ಸಹ್ಯಾದ್ರಿ ಕಾಲೇಜು–ಕ್ರಿಸ್ತು ಜಯಂತಿ ವಿವಿ ನಡುವೆ ಶೈಕ್ಷಣಿಕ ಸಹಕಾರ ಒಪ್ಪಂದಕ್ಕೆ ಸಹಿ

ಮಂಗಳೂರು: ಇಲ್ಲಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರಿನ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿವಿ ನಡುವೆ ಶೈಕ್ಷಣಿಕ ಸಹಕಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ಒಪ್ಪಂದ ಕಾರ್ಯಕ್ರಮ ನೆರವೇರಿತು. ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕುಲಪತಿ ರೆವ್. ಡಾ. ಅಗಸ್ಟಿನ್ ಜಾರ್ಜ್ ಸಿ.ಎಂ.ಐ ಹಾಗೂ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ರೆವ್. ಫಾ. ಜೋಶಿ ಮ್ಯಾಥ್ಯೂ ಸಿ.ಎಂ.ಐ ಇದ್ದರು. ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಸಂಸ್ಥಾಪಕ ಡಾ. ಮಂಜುನಾಥ […]

Continue Reading

ಆರೋಗ್ಯದಲ್ಲಿ ಏರುಪೇರು: ನಟ ವಿನೋದ್ ಪ್ರಭಾಕರ್ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ವಿನೋದ ಪ್ರಭಾಕರ್ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಬೆಂಗಳೂರಿನ ನಾಗರಬಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿದ್ದ ವೇಳೆ ಅವರಿಗೆ ರಕ್ತದೊತ್ತಡ ಸಂಬಂಧಿತ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಅವರಿಗೆ ಹೃದಯ ಆರೈಕೆ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಬಲಗೈ ಹಾಗೂ ಮುಖದ ಭಾಗದಲ್ಲಿ ಪಕ್ಷಾಘಾತದ ಲಕ್ಷಣಗಳಂತಿರುವ ತೊಂದರೆ** […]

Continue Reading

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಅಗಸ್ಟ್ 7, 8ಕ್ಕೆ, ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ಉದ್ಯೋಗ ಒದಗಿಸುವ ವೇದಿಕೆ: ಡಾ. ಮೋಹನ್ ಆಳ್ವ

ಮಂಗಳೂರು: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ಈ ಬಾರಿ 300ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ಅಭ್ಯರ್ಥಿಗಳಿಗೆ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ […]

Continue Reading

ಕಡಬ: ಪತಿ, ಪತ್ನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ಅನಾಥವಾದ ಮಗು, ಸ್ಥಳಕ್ಕೆ ಪೊಲೀಸರ ದೌಡು

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಆಲಂಕಾರು ಕಜೆ ಎಂಬಲ್ಲಿ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ದಂಪತಿ ಎರಡು ವರ್ಷದ ಹೆಣ್ಣು ಮಗು ಮನೆಯಲ್ಲಿ ಅನಾಥ ಸ್ಥಿತಿಯಲ್ಲಿ ಪತ್ತೆ ಆಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಪತ್ನಿ ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಮೃತರನ್ನು ಬಜಗೋಳಿ ದಿನೇಶ್ ಹಾಗೂ ಪತ್ನಿ ಸಂಗೀತಾ ಎಂದು ಗುರುತಿಸಲಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನ […]

Continue Reading

ಕಾರವಾರದತ್ತ ವಂದೇ ಭಾರತ್‌ ವೇಗ; ಕರಾವಳಿ ಸಂಸದರ ಒಗ್ಗಟ್ಟಿನ ಪ್ರಯತ್ನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ಕಾರವಾರ: ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲನ್ನು ಕಾರವಾರದವರೆಗೆ ವಿಸ್ತರಿಸಲು ಕರಾವಳಿಯ ಎಲ್ಲ ಸಂಸದರು ಒಗ್ಗಟ್ಟಿನಿಂದ ಪ್ರಯತ್ನಿಸುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಕುಮಟಾ ರೈಲು ನಿಲ್ದಾಣದಲ್ಲಿ ನೂತನ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ ಹಾಗೂ ಕುಮಟಾ–ಕಾಚೇಗುಡ ವಿಸ್ತರಿತ ರೈಲು ಸೇವೆಗೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು. ಕುಮಟಾ, ಗೋಕರ್ಣ, ಭಟ್ಕಳ ಮತ್ತು ಮುರುಡೇಶ್ವರ ರೈಲು ನಿಲ್ದಾಣಗಳಲ್ಲಿ ಒಟ್ಟು ಸುಮಾರು ₹10 ಕೋಟಿ ವೆಚ್ಚದ ವಿವಿಧ ಸಾರ್ವಜನಿಕ ಉಪಯೋಗದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗಿದೆ ಎಂದು ಅವರು […]

Continue Reading

ನೋಂದಣಿ ಅವಧಿ ಮುಗಿದ ವಾಹನ ಬಳಕೆ ಆರೋಪ: ಕಾರವಾರ ಜೈಲರ್ ವಾಹನ ವಶಕ್ಕೆ, ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು

ಕಾರವಾರ: ನೋಂದಣಿ ಅವಧಿ ಮುಗಿದಿದ್ದರೂ ಸರ್ಕಾರಿ ವಾಹನವನ್ನು ಬಳಸಿದ ಆರೋಪದ ಹಿನ್ನೆಲೆಯಲ್ಲಿ ಕಾರವಾರ ಕಾರಾಗೃಹದ ಸೂಪರಿಂಟೆಂಡೆಂಟ್ ಹೇಮಾವತಿ ಅವರ ವಾಹನವನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಈ ಸಂಬಂಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಮಾಧವ ನಾಯಕ್ ಅವರು ಸಂಚಾರ ನಿಯಮ ಉಲ್ಲಂಘನೆ ಕುರಿತು ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕಾಜುಬಾಗ್ ಸರ್ಕಲ್ ಬಳಿ ಕಾರಾಗೃಹ ಸೂಪರಿಂಟೆಂಡೆಂಟ್ ಅವರ ವಾಹನವನ್ನು ತಡೆದು […]

Continue Reading

ಮೂಡುಬಿದಿರೆ ಆಳ್ವಾಸ್‌ನ 8 ಮಂದಿ ಸಿಎ ಅಂತಿಮ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆ, ದೀಪಕ್‌ಗೆ 28 ನೇ ರ‍್ಯಾಂಕ್

ಮೂಡುಬಿದಿರೆ : ಮೇ 2026 ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ದೀಪಕ್ ಹೆಗ್ಡೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್‌ಗಳಿಸುವ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಇವರ ಜತೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಒಟ್ಟು 8 ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅಮೋಘ ಸಾಧನೆ ಮೆರೆದಿದ್ದಾರೆ. ಸಿಎ ಅಂತಿಮ ಪರೀಕ್ಷೆಯಲ್ಲಿ ದೀಪಕ್ ಹೆಗ್ಡೆ, ನಿತೇಶ್ ಕಾಮತ್, ವೀಕ್ಷಾ ಶೆಟ್ಟಿ, ನಾಗರಾಜ ಮಂಜಿತ್ತಾಯ, ಪ್ರಣವ್ ಎಸ್ ಭಟ್, ವೈಷ್ಣವಿ ಜವಾರ್ ಅಕ್ಷಯ ಬಿಎಸ್, ಸುದೀಪ್ […]

Continue Reading

ನೀಟ್ ಮರು ಪರೀಕ್ಷೆ ಜೂನ್ 21: ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸ್ವರೂಪ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಜೂನ್ 21ರಂದು ನಡೆವ ನೀಟ್ (ಯುಜಿ) ಮರು ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಗೊಂದಲವಿಲ್ಲದೆ ನಿರಾಳ ವಾತಾವರಣದಲ್ಲಿ ಪರೀಕ್ಷೆ ನಡೆಯಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 2,970 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಪರೀಕ್ಷೆ ಮಧ್ಯಾಹ್ನ 2 ರಿಂದ […]

Continue Reading

ಬಜ್ಪೆ ಠಾಣೆಯ ಪೊಲೀಸರ ಎಡವಟ್ಟು, ಮಾಹಿತಿ ಕಲೆ ಹಾಕದೇ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್, ಇಬ್ಬರ ಅಮಾನತು

ಮಂಗಳೂರು: ಅಸ್ಸಾಂ ಹಾಗೂ ಬಿಹಾರ ಮೂಲದ 30 ಕ್ಕೂ ಹೆಚ್ಚು ಕಾರ್ಮಿಕರಿಗೆ ಸಮರ್ಪಕವಾಗಿ ಮಾಹಿತಿ ಕಲೆ ಹಾಕದೇ, ಪರಿಶೀಲನೆ ನಡೆಸದೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (ಪಿಸಿಸಿ) ನೀಡಿದ ಆರೋಪದ ಹಿನ್ನೆಲೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ಇಬ್ಬರು ಸಿಬ್ಬಂದಿಯನ್ನು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರು ಅಮಾನತು ಮಾಡಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಮಾನತುಗೊಂಡವರಲ್ಲಿ ಮಹಿಳಾ ಸಿಬ್ಬಂದಿ ಆಶಾ ಹಾಗೂ ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್ ಸೇರಿದ್ದಾರೆ. ವರ್ಷದ ಅವಧಿಯಲ್ಲಿ 31 ಮಂದಿಗೆ […]

Continue Reading

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ಮೊದಲ ಜೆಂಡರ್ ಅಫರ್ಮಿಂಗ್ ಯಶಸ್ವಿ ಶಸ್ತ್ರಚಿಕಿತ್ಸೆ, ವೈದ್ಯರ ಸಾಧನೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಟ್ರಾನ್ಸ್ಜೆಂಡರ್ ಮಹಿಳೆಗೆ ಮೊದಲ ಬಾರಿಗೆ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಚೆಗೆ ನಡೆದ ಈ ಶಸ್ತ್ರಚಿಕಿತ್ಸೆ ನಂತರ ರೋಗಿ ವೈದ್ಯಕೀಯ ತಂಡದ ಆರೈಕೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಸಂಯುಕ್ತ ತಂಡವು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಎರಡೂ ವಿಭಾಗಗಳ ನಿಕಟ ಸಮನ್ವಯದಲ್ಲಿ ಹಲವು ಗಂಟೆಗಳ ಕಾಲ ಕಾರ್ಯ ನಡೆದಿದೆ. ಪ್ಲಾಸ್ಟಿಕ್ ಸರ್ಜರಿ ವಿಭಾಗವು ಇದಕ್ಕೂ ಮುನ್ನ ಮುಖದ ಸ್ತ್ರೀಕರಣ ಮತ್ತು […]

Continue Reading