ಗಂಟೆಗಳ ಕಾಲ ಕಾರ್ಯ ನಡೆದಿದೆ. ಪ್ಲಾಸ್ಟಿಕ್ ಸರ್ಜರಿ ವಿಭಾಗವು ಇದಕ್ಕೂ ಮುನ್ನ ಮುಖದ ಸ್ತ್ರೀಕರಣ ಮತ್ತು […]

Continue Reading

ರೋಗಿಗಳ ಸುರಕ್ಷತೆಗಾಗಿ ಪರಿಣಾಮಕಾರಿ ಕ್ರಮಗಳ ಅನುಷ್ಠಾನ ಮುಖ್ಯ: ಡೀನ್ ಡಾ. ಪೂರ್ಣಿಮಾ

ಕಾರವಾರ: ಆರೋಗ್ಯ ಸಂಸ್ಥೆಗಳಲ್ಲಿ ರೋಗಿಗಳ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೋಂಕು ತಡೆ ಹಾಗೂ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕಿ ಡಾ. ಪೂರ್ಣಿಮಾ ಆರ್.ಟಿ. ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಗುಣಮಟ್ಟ ಭರವಸೆ ಘಟಕ ಹಾಗೂ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಕ್ಷ್ಮಜೀವಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಆಸ್ಪತ್ರೆ ಸೋಂಕು ನಿಯಂತ್ರಣ […]

Continue Reading

ಮಂಗಳೂರಿನ ವೆನ್ಲಾಕ್‌, ಲೇಡಿಗೋಷನ್‌ಗೆ ಸ್ಟಾಫ್ ನರ್ಸ್ ನೇಮಕ ಶೀಘ್ರ: ಸಚಿವ ಯು. ಟಿ. ಖಾದರ್

ಮಂಗಳೂರು: ನಗರದ ವೆನ್ಲಾಕ್ ಹಾಗೂ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಗಳಲ್ಲಿ ಉಂಟಾಗಿರುವ ಸ್ಟಾಫ್ ನರ್ಸ್ ಕೊರತೆಯನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಲೇಡಿಗೋಷನ್ ಹೆರಿಗೆ ಆಸ್ಪತ್ರೆಗೆ 22 ಹಾಗೂ ವೆನ್ಲಾಕ್ ಆಸ್ಪತ್ರೆಗೆ 10 ಸ್ಟಾಫ್ ನರ್ಸ್‌ಗಳ ತುರ್ತು ಅಗತ್ಯವಿದೆ. ತಲಾ17 ಸಾವಿರ ವೇತನದ ಆಧಾರದಲ್ಲಿ ತಕ್ಷಣ ನೇಮಕಾತಿ ಆದೇಶ […]

Continue Reading

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಅಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯವಿದ್ದು, ಬಿಪಿಎಲ್ ಕಾರ್ಡ್ ಹಾಗೂ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಇದರ ಪ್ರಯೋಜನ ಪಡೆಯಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎದೆನೋವು, ಉಸಿರಾಟದ ತೊಂದರೆ, ಅತಿಯಾದ ದಣಿವು, ಹೃದಯ ಬಡಿತದ ಅಸಮಾನತೆ ಸೇರಿದಂತೆ ಹೃದಯ ಸಂಬಂಧಿತ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ […]

Continue Reading