ಶಿಶುಗಳ ಚರ್ಮದ ಆರೈಕೆ ಕುರಿತು ಜಾಗೃತಿ ಅಭಿಯಾನ ಆರಂಭಿಸಿದ ಹಿಮಾಲಯ ಬೇಬಿಕೇರ್: ಚಕ್ರವರ್ತಿ ಎನ್.ವಿ.

ಮಂಗಳೂರು: ನವಜಾತ ಶಿಶುಗಳ ಸೂಕ್ಷ್ಮ ಚರ್ಮದ ಆರೈಕೆ ಹಾಗೂ ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಚರ್ಮದ ಸಮಸ್ಯೆಗಳ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಿಮಾಲಯ ಬೇಬಿಕೇರ್ ವಿಶೇಷ ಜಾಗೃತಿ ಅಭಿಯಾನ ಆರಂಭಿಸಿದೆ. ಅಭಿಯಾನದ ಅಂಗವಾಗಿ ಸಂಸ್ಥೆಯ ಜನಪ್ರಿಯ ಉತ್ಪನ್ನಗಳಾದ ಹಿಮಾಲಯ ಜೆಂಟಲ್ ಬೇಬಿ ಸೋಪ್ ಹಾಗೂ ಹಿಮಾಲಯ ರಿಫ್ರೆಷಿಂಗ್ ಬೇಬಿ ಸೋಪ್ ಕುರಿತು ಹೊಸ ಜಾಹೀರಾತು ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಜಾಹೀರಾತುಗಳು ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸಾರವಾಗುತ್ತಿವೆ. ಈ ಕುರಿತು ಹಿಮಾಲಯ ವೆಲ್‌ನೆಸ್ […]

Continue Reading

ಉಡುಪಿ ತಾಯಿ–ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ, 8 ಕೆ.ಜಿ. ಗರ್ಭಕೋಶದ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: ಜಿಲ್ಲಾ ಸರ್ಜನ್ ಡಾ. ಅಶೋಕ್

ಉಡುಪಿ: ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿದ್ದ ಬರೋಬ್ಬರಿ 8 ಕೆ.ಜಿ. ತೂಕದ ಫೈಬ್ರಾಯ್ಡ್ ಗಡ್ಡೆಯನ್ನು ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದು, ಇದೊಂದು ಸಾಧನೆಯೇ ಸರಿ ಎಂದು ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ತಿಳಿಸಿದರು. ಮಹಿಳೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಸಮಸ್ಯೆ ನಿವಾರಣೆಯಾಗದ ಹಿನ್ನೆಲೆಯಲ್ಲಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಆಗಮಿಸಿದ್ದರು. ವೈದ್ಯರು ಪರೀಕ್ಷಿಸಿದಾಗ ಅವರ […]

Continue Reading

ಮೂಳೆ ಇಂಪ್ಲಾಂಟ್‌ಗೆ ಎನ್‌ಐಟಿಕೆ ಸಂಶೋಧಕರಿಂದ ಹೊಸ ಲೇಪನ ತಂತ್ರಜ್ಞಾನ, ಮೇಕ್ ಇನ್ ಇಂಡಿಯಾ ಪೇಟೆಂಟ್ ಮಾನ್ಯತೆ ಗರಿ

ಸುರತ್ಕಲ್: ಇಲ್ಲಿನ ಸುರತ್ಕಲ್‌ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿಕೆ) ಸಂಶೋಧಕರು ಮೂಳೆ ಇಂಪ್ಲಾಂಟ್‌ಗಳಿಗಾಗಿ ಜೈವಿಕ ಸಕ್ರಿಯ, ಬಾಳಿಕೆ ಬರುವ ಹಾಗೂ ಆಂಟಿಮೈಕ್ರೊಬಿಯಲ್ ಗುಣ ಲಕ್ಷಣ ಹೊಂದಿರುವ ಸುಧಾರಿತ ಲೇಪನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಸೊಂಟ ಹಾಗೂ ಮೊಣಕಾಲು ಕೀಲು ಬದಲಿ ಮಾಡುವಲ್ಲಿ ಬಳಸಬಹುದಾದ ಈ ತಂತ್ರಜ್ಞಾನಕ್ಕೆ ಪೇಟೆಂಟ್ ದೊರೆತಿದ್ದು, ಸ್ಥಳೀಯ ಬಯೋಮೆಡಿಕಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಎಂದು ಪರಿಗಣಿಸಲಾಗಿದೆ. ಇಂಪ್ಲಾಂಟ್‌ಗೆ ಸಂಬಂಧಿಸಿದ ಸೋಂಕು, ಇಂಪ್ಲಾಂಟ್ ಸಡಿಲಗೊಳ್ಳುವಿಕೆ ಹಾಗೂ ದೀರ್ಘಕಾಲೀನ ಕಾರ್ಯಕ್ಷಮತೆಯ ಸವಾಲುಗಳನ್ನು ಮನಗಂಡು ಸಂಶೋಧನಾ ತಂಡ ಈ […]

Continue Reading

ಉಡುಪಿ ಸರಕಾರಿ ತಾಯಿ, ಮಕ್ಕಳ ಆಸ್ಪತ್ರೆಗೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ, ರೋಗಿಗಳ ಆರೋಗ್ಯ ವಿಚಾರಣೆ

ಉಡುಪಿ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಗರ್ಭೀಣಿ, ಬಾಣಂತಿ ರೋಗಿಗಳ ಕುಶಲೋಪರಿ ವಿಚಾರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅನುರಾಧ ಬಿ ಹಾದಿಮನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ […]

Continue Reading

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ನಮ್ಮ ಮೂಡುಬಿದಿರೆ, ನೇತಾಜಿ ಬ್ರಿಗೇಡ್, ಜೆಸಿಐ, ಮೂಡುಬಿದಿರೆ ಬಂಟರ ಮಹಿಳಾ ಸಂಘದ ಸದಸ್ಯರು ಭಾನುವಾರ ವಿದ್ಯಾಗಿರಿ-ಹನ್ಡೇಲು ಹಾಗೂ ವಿದ್ಯಾಗಿರಿ-ಪುತ್ತಿಗೆ ಪರಿಸರದ 5.5 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಸ್ವಚ್ಛ ಸಂಕಲ್ಪ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಅಧ್ಯಕ್ಷ ಅಶೋಕ ಅಡ್ಯಂತಾಯ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿ, ಸ್ವಚ್ಛತೆ ಎನ್ನುವುದು ಆರೋಗ್ಯಕರ ಸಮಾಜದ ಅಡಿಪಾಯ. ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ಇದೇ ಉದ್ದೇಶವನ್ನು ಮನಗಂಡು ಮೂಡುಬಿದಿರೆಯಲ್ಲಿ […]

Continue Reading

ಕಾರವಾರದಲ್ಲಿ ಜಿಲ್ಲಾ ಆಸ್ಪತ್ರೆ ಪ್ರಾರಂಭಕ್ಕೆ ಆಗ್ರಹಿಸಿ ಸಚಿವ ದಿನೇಶ್ ಗುಂಡೂರಾವ್ ಗೆ ಸೂರಜ ಕುರುಮಕರ ಮನವಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಇರುವ ಜಿಲ್ಲಾ ಆಸ್ಪತ್ರೆಯನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಜತೆಗೆ ವಿಲೀನ ಮಾಡಿರುವುದರಿಂದ ಜನರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿದ್ದು, ಸರಕಾರದ ಆರೋಗ್ಯ ಇಲಾಖೆಯ ಯೋಜನೆಗಳಿಂದ ವಂಚಿತರಾಗುವಂತಹ ಸ್ಥಿತಿ ನಿರ್ಮಾಣ ಆಗಿದ್ದು, ಈ ಆದೇಶವನ್ನು ಸರಕಾರ ಕೂಡಲೇ ರದ್ದು ಮಾಡಿ ಕಾರವಾರದಲ್ಲಿ ಜಿಲ್ಲಾ ಆಸ್ಪತ್ರೆ ಅಥವಾ ತಾಲ್ಲೂಕು ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಸೂರಜ ಮಧುಕರ ಕುರುಮಕರ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. […]

Continue Reading

10 ಸಾವಿರ ಡಯಾಲಿಸಿಸ್, ಕಟೀಲು ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯ ಐತಿಹಾಸಿಕ ಮೈಲುಗಲ್ಲು, ರೋಗಿಗಳಿಗೆ ರಿಯಾಯಿತಿ ಚಿಕಿತ್ಸೆ

ಮಂಗಳೂರು(ಕಟೀಲು): ದಕ್ಷಿಣ ಕನ್ನಡ ಜಿಲ್ಲೆಯ ಕಟೀಲಿನಲ್ಲಿ ಇರುವ ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯು ತನ್ನ ಡಯಾಲಿಸಿಸ್ ಘಟಕವು 2022 ರ ಜನವರಿಯಿಂದ ಇಂದಿನವರೆಗೆ ಯಶಸ್ವಿಯಾಗಿ 10,000 ಡಯಾಲಿಸಿಸ್ ಚಿಕಿತ್ಸೆ ಪೂರ್ಣಗೊಳಿಸುವ ಮೂಲಕ ಮಹತ್ವದ ಆರೋಗ್ಯ ಸೇವೆಯಲ್ಲಿ ಸಾಧನೆ ಮಾಡಿದೆ. ಈ ಸಾಧನೆ ಗ್ರಾಮೀಣ ಹಾಗೂ ಹಿಂದುಳಿದ ಸಮುದಾಯಗಳಿಗೆ ಗುಣಮಟ್ಟದ ಮೂತ್ರಪಿಂಡ ಚಿಕಿತ್ಸೆ ಸುಲಭ ಹಾಗೂ ಕೈಗೆಟುಕುವ ದರದಲ್ಲಿ ಒದಗಿಸುವ ಆಸ್ಪತ್ರೆಯ ಬದ್ಧತೆಗೆ ಸಾಕ್ಷಿಯಾಗಿದೆ. ದೇಶದ ಹೆಸರಾಂತ ಧಾರ್ಮಿಕ ಕೇಂದ್ರ ಕಟೀಲು, ಆಧುನಿಕ ಡಯಾಲಿಸಿಸ್ ಸೇವೆಗಳನ್ನು ನೀಡುವ ವಿಶೇಷ […]

Continue Reading

ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆ, ಸ್ಕ್ಯಾನಿಂಗ್ ವೇಳೆ ಕೇಂದ್ರಗಳಲ್ಲಿ ತಾಯಿ ಕಾರ್ಡ್ ಕಡ್ಡಾಯ: ಡಾ.ಎಚ್.ಆರ್ ತಿಮ್ಮಯ್ಯ ಸೂಚನೆ

ಮಂಗಳೂರು: ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಅವರು ಸೂಚನೆ ನೀಡಿದ್ದಾರೆ. ಶುಕ್ರವಾರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆ 1994 ಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. 18-19 ವರ್ಷದೊಳಗಿನ ಬಾಲ ಗರ್ಭಿಣಿಯರು ಕಂಡು ಬಂದಲ್ಲಿ, ಅವರ ಗರ್ಭಧಾರಣೆಯ ದಿನಾಂಕ ಮತ್ತು ವಯಸ್ಸಿನ ದೃಢೀಕರಣವನ್ನು ಖಚಿತಪಡಿಸಿಕೊಳ್ಳಬೇಕು. ಅಪ್ರಾಪ್ತ […]

Continue Reading

ಎಂಐಒ ಆಸ್ಪತ್ರೆಯ ಡಾ. ವಿಶ್ವಪ್ರಿಯಾ ಗೋದ್ಖಿಂಡಿಗೆ ಪ್ರತಿಷ್ಠಿತ ಯುರೋಪಿಯನ್ ಪೆಥಾಲಜಿ ಗೌರವ

ಮಂಗಳೂರು: ಇಲ್ಲಿನ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಅಂಕಾಲಜಿ (ಎಂಐಒ) ಆಸ್ಪತ್ರೆಯಲ್ಲಿ ಪೆಥಾಲಜಿ ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ವಿಶ್ವಪ್ರಿಯಾ ಗೋದ್ಖಿಂಡಿ ಅವರು ಯುರೋಪಿಯನ್ ಸೊಸೈಟಿ ಆಫ್ ಪೆಥಾಲಜಿ ಅಕಾಡೆಮಿ–2026 ರ ಗೌರವಕ್ಕೆ ಭಾಜನರಾಗಿದ್ದಾರೆ ಎಂದು ಎಂಐಒ ಆಸ್ಪತ್ರೆಯ ನಿರ್ದೇಶಕ ಡಾ. ಸುರೇಶ್ ರಾವ್ ಅವರು ತಿಳಿಸಿದ್ದಾರೆ. ಪೆಥಾಲಜಿ ಕ್ಷೇತ್ರದಲ್ಲಿ ಅವರ ಶೈಕ್ಷಣಿಕ ಹಾಗೂ ವೃತ್ತಿಪರ ಸಾಧನೆ ಗುರುತಿಸಿ ಈ ಗೌರವ ಲಭಿಸಿದೆ. 2026ನೇ ಸಾಲಿನಲ್ಲಿ ಯೂರೋಪಿಯನ್ ಸೊಸೈಟಿ ಆಫ್ ಪಥಾಲಜಿ ವತಿಯಿಂದ ಆಯ್ಕೆಯಾದ ಏಕೈಕ ಭಾರತೀಯ ಪ್ರಶಸ್ತಿ […]

Continue Reading

ಬಂಟ್ವಾಳ: ಎಂಡಿಎಂಎ ಸಾಗಣೆ ಪ್ರಕರಣ, ಇಬ್ಬರ ಬಂಧನ

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೋಳಂತೂರು ಗ್ರಾಮದ ಎನ್.ಸಿ.ರೋಡ್ ನಿವಾಸಿ ಮುಹಮ್ಮದ್ ನಿಝಾಮುದ್ದೀನ್ ಹಾಗೂ ಆತನ ಸಹೋದರ ಮಹಮ್ಮದ್ ಸಾಹೀಮ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ತಾಲೂಕಿನ ಮಂಚಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಮಾರು 42.30 ಲಕ್ಷ ರೂ. ಮೌಲ್ಯದ 423 ಗ್ರಾಂ ಎಂಡಿಎಂಎ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಸಾಗಣಗೆ ಬಳಸಲಾದ ವಾಹನ, 3 […]

Continue Reading