ಬಂಟ್ವಾಳ ಬಸ್‌ ನಿಲ್ದಾಣದಲ್ಲಿ ಯುವತಿ ಅಟ್ಟಾಡಿಸಿ ಹತ್ಯೆ; ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಸಾವು, ಆರೋಪಿ ಪತ್ತೆಗೆ ಶೋಧ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಗುರುವಾರ ಯುವತಿಯೊಬ್ಬರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಮೃತಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾತನಾಡಿ, ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ ಎನ್ನುವ ಮಾಹಿತಿ […]

Continue Reading

ಶಿವಮೊಗ್ಗದ ಪೇಪರ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ಸಾಮಗ್ರಿ ಭಸ್ಮ

ಶಿವಮೊಗ್ಗ: ನಗರದ ನ್ಯೂ ಮಂಡ್ಲಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಪೇಪರ್ ಕಾರ್ಖಾನೆಯಲ್ಲಿ ಬುಧವಾರ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ರೋಲ್‌ಗಳು ಹಾಗೂ ಇತರೆ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಘಟನೆಯಿಂದ ಇಡೀ ಪ್ರದೇಶ ದಟ್ಟ ಹೊಗೆಯಿಂದ ಆವೃತವಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ನ್ಯೂ ಮಂಡ್ಲಿಯಲ್ಲಿರುವ **ಪೇಪರ್ ಪ್ಯಾಕೇಜಿಂಗ್ ಪ್ರೈವೇಟ್ ಲಿಮಿಟೆಡ್** ಸಂಸ್ಥೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯಲ್ಲಿ ಶೇಖರಿಸಿಡಲಾಗಿದ್ದ ಟನ್‌ಗಟ್ಟಲೆ ಪೇಪರ್ ರೋಲ್‌ಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕೆಲವೇ ನಿಮಿಷಗಳಲ್ಲಿ […]

Continue Reading

ಕಲಬುರಗಿ ಜೈಲಿನಿಂದ ಕೈದಿಗಳ ಪರಾರಿ ಪ್ರಕರಣ: ಅಧೀಕ್ಷಕ ಸೇರಿ 9 ಸಿಬ್ಬಂದಿ ಅಮಾನತು

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಆರೋಪದಡಿ ಜೈಲು ಅಧೀಕ್ಷಕ ಸೇರಿದಂತೆ 9 ಮಂದಿ ಸಿಬ್ಬಂದಿ ಅಮಾನತುಗೊಳಿಸಲಾಗಿದೆ. ಕಾರಾಗೃಹ ಇಲಾಖೆಯ ಮಹಾನಿರ್ದೇಶಕ ಅಲೋಕ್ ಕುಮಾರ್ ಈ ಸಂಬಂಧ ಆದೇಶ ಹೊರಡಿಸಿದ್ದು, ಜೈಲಿನ ಭದ್ರತೆಯಲ್ಲಿ ಗಂಭೀರ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅಮಾನತುಗೊಂಡವರಲ್ಲಿ ಜೈಲು ಅಧೀಕ್ಷಕ ರಾಕೇಶ್ ಕಾಂಬಳೆ, ಸಹಾಯಕ ಅಧೀಕ್ಷಕ ಬಿ. ಸುರೇಶ್, ಜೈಲರ್ ಶ್ರೀಮಂತಗೌಡ ಪಾಟೀಲ್ ಹಾಗೂ ರಾತ್ರಿ ಪಾಳಿಯ ವಾರ್ಡರ್‌ಗಳಾದ […]

Continue Reading

ಜೈಲಿನಿಂದ ಪರಾರಿಯಾಗಿದ್ದ ಕೈದಿ ಮೇಲೆ ಪೊಲೀಸ್ ಗುಂಡಿನ ದಾಳಿ; ಓರ್ವ ಬಂಧನ

ಕಲಬುರಗಿ: ಕೇಂದ್ರ ಕಾರಾಗೃಹದಿಂದ ಬ್ಯಾರಕ್ ಕಂಬಿಗಳನ್ನು ಕತ್ತರಿಸಿ ಪರಾರಿಯಾಗಿದ್ದ ಮೂವರು ಶಿಕ್ಷಿತ ಕೈದಿಗಳ ಪೈಕಿ ಓರ್ವನಾದ ಸಂತೋಷ ಬಸಪ್ಪ ಮೇತ್ರೆ ಮೇಲೆ ಬುಧವಾರ ಬೆಳಿಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಔರಾದ ತಾಲ್ಲೂಕಿನ ಸಂತಾಪುರ ಗ್ರಾಮದ ನಿವಾಸಿಯಾಗಿರುವ ಸಂತೋಷ ಬಸಪ್ಪ ಮೇತ್ರೆ, ಪೋಕ್ಸೊ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯಾಗಿದ್ದಾನೆ. ಪರಾರಿಯಾದ ಬಳಿಕ ನಗರ ಹೊರವಲಯದ ಕಪನೂರ ಕೈಗಾರಿಕಾ ಪ್ರದೇಶದಲ್ಲಿ ಪತ್ತೆಯಾದಾಗ ಬಂಧಿಸಲು ಮುಂದಾದ ಪೊಲೀಸರ ಮೇಲೆ ಪ್ರತಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಕಾಲಿಗೆ ಗುಂಡು […]

Continue Reading

64 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ, ದೇಶದ ಗಮನ ಸೆಳೆದ ಗುರುಪುರ ಸ್ಮಾರ್ಟ್ ಸೇತುವೆ

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಅಡಿ ಗುರುಪುರ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸುಲ್ತಾನ್ ಬತ್ತೇರಿ–ತಣ್ಣೀರುಬಾವಿ ಸಂಪರ್ಕ ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಸೇತುವೆ ನಿರ್ಮಾಣದ ಬಳಿಕ ಮಂಗಳೂರಿನ ಜನರಿಗೆ ತಣ್ಣೀರುಬಾವಿ ಕಡಲತೀರಕ್ಕೆ ತ್ವರಿತ ಸಂಪರ್ಕ ಕಲ್ಪಿಸುವ ಜತೆಗೆ, ತಣ್ಣೀರುಬಾವಿ–ಬೆಂಗ್ರೆ ನಿವಾಸಿಗಳ ಮಂಗಳೂರು ನಗರಕ್ಕೆ ಸಂಚರಿಸುವ ಪ್ರಯಾಣ ಸನಿಹ ಆಗಲಿದೆ. ಬೋ ಸ್ಟ್ರಿಂಗ್ ವಿನ್ಯಾಸದ ಸೇತುವೆ ನಡುವೆ ಯಾವುದೇ ಆಧಾರ ಸ್ತಂಭಗಳಿಲ್ಲದೆ 100 ಮೀಟರ್ ಉದ್ದದ ಏಕವಿಸ್ತಾರದ ವಿನ್ಯಾಸ ನಿರ್ಮಾಣ ಮಾಡಲಾಗಿದೆ. ಇಂತಹ ವಿನ್ಯಾಸದಿಂದಲಾಗಿಯೇ ಬೋ […]

Continue Reading

ಭಾರತೀಯ ಅಂಚೆ ನೌಕರರ ಸಂಘ ಹೋರಾಟಕ್ಕೆ ಕರೆ, ಅ. 5ರಂದು ರಾಷ್ಟ್ರವ್ಯಾಪಿ ಮುಷ್ಕರ: ದಯಾನಂದ ಕತ್ತಲ್ ಸಾರ್

ಮಂಗಳೂರು: ಗುರಿ ಸಾಧನೆ (ಟಾರ್ಗೆಟ್) ಹೆಸರಿನಲ್ಲಿ ಅಂಚೆ ಸಿಬ್ಬಂದಿಗೆ ಮಾನಸಿಕ ಒತ್ತಡ ಹೇರಿ, ಸ್ವಂತ ಹಣದಲ್ಲಿ ವಿವಿಧ ಖಾತೆಗಳನ್ನು ತೆರೆಯುವಂತೆ ಒತ್ತಾಯಿಸಲಾಗುತ್ತಿದೆ. ಜೊತೆಗೆ ಅಂಚೆ ಇಲಾಖೆಯನ್ನು ಖಾಸಗೀಕರಣದತ್ತ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿರುವ ಭಾರತೀಯ ಅಂಚೆ ನೌಕರರ ಸಂಘ, ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಷ್ಟ್ರವ್ಯಾಪಿ ಹೋರಾಟ ಹಾಗೂ ಮುಷ್ಕರ ನಡೆಸುವುದಾಗಿ ಸಂಘದ ಪದಾಧಿಕಾರಿ ದಯಾನಂದ ಕತ್ತಲ್ ಸಾರ್ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 170 ವರ್ಷಗಳ ಇತಿಹಾಸ ಹೊಂದಿರುವ ಭಾರತೀಯ ಅಂಚೆ ಇಲಾಖೆ ಸಮಾಜದ ಕಟ್ಟಕಡೆಯ […]

Continue Reading

ಅವೈಜ್ಞಾನಿಕ ಬೆಟ್ಟ ಕೊರೆಯುವಿಕೆಗೆ ಕಾನೂನು ಜಾರಿಗೊಳಿಸಿ: ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್

ಮಂಗಳೂರು: ರಾಜ್ಯದಲ್ಲಿ ಈಚೆಗೆ ಹೆಚ್ಚುತ್ತಿರುವ ಭೂ ಕುಸಿತ ಹಾಗೂ ತಡೆಗೋಡೆ ಕುಸಿತ ಪ್ರಕರಣಗಳಿಗೆ ಹವಾಮಾನ ವೈಪರೀತ್ಯದ ಜೊತೆಗೆ ಅವೈಜ್ಞಾನಿಕ ಮತ್ತು ಅನಿಯಂತ್ರಿತ ಬೆಟ್ಟ ಕೊರೆಯುವಿಕೆಯೂ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ, ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಇಂತಹ ಕಾಮಗಾರಿಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಒತ್ತಾಯಿಸಿದರು. ಮೂಡುಬಿದಿರೆ ಸಮೀಪದ ಕೇಮಾರು ಮಠದ ರಸ್ತೆ ಹಾಗೂ ಗುರುಪುರ ಭಾಗದಲ್ಲಿ […]

Continue Reading

ಧರ್ಮಸ್ಥಳ ಪ್ರಕರಣ: 7 ಸಾವಿರಕ್ಕೂ ಅಧಿಕ ಪುಟಗಳ ವರದಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಎಸ್‌ಐಟಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತಿಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ತನಿಖೆ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ವರ್ಷದ ತನಿಖೆಯ ಬಳಿಕ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ್ ಗೌಡ ಹಾಗೂ ಸುಜಾತಾ ಭಟ್ ಅವರ ವಿರುದ್ಧದ ಅಂತಿಮ ವರದಿಯನ್ನು ಬುಧವಾರ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರಿಗೆ ಸಲ್ಲಿಸಿದರು. ಎಸ್‌ಐಟಿ ಅಧಿಕಾರಿಗಳು ಮಧ್ಯಾಹ್ನ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ, 12 ಕಡತಗಳಲ್ಲಿ ಸಂಗ್ರಹಿಸಲಾದ […]

Continue Reading

ಆಳ್ವಾಸ್ ಆಯುರ್ವೇದ ಕಾಲೇಜಿನ 26 ನೇ ಬ್ಯಾಚ್‌ಗೆ ಬೀಳ್ಕೊಡುಗೆ, ಸಮಗ್ರ ವೈದ್ಯಕೀಯ ದೃಷ್ಟಿಕೋನ ಬೆಳೆಸಿಕೊಳ್ಳಿ ಎಂದ ಡಾ. ಮೋಹನ್ ಆಳ್ವ

ಮೂಡುಬಿದಿರೆ: ಆಯುರ್ವೇದ ವೈದ್ಯಕೀಯ ಕ್ಷೇತ್ರವು ದೇಶದ ಗಡಿಗಳನ್ನು ಮೀರಿ ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಿಶಾಲ ಮನೋಭಾವ ಮತ್ತು ಸಮಗ್ರ ವೈದ್ಯಕೀಯ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಕರೆ ನೀಡಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ 26ನೇ ಬ್ಯಾಚ್ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ‘ಸಂಪನ್ನಮ್’ ಬುಧವಾರ ಕಾಲೇಜಿನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಆಯುರ್ವೇದವು ಈಗಾಗಲೇ 17ಕ್ಕೂ ಹೆಚ್ಚು ರಾಷ್ಟ್ರಗಳಿಗೆ ವಿಸ್ತರಿಸಿದ್ದು, […]

Continue Reading

ಎನ್‌ಎಂಸಿ ಅನುಮತಿ: ಆಳ್ವಾಸ್ ವೈದ್ಯಕೀಯ ಕಾಲೇಜಿನಲ್ಲಿ 150 ಎಂಬಿಬಿಎಸ್ ಸೀಟುಗಳಿಗೆ ಹಸಿರು ನಿಶಾನೆ, ಕರಾವಳಿಯ ವೈದ್ಯಕೀಯ ಶಿಕ್ಷಣಕ್ಕೆ ಹೊಸ ಮೈಲುಗಲ್ಲು: ಡಾ. ಆಳ್ವ

ಮೂಡುಬಿದಿರೆ: ಕರಾವಳಿ ಭಾಗದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಬೆಳವಣಿಗೆಯಾಗಿ, ಮೂಡುಬಿದಿರೆಯ ಮಿಜಾರಿನಲ್ಲಿರುವ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರಕ್ಕೆ 2026–27ನೇ ಶೈಕ್ಷಣಿಕ ವರ್ಷದಿಂದ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅಧಿಕೃತ ಅನುಮೋದನೆ ನೀಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ತಿಳಿಸಿದ್ದಾರೆ. ಈ ಅನುಮೋದನೆಯೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಹುಕಾಲದ ಮಹತ್ವಾಕಾಂಕ್ಷೆಯ ವೈದ್ಯಕೀಯ ಕಾಲೇಜು ಕಾರ್ಯರೂಪಕ್ಕೆ ಬರುತ್ತಿದ್ದು, ಮೊದಲ ವರ್ಷದಲ್ಲೇ 150 […]

Continue Reading