ಕಾವೇರಿ ನೀರು ಬಿಡುಗಡೆ ಖಂಡಿಸಿ ಕೆಆರ್‌ಎಸ್‌ನಲ್ಲಿ ಬಿಎಸ್ ವೈ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ, ಮುನ್ನೆಚ್ಚರಿಕೆ ಕ್ರಮವಾಗಿ ಹಲವರ ಬಂಧನ
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ನೀಡಿರುವ ನಿರ್ದೇಶನವನ್ನು ಖಂಡಿಸಿ ಬಿಜೆಪಿ ಶುಕ್ರವಾರ ಮಂಡ್ಯದ ಕೆಆರ್‌ಎಸ್ ಅಣೆಕಟ್ಟು ಬಳಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆ ವೇಳೆ ಕೆಆರ್‌ಎಸ್‌ಗೆ ಮುತ್ತಿಗೆ ಹಾಕಲು ಮುಂದಾದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರನ್ನು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದರು. ರಾಜ್ಯದಲ್ಲಿ ಅಲ್ಪ ಮಳೆಯಿಂದ ನೀರಿನ ಕೊರತೆ ಮತ್ತು ಬರದ ಪರಿಸ್ಥಿತಿ ಎದುರಾಗಿದ್ದರೂ, […]
Continue Reading