ಕೈ ಹೈಕಮಾಂಡ್ ಚಾಣಾಕ್ಷ ನಡೆ, ಸಿದ್ದು ಬಾಯಿಂದಲೇ ಡಿಕೆಶಿ ಹೆಸರು ಪ್ರಸ್ತಾಪ, ಡಿಕೆಶಿ ಸಿಎಲ್ ಪಿಗೆ ಅವಿರೋಧ ಆಯ್ಕೆ

ಬೆಂಗಳೂರು: ಕೈ ಹೈಕಮಾಂಡ್ ಕೊನೆಗೂ ತನ್ನ ಚಾಣಾಕ್ಷ ನಡೆಯಿಂದ ಅಧಿಕಾರ ಹಂಚಿಕೆಯ ಬಿಕ್ಕಟ್ಟನ್ನು ಪರಿಹಾರ ಮಾಡುವಲ್ಲಿ ಯಶಸ್ಸು ಕಂಡಿದೆ. ಸಿದ್ದರಾಮಯ್ಯ ಅವರಿಂದಲೇ ಡಿಕೆಶಿ ಹೆಸರನ್ನು ಸಿಎಂ ಪಟ್ಟಕ್ಕೆ ಹೇಳಿಸಿದ್ದು ಅಚ್ಚರಿಯ ನಡೆಗೆ ಕಾರಣ ಆಗಿದೆ. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಡಿಕೆಶಿಗೆ ಬೆಂಬಲ ಸೂಚನೆ ಮಾಡಿದರು. ಡಿಕೆಶಿ ಅವರು ಸರಕಾರ ರಚನೆಗೆ ಹಕ್ಕು ಮಂಡಿಸುವುದಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿದರು. ಬುಧವಾರ ಸಿಎಂ ಆಗಿ ಡಿಕೆಶಿ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈ ವೇಳೆ ಮಾತನಾಡಿದ ಕೆಸಿ […]

Continue Reading

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ, ಸರಕಾರ ವಿಸರ್ಜನೆ, ಸಿದ್ದು ಇನ್ಮುಂದೇ ಹಂಗಾಮಿ ಸಿಎಂ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದ್ದ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ಗುರುವಾರ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದರು. ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದು, ಸಿದ್ದರಾಮಯ್ಯ ಅವರು ಹಂಗಾಮಿ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಅವರ ಇಡೀ ಸಂಪೂರ್ಣ ಸಂಪುಟವನ್ನಿ ವಿಸರ್ಜನೆ ಮಾಡಿದ್ದು, ಎಲ್ಲರೂ ಮಾಜಿ ಆಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು […]

Continue Reading

ನಾನು ರಾಜ್ಯ ರಾಜಕಾರಣದ‌ಲ್ಲಿಯೇ ಇರುತ್ತೇನೆ, ಸಕ್ರಿಯ ಆಗಿರುವೆ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ರಾಜ್ಯ ರಾಜಕಾರಣದಲ್ಲಿಯೇ ಇರುತ್ತೇನೆ, ಯಾವುದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ಸಕ್ರಿಯ ರಾಜಕಾರಣವನ್ನು ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬಳಿಕ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಕಾಂಗ್ರೆಸ್ ನನಗೆ ಎರಡು ಬಾರಿ ಮುಖ್ಯಮಂತ್ರಿ ಸ್ಥಾನ ಕೊಟ್ಟಿದೆ. ವಿರೋಧ ಪಕ್ಷ ನಾಯಕ ಸ್ಥಾನವನ್ನೂ ಕೊಟ್ಟಿದೆ, ಇದಕ್ಕಾಗಿ ನನ್ನ ಮೇಲೆ ನಂಬಿಕೆಯಿಟ್ಟ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಅಭಿನಂದನೆ ಹೇಳುತ್ತೇನೆ. ನಾನು ಕೊನೆಯ ಉಸಿರು ಇರೋವರೆಗೂ ರಾಜಕಾರಣದಲ್ಲಿ ಸಕ್ರಿಯ ಆಗಿರುತ್ತೇನೆ. ಕೋಮುವಾದಿ ಶಕ್ತಿಗಳ ವಿರುದ್ಧ […]

Continue Reading

ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದ ಆಶೀರ್ವಾದ ಡಿಕೆಶಿ, ಜಾಲತಾಣದಲ್ಲಿ ಭಾವಚಿತ್ರ ವೈರಲ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳು ಜೋರಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ. ಗುರುವಾರ ಬೆಳಗ್ಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್ ವೇಳೆ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತಬ್ಬಿಕೊಂಡು ಅಲಿಂಗನ ಮಾಡಿಕೊಂಡರು. ಬಳಿಕ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ದೃಶ್ಯಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣ ಆಗಿವೆ.  

Continue Reading

ನಾನೇ ರಾಜೀನಾಮೆ ನೀಡಿದ್ದೇನೆ, ಯಾವುದೇ ಒತ್ತಡ ಇಲ್ಲ, ಹೈಕಮಾಂಡ್ ಹೇಳಿದಂತೆ ನಡೆದುಕೊಂಡಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜಕೀಯ ಹೈಡ್ರಾಮಾದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದು, ನಾನೇ ಸ್ವಯಂ ಆಗಿ ಹೈಕಮಾಂಡ್ ನಿರ್ದೇಶನದ ಮೇಲೆ ರಾಜೀನಾಮೆ ನೀಡಿದ್ದೇನೆ. ಇಲ್ಲಿ ಯಾರ ಒತ್ತಡವು ಇಲ್ಲ, ಹೈಕಮಾಂಡ್ ಅವರು ಹೇಳಿದಾ‌ಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೆ ಅದರಂತೆ ನಡೆದುಕೊಂಡಿದ್ದೇನೆ, ಇದರಲ್ಲಿ ಯಾವುದೇ ಬೇಸರ, ಒತ್ತಡ ಇಲ್ಲ ಎಂದು ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಸುಧೀರ್ಘವಾಗಿ ಮುಖ್ಯಮಂತ್ರಿ ಆಗಿ, ವಿರೋಧ ಪಕ್ಷದ […]

Continue Reading

ಡಿಕೆಶಿಯತ್ತ ವಾಲಿದ ಕಾಂಗ್ರೆಸ್ ಶಾಸಕರು? ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜಕೀಯ ಲೆಕ್ಕಾಚಾರ ಜೋರು, ಖಾದರ್ ಗೆ ಡಿಸಿಎಂ ಸ್ಥಾನ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತೀವ್ರವಾಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಹಲವರು ಇದೀಗ ಡಿ.ಕೆ. ಶಿವಕುಮಾರ್ ಬಣದತ್ತ ಮುಖ ಮಾಡುತ್ತಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಜೋರಾಗಿವೆ. ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಪರವಾಗಿ ಕೆಲ ಹಿರಿಯ ಶಾಸಕರು ಹಾಗೂ ಸಚಿವರು ಮಾತ್ರ ಉಳಿದಿದ್ದು, ಡಿ.ಕೆ. ಶಿವಕುಮಾರ್ ಪರವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಡಿಕೆ ಶಿವಕುಮಾರ್ […]

Continue Reading

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಚರ್ಚೆಗೆ ದೇಶಪಾಂಡೆ ಹೇಳಿಕೆ ಹೊಸ ಟ್ವಿಸ್ಟ್, ವೇಗ ಪಡೆದ ರಾಜಕೀಯ ಚಟುವಟಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕುರಿತ ರಾಜಕೀಯ ಚರ್ಚೆಗಳು ತಾರಕಕ್ಕೇರುತ್ತಿರುವ ನಡುವೆಯೇ, ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ದೇಶಪಾಂಡೆ, ನವದೆಹಲಿಯಿಂದ ಹಿಂದಿರುಗುವಾಗಲೇ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿಕೊಂಡು ಬಂದಿದ್ದಾರೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಅವರು ನಮ್ಮೊಂದಿಗೆ ಮಾತನಾಡುವ ವೇಳೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು. […]

Continue Reading

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರ? ರಾಜ್ಯ ಸಭೆ ಆಫರ್ ನೀಡಿದ ರಾಹುಲ್

ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕೊನೆಗೂ ತಿರುವು ಪಡೆದುಕೊಂಡಿದೆ. ನವದೆಹಲಿಯಲ್ಲಿ ನಡೆದ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದಾರೆ. ಈ ವೇಳೆ ಸಿಎಂ ಸ್ಥಾನಕ್ಕೆ […]

Continue Reading

ಮೇ 28 ಸಿಎಂ ಸಿದ್ದರಾಮಯ್ಯ ರಾಜೀನಾಮೆ? ನವದೆಹಲಿಯಿಂದ ಎಂ ಗೌಪ್ಯ ಲಕೋಟೆ ಬರುವ ನಿರೀಕ್ಷೆ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದ್ದು, ನವದೆಹಲಿಯಲ್ಲಿ ನಡೆದ ಸರಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ನಾಯಕತ್ವ ಬದಲಾವಣೆ ಪ್ರಸ್ತಾಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಆಫರ್ ನೀಡುವ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ರಾಹುಲ್ ಗಾಂಧಿ ಮಾತನ್ನು ತಮ್ಮ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಈ ವಾರದಲ್ಲೇ ಹೊಸ ಸಿಎಂ ಅಧಿಕಾರಕ್ಕೆ […]

Continue Reading

ಯುಡಿಎಫ್ ಸರಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ, ಹಣಕಾಸು ಸಿಎಂ ಸತೀಶನ್ ಕೈಯಲ್ಲಿ

ತಿರುವನಂತಪುರಂ: ಕೇರಳದಲ್ಲಿ ಅಧಿಕಾರದ ಚುಕ್ಕಾಣೆ ಹಿಡಿದಿರುವ ಯುಡಿಎಫ್ ಸರ್ಕಾರವು ನೂತನ ಸಚಿವ ಸಂಪುಟಕ್ಕೆ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅಸ್ತು ಎಂದಿದ್ದಾರೆ. ಸಿಎಂ ಸಂಪುಟ ಖಾತೆಗಳನ್ನು ಹಂಚಿಕೆ ಮಾಡಿ ರಾಜ್ಯಪಾಲರಿಂದ ಅನುಮೋದನೆ ಪಡೆದಿದ್ದಾರೆ. ‌ ವಿ. ಡಿ. ಸತೀಶನ್ (ಮುಖ್ಯಮಂತ್ರಿ): ಹಣಕಾಸು, ಕಾನೂನು, ಕೇರಳ ಫೈನಾನ್ಷಿಯಲ್ ಕಾರ್ಪೊರೇಷನ್, ಬಂದರ್, ಮಾಲಿನ್ಯ ನಿಯಂತ್ರಣ, ವಿಮಾನ ನಿಲ್ದಾಣಗಳು, ಮೆಟ್ರೋ ರೈಲು, ರೈಲ್ವೆ ಮತ್ತು ಇತರೆ ಉಳಿದಿರುವ ಖಾತೆ ರಮೇಶ್ ಚೆನ್ನಿತ್ತಲ: ಗೃಹ ಇಲಾಖೆ, ವಿಜಿಲೆನ್ಸ್, ಅಗ್ನಿಶಾಮಕ ಮತ್ತು ತುರ್ತು ಸೇವೆ, ಕಾರಾಗೃಹ […]

Continue Reading