ಜಿಎಂಯು ದಂತ ವೈದ್ಯಕೀಯ ಕಾಲೇಜಿಗೆ ವಿಶ್ವಮಟ್ಟದ ಮಾನ್ಯತೆ, 120 ದಂತ ಚಿಕಿತ್ಸಾ ಘಟಕಗಳ ಮೂಲಕ ಪ್ರಾಯೋಗಿಕ ತರಬೇತಿಗೆ ಆದ್ಯತೆ

ಮಂಗಳೂರು: ಗಲ್ಫ್ ಮೆಡಿಕಲ್ ಯೂನಿವರ್ಸಿಟಿ (ಜಿಎಂಯು)ಯ ದಂತ ವೈದ್ಯಕೀಯ ಕಾಲೇಜು ವಿಶ್ವಮಟ್ಟದ ಕ್ಲಿನಿಕಲ್ ಶಿಕ್ಷಣ ವ್ಯವಸ್ಥೆ ಹಾಗೂ ಅತ್ಯಾಧುನಿಕ ಮೂಲಸೌಕರ್ಯದಿಂದ ಗಮನ ಸೆಳೆದಿದೆ. ವಿಶ್ವವಿದ್ಯಾಲಯದ ಅಧೀನದಲ್ಲಿರುವ ಥಂಬೇ ಡೆಂಟಲ್ ಆಸ್ಪತ್ರೆಯಲ್ಲಿ 120 ದಂತ ಚಿಕಿತ್ಸಾ ಕುರ್ಚಿಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ನೈಜ ರೋಗಿಗಳ ಚಿಕಿತ್ಸೆಯ ಮೂಲಕ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ. ದಂತ ಶಿಕ್ಷಣದಲ್ಲಿ ಪ್ರಾಯೋಗಿಕ ಅನುಭವಕ್ಕೆ ಹೆಚ್ಚಿನ ಮಹತ್ವ ನೀಡಿರುವ ಕಾಲೇಜು, ಆರಂಭಿಕ ಹಂತದಿಂದಲೇ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸಾ ಕೌಶಲ್ಯ ಬೆಳೆಸುವ ಅವಕಾಶ ಒದಗಿಸಿದೆ. […]

Continue Reading

ಸ್ಕ್ಯಾನಿಂಗ್ ಸೆಂಟರ್‌ಗಳ ಸಮಗ್ರ ಪರಿಶೀಲನೆ ಕಡ್ಡಾಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ (ಪಿಸಿಪಿಎನ್‌ಡಿಟಿ) ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನೋಂದಾಯಿತ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ನಿಯಮಿತವಾಗಿ ಹಾಗೂ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ (ಪಿಸಿಪಿಎನ್‌ಡಿಟಿ) ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 82 ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಂದು ಕೇಂದ್ರಕ್ಕೂ […]

Continue Reading

ಶ್ರೀನಿವಾಸ ವಿವಿಯಲ್ಲಿ ಎಐ ತಂತ್ರಜ್ಞಾನದ ಸಂಚಲನ: ಸ್ವಯಂಚಾಲಿತ ವಿದ್ಯುತ್ ವಾಹನ, ‘ಶ್ರೀನಿಬೋಟ್’ ರೋಬೋಟ್ ಅನಾವರಣ

ಮಂಗಳೂರು: ಕೃತಕ ಬುದ್ಧಿಮತ್ತೆ ರೋಬೋಟಿಕ್ಸ್ ಹಾಗೂ ಸ್ವಯಂಚಾಲಿತ ತಂತ್ರಜ್ಞಾನ ಕ್ಷೇತ್ರದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಮಹತ್ವದ ಸಾಧನೆ ದಾಖಲಿಸಿದ್ದಾರೆ. ಮುಕ್ಕ ಕ್ಯಾಂಪಸ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಶ್ರೀ ವಾಹನ್’ ಎಐ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ ಹಾಗೂ ಶ್ರೀನಿಬೋಟ್’ ಎಐ ರಿಸೆಪ್ಷನ್ ರೋಬೋಟ್** ಅನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು. ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಆರ್ಥಿಕ ನೆರವು ಹಾಗೂ ಅಧ್ಯಾಪಕರ ಮಾರ್ಗದರ್ಶನದಲ್ಲಿ ರೂಪುಗೊಂಡಿರುವ ಈ ಯೋಜನೆಗಳು ಸಂಶೋಧನೆ, ನವೋದ್ಯಮ ಮತ್ತು […]

Continue Reading

ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ಗೆ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚಾಲನೆ

ಮೂಡುಬಿದಿರೆ: ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ತಾಂತ್ರಿಕ ಅನುಭವ ಕಲ್ಪಿಸುವ ಮಹತ್ವದ ಹೆಜ್ಜೆಯಾಗಿ, ಐಬಿಎಂ ಸಾಫ್ಟ್‌ವೇರ್ ಲ್ಯಾಬ್ಸ್ ಸಹಯೋಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಎಐಇಟಿ)ಯಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ಗೆ ಬುಧವಾರ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನಗಳ ನೇರ ಪ್ರಾಯೋಗಿಕ ಅನುಭವ ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾದ ಈ ಲ್ಯಾಬ್‌ನಲ್ಲಿ ಐಬಿಎಂ ವಾಟ್ಸನ್‌ಎಕ್ಸ್.ಎಐ, ವಾಟ್ಸನ್‌ಎಕ್ಸ್ ಆರ್ಕೆಸ್ಟ್ರೇಟ್ ಸೇರಿದಂತೆ ಎಐ ಆಧಾರಿತ […]

Continue Reading

119ನೇ ಸಂಸ್ಥಾಪನಾ ದಿನ; ಬ್ಯಾಂಕ್ ಆಫ್ ಬರೋಡಾದಿಂದ ಡಿಜಿಟಲ್ ಸೇವೆಗಳಿಗೆ ಹೊಸ ವೇಗ

ಮಂಗಳೂರು: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ 119 ನೇ ಸಂಸ್ಥಾಪನಾ ದಿನವನ್ನು ಆಚರಿಸಿ, ಗ್ರಾಹಕರಿಗೆ ಇನ್ನಷ್ಟು ಸುಲಭ ಹಾಗೂ ಸುರಕ್ಷಿತ ಸೇವೆ ಒದಗಿಸುವ ಉದ್ದೇಶದಿಂದ ಹಲವು ಹೊಸ ಬ್ಯಾಂಕಿಂಗ್ ಯೋಜನೆಗಳನ್ನು ಪರಿಚಯಿಸಿದೆ. ಈ ವರ್ಷದ ಧ್ಯೇಯವಾಕ್ಯ ‘ವಿಶ್ವಾಸದೊಂದಿಗೆ ಮುನ್ನಡೆ’ಆಗಿದ್ದು, ಗ್ರಾಹಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ವಿಸ್ತರಿಸಲು ಬ್ಯಾಂಕ್ ಆದ್ಯತೆ ನೀಡಿದೆ. ಸಂಸ್ಥಾಪನಾ ದಿನದ ಅಂಗವಾಗಿ ಬ್ಯಾಂಕಿನ ಜಾಗತಿಕ ರಾಯಭಾರಿ ಸಚಿನ್ ತೆಂಡೂಲ್ಕರ್ ಅವರು ಹೊಸ […]

Continue Reading

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್

ಬೆಂಗಳೂರು: 8 ವರ್ಷಗಳ ನಂತರ ಗಡಿಯಾರ ಚಿತ್ರದ ನಿರ್ದೇಶಕ ಪ್ರಬಿಕ್ ಮೊಗವೀರ್ ಅವರು ಪಿಸ್ತೂಲ್ ಹೆಸರಿನ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಒಂದು ಗನ್ ಆರು ಬುಲೆಟ್ ಎನ್ನುವ ಅಡಿಬರಹ ಈ ಚಿತ್ರಕ್ಕೆ ಇದೆ. ಪಕ್ಕ ಮಾಸ್ ಜತೆಗೆ ಥ್ರಿಲಿಂಗ್ ಕಂಟೆಂಟ್ ಇದು ಒಳಗೊಂಡಿದೆ. ನಿರ್ದೇಶಕರು ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ. ಚಿತ್ರದ ಕಥಾ ವಸ್ತು ವಿಭಿನ್ನವಾಗಿರಲಿದೆ ಎಂದು ಪ್ರಬಿಕ್ ಮೊಗವೀರ್ ಅವರು ಹೇಳಿದ್ದಾರೆ. ಪ್ರಬಿಕ್ ಮೊಗವೀರ್ ಅವರು ಹಿಂದೆ ನಿರ್ದೇಶಿಸಿದ್ದ ಗಡಿಯಾರ […]

Continue Reading

ಕೆಎಂಸಿ ಅತ್ತಾವರದಲ್ಲಿ ವಿಶೇಷ ‘ಸಂಜೆ ಕ್ಲಿನಿಕ್’ ಆರಂಭ, ಗುಣಮಟ್ಟದ ಆರೋಗ್ಯ ಸೇವೆಗೆ ಹೆಜ್ಜೆ

ಮಂಗಳೂರು: ಉದ್ಯೋಗಿಗಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಹಗಲಿನ ವೇಳೆ ಆಸ್ಪತ್ರೆಗೆ ಭೇಟಿ ನೀಡಲು ಸಾಧ್ಯವಾಗದವರಿಗೆ ಅನುಕೂಲವಾಗುವಂತೆ ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ ತಜ್ಞ ವೈದ್ಯರ ಸಮಾಲೋಚನೆಗಾಗಿ ವಿಶೇಷ ‘ಸಂಜೆ ಕ್ಲಿನಿಕ್’ ಆರಂಭಿಸಲಾಗಿದೆ. ಸಾಮಾನ್ಯ ಕೆಲಸದ ವೇಳೆಯ ನಂತರವೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಹೊಸ ಸೇವೆ ಆರಂಭಿಸಲಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ. ಸಂಜೆ 5 ರಿಂದ 7 ಗಂಟೆಯವರೆಗೆ ಕಾರ್ಯನಿರ್ವಹಿಸುವ ಈ ಕ್ಲಿನಿಕ್‌ನಲ್ಲಿ ಹೃದ್ರೋಗ, ಸಾಮಾನ್ಯ ವೈದ್ಯಕೀಯ, ಹಸ್ತ ಶಸ್ತ್ರಚಿಕಿತ್ಸೆ, ಮೂತ್ರಪಿಂಡ, ಮೆದುಳಿನ […]

Continue Reading

ಮಿಥ್ಯ ಕನ್ನಡ ಚಿತ್ರಕ್ಕೆ ಒಲಿದು ಬಂದ ಮೂರು ಪ್ರಶಸ್ತಿ, ರೂಪಶ್ರೀ ವರ್ಕಾಡಿ ಅಭಿನಯಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ

ಮಂಗಳೂರು: ಮಿಥ್ಯ ಕನ್ನಡ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ವಿಭಾಗದ ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ಈ ಗೌರವ ತಮ್ಮ ಕಲಾ ಬದುಕಿನ ಅತ್ಯಂತ ಸ್ಮರಣೀಯ ಕ್ಷಣ. ಪ್ರಶಸ್ತಿ ಸಿಗುವ ನಿರೀಕ್ಷೆಯೇ ಇರಲಿಲ್ಲ. ಎರಡು ದಶಕಗಳಿಗೂ ಅಧಿಕ ಕಲಾ ಪಯಣದ ಏಳುಬೀಳುಗಳ ನಡುವೆ ಈ ಗೌರವ ಹೊಸ ಉತ್ಸಾಹ ತುಂಬಿದೆ ಎಂದು ಮಂಗಳೂರು ಮೂಲದ ನಟಿ ರೂಪಶ್ರೀ ವರ್ಕಾಡಿ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಿಥ್ಯ ಚಿತ್ರದ ನಿರ್ದೇಶಕ ಸುಮಂತ್ ಭಟ್ ಹಾಗೂ ಇದೇ ಚಿತ್ರಕ್ಕಾಗಿ ಬಾಲನಟ […]

Continue Reading

ನೀಟ್ ಅಕ್ರಮ, ಶಿಕ್ಷಣ ಸಚಿವರ ರಾಜೀನಾಮೆಗೆ ಸಚಿವ ಖಾದರ್ ಒತ್ತಾಯ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದೆ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸುವ ಮೂಲಕ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಆರೋಪಿಸಿದರು. ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸಾವಿಗೀಡಾದ 20 ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಘೋಷಿಸುವವರೆಗೆ ಕಾಂಗ್ರೆಸ್ ಹೋರಾಟ ಮುಂದುವರೆಸಲಿದೆ. ಅನ್ಯಾಯವೇ ಕಾನೂನಾದರೆ, ಪ್ರತಿಭಟನೆ ಕರ್ತವ್ಯ ಆಗುತ್ತದೆ ಎಂದರು. […]

Continue Reading

ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರತಿಭಟನೆ ವೇಳೆ ಪೊಲೀಸರು ತಮ್ಮನ್ನು ವಶಕ್ಕೆ ಪಡೆಯುವಾಗ ಕೆಲ ಸಿಬ್ಬಂದಿಯೇ “ಈ ಸರ್ಕಾರವನ್ನು ಕಿತ್ತೊಗೆಯಿರಿ” ಎಂದು ಕಿವಿಯಲ್ಲಿ ಪಿಸುಗುಟ್ಟಿದ್ದರು ಎಂದು ಅವರು ನವದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲಪ್ರಯೋಗವನ್ನು ಖಂಡಿಸಿದರು. ಪ್ರಶ್ನೆಪತ್ರಿಕೆ ಸೋರಿಕೆಗಳಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ […]

Continue Reading