ನನ್ನನ್ನು ನಾಡಿನ ದೊರೆ ಎನ್ನಬೇಡಿ, “ಪ್ರಜಾಸೇವಕ” ಎನ್ನಿ: ಸಿಎಂ ಶಿವಕುಮಾರ್

ಕೂಡ್ಲಿಗಿ: “ಸರ್ಕಾರದ ಯಶಸ್ಸು ಜಾಹಿರಾತಿನಲ್ಲಿ ಇರುವುದಿಲ್ಲ. ಜನರ ಮುಖದಲ್ಲಿ ನಗು ಮೂಡಿದೆ ಎಂಬುದೇ ಯಶಸ್ಸಿನ ಮಾನದಂಡ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಜಾಸೇವೆ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು. “ಜನ ಸೇವೆಯೇ ಜನಾರ್ಧನ ಸೇವೆ ಎಂದು ಭಾವಿಸಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮ ಸೇವೆ ಮಾಡಲು 136 ಸೀಟು ನೀಡಿ ರಾಜ್ಯವನ್ನು ಹೊಸ ದಿಕ್ಕಿನಲ್ಲಿ ಮುನ್ನಡೆಸಲು ಅವಕಾಶ ಕೊಟ್ಟಿದ್ದೀರಿ. ಇದು ಕೇವಲ […]

Continue Reading

ಇಂದಿರಾಗಾಂಧಿ ಹೆಸರಿನ ಶಾಲೆ ಮುಚ್ಚಲು ಅವಕಾಶ ನೀಡಲ್ಲ, ಶಿಕ್ಷಕಿಯರಿಗೆ ಸಿಎಂ‌ ಶಿವಕುಮಾರ್ ಅಭಯ

ಕೂಡ್ಲಿಗಿ: “ಇಂದಿರಾಗಾಂಧಿ ಅವರ ಹೆಸರಿರುವ ಶಾಲೆ ಮುಚ್ಚಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದಾಗ ಮನವಿ ನೀಡಲು ಬಂದಿದ್ದ ಶಿಕ್ಷಕಿಯರು ಮುಖ್ಯಮಂತ್ರಿಯವರ ಕೈ ಹಿಡಿದು ಭಾವುಕರಾದರು. ಕೂಡ್ಲಿಗಿಯಲ್ಲಿ ಶನಿವಾರ ನಡೆದ ಪ್ರಜಾಸೇವೆ ಅಭಿಯಾನದ ಮೊದಲ ಕಾರ್ಯಕ್ರಮ ಭಾವುಕ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಶಾಲೆಯ ಶಿಕ್ಷಕಿಯರಾದ ಶಾಂತಾ, ಜಗನ್ಮಾಥೆ, ಭಾರತಿ, ವೆಂಕಟೇಶ್ ಅವರುಗಳು ಸಿಎಂಗೆ ಮನವಿ ನೀಡಿ, “ಸಿಎಂ‌ ಸಾರ್ ಹಗರಿಬೊಮ್ಮನಹಳ್ಳಿ, ರಾಮನಗರದಲ್ಲಿ ಇಂದಿರಾಗಾಂಧಿ ಅವರ ಹೆಸರಿನಲ್ಲಿ ನಡೆಯುತ್ತಿರುವ ಏಕೈಕ ಅನುದಾನಿತ […]

Continue Reading

ಮಂಗಳೂರಿನ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ‘ಮುದ್ದು ಕೃಷ್ಣ’ ಸ್ಪರ್ಧೆ, ಮಕ್ಕಳ ಕಲರವ

ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಗರದ ಬಿಜೈ ಭಾರತ್ ಮಾಲ್‌ನಲ್ಲಿರುವ ಸ್ಮಾರ್ಟ್ ಬಜಾರ್ ವತಿಯಿಂದ ಶನಿವಾರ ‘ಮುದ್ದು ಕೃಷ್ಣ’ ಸ್ಪರ್ಧೆಯನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಮಂಗಳೂರಿನ ವಿವಿಧ ಶಾಲೆಗಳ ಮಕ್ಕಳು ಹಾಗೂ ಪುಟ್ಟ ಕಂದಮ್ಮಗಳು ಶ್ರೀಕೃಷ್ಣನ ವೇಷ ಧರಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದರು. ಮುದ್ದಾದ ನಟನೆ, ವೈವಿಧ್ಯಮಯ ವೇಷಭೂಷಣ ಹಾಗೂ ಪ್ರತಿಭೆಯ ಮೂಲಕ ಮಕ್ಕಳು ನೆರೆದಿದ್ದವರ ಗಮನ ಸೆಳೆದರು. ಮಕ್ಕಳ ಉತ್ಸಾಹ ಮತ್ತು ಸಂಭ್ರಮದಿಂದ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಕದ್ರಿಯ ಯಕ್ಷ ಮಂಜುಳಾ ಮಹಿಳಾ ತಾಳಮದ್ದಳೆ ಅರ್ಥಧಾರಿ ಶೋಭಾ ಸುಧಾಕರ್ […]

Continue Reading

ಸ್ಯಾಂಡಲ್ ವುಡ್ ಗೆ ಹೊಸ ವಿಲನ್ ಅರುಣ್ ಆಚಾರ್ ಎಂಟ್ರಿ

ಬೆಂಗಳೂರು: ಕಿರಣ್ ರಾಜ್ ನಾಯಕನಾಗಿ ನಟಿಸಿರುವ ‘ಜಾಕಿ 42’ ಚಿತ್ರದಲ್ಲಿ ಮುಖ್ಯ ವಿಲನ್ ಪಾತ್ರದಲ್ಲಿ ಅರುಣ್ ಆಚಾರ್ ಗಮನ ಸೆಳೆದಿದ್ದಾರೆ. ಕಲಾವಿದರ ಕುಟುಂಬದಲ್ಲಿ ಜನಿಸಿದ ಅರುಣ್ ಮೈಸೂರಿನವರು. ಅವರ ತಾತ ಚಿನ್ನ ಆಚಾರ್ ಕರ್ನಾಟಕ ಸಂಗೀತದಲ್ಲಿ ವಿದ್ವಾನ ಹಾಗೂ ನಾಟಕಗಳಲ್ಲಿ ಸಂಗೀತಗಾರರಾಗಿದ್ದರು. ತಾತನಂತೆ ಕಲಾ ಆಸಕ್ತಿ ಬೆಳೆಸಿಕೊಂಡ ಅರುಣ್ ಅಚಾರ್ ನಟನಾಗಿ ಜಾಕಿ 42 ಮೂಲಕ ಬರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಗುರುತೇಜ್ ಶೆಟ್ಟಿ ನಿರ್ದೇಶನದ ಗೋಲ್ಡನ್ ಗೇಟ್ ಬ್ಯಾನರ್ ನಡಿಯಲ್ಲಿ ಭಾರತಿ ಸತ್ಯನಾರಾಯಣ ನಿರ್ಮಾಣದ ‘ಜಾಕಿ 42’ […]

Continue Reading

ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನ

ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್‌ಮೆಂಟ್‌ನ ಕೇಂದ್ರ ಗ್ರಂಥಾಲಯದ ವತಿಯಿಂದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಹಾಗೂ ಅತ್ಯುತ್ತಮ ಗ್ರಂಥಾಲಯ ಬಳಕೆದಾರರ ಸನ್ಮಾನ ಮತ್ತು ಬಹುಮಾನ ವಿತರಣಾ ಸಮಾರಂಭ ನಡೆಯಿತು. ಕಾಲೇಜಿನ ನೆಲಮಹಡಿಯ ಸೆಮಿನಾರ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವು ಗ್ರಂಥಾಲಯ ವಿಜ್ಞಾನದ ಪಿತಾಮಹರೆಂದು ಪರಿಗಣಿಸಲ್ಪಡುವ ಡಾ. ಎಸ್.ಆರ್. ರಂಗನಾಥನ್ ಅವರ ಜೀವನ ಹಾಗೂ ಕೊಡುಗೆಗಳನ್ನು ಸ್ಮರಿಸುವುದರೊಂದಿಗೆ ಆರಂಭವಾಯಿತು. ಗ್ರಂಥಾಲಯಗಳು ಕಲಿಕೆ, ಸಂಶೋಧನೆ ಮತ್ತು ಜ್ಞಾನ ವಿನಿಮಯದಲ್ಲಿ ವಹಿಸುವ ಮಹತ್ವದ ಪಾತ್ರದ ಕುರಿತು ಸಮಾಲೋಚನೆ ನಡೆಯಿತು. ಸಹ್ಯಾದ್ರಿ […]

Continue Reading

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪೂರ್ವಾನುಮತಿ ಕಡ್ಡಾಯ, ಡಿಜೆ ಬಳಕೆಗೆ ಅವಕಾಶವಿಲ್ಲ: ಡಿಸಿ ಲಕ್ಷ್ಮೀಪ್ರಿಯಾ

ಕಾರವಾರ: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಯಾವುದೇ ಸಂದರ್ಭದಲ್ಲೂ ಡಿಜೆ ಬಳಕೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ಮಣ್ಣಿನಿಂದ ಹಾಗೂ ರಾಸಾಯನಿಕ ರಹಿತ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನೇ ಬಳಸಬೇಕು. ಜಲಮೂಲಗಳು ಕಲುಷಿತವಾಗದಂತೆ […]

Continue Reading

ಲೇಡಿಗೋಷನ್ ಆಸ್ಪತ್ರೆಗೆ ರೆಡ್‌ಕ್ರಾಸ್‌ನಿಂದ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ,  ಕ್ರಿಯಾತ್ಮಕ ದೃಷ್ಟಿಕೋನದ ಕೊಡುಗೆ: ಡಾ. ದುರ್ಗಾಪ್ರಸಾದ್

ಮಂಗಳೂರು: ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ವತಿಯಿಂದ ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಮೂರು ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿಶೇಷ ಕೊಡುಗೆಯಾಗಿ ನೀಡಲಾಯಿತು. ಆಸ್ಪತ್ರೆಯಲ್ಲಿ ರೋಗಿಗಳು, ವೈದ್ಯರು ಹಾಗೂ ಶುಶ್ರೂಷಕಿಯರಿಗೆ ಬಳಸುವ ಶಸ್ತ್ರಚಿಕಿತ್ಸಾ ಬಟ್ಟೆಗಳು ಹಾಗೂ ಇತರ ಅಗತ್ಯ ಬಟ್ಟೆಗಳಲ್ಲಿ ನ್ಯೂನತೆಗಳು ಕಂಡು ಬಂದ ಸಂದರ್ಭದಲ್ಲಿ ಅವುಗಳನ್ನು ದುರಸ್ತಿಪಡಿಸಿ, ಸುಸ್ಥಿತಿಯಲ್ಲಿ ಮರುಬಳಕೆ ಮಾಡಲು ಈ ಹೊಲಿಗೆ ಯಂತ್ರಗಳು ಸಹಕಾರಿ ಆಗಲಿವೆ. ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗ, ಹೆರಿಗೆ ವಿಭಾಗ ಹಾಗೂ ನವಜಾತ ಶಿಶು ತೀವ್ರ ನಿಗಾ ಘಟಕಗಳಿಗೆ ಯಂತ್ರಗಳನ್ನು […]

Continue Reading

ಬರ ಬಂದಿದೆ, ಬೆಳೆ ಹಾಳಾಗಿದೆ ಎಂದು ಯೋಚನೆ ಮಾಡಬೇಡಿ, ‌ನಾನು, ನಮ್ಮ ಸರ್ಕಾರ ನಿಮ್ಮ ಜತೆಗಿದೆ: ಸಿಎಂ ಶಿವಕುಮಾರ್

ಬಾಗಲಕೋಟೆ: ಮಳೆ ಬಂದು ಎಷ್ಟು ದಿನ ಆಯಿತು? ಯಾವಾಗ ಬಿತ್ತನೆ ಮಾಡಿದ್ದು? ಎಷ್ಟು ಖರ್ಚಾಯಿತು ಎಂದು ಬಾಗಲಕೋಟೆಯ ಹುನಗುಂದದ ರೈತ ನಂದೆಪ್ಪ ಸಂಗಪ್ಪ ಬಾರಕೇರ ಅವರಿಂದ ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಯೊಂದು ಮಾಹಿತಿಯನ್ನೂ ಪಡೆದರು. ಯುವ ರೈತನ ತಂದೆ- ತಾಯಿಗೆ “ಬರ ಬಂದಿದೆ, ಬೆಳೆ ಹಾಳಾಗಿದೆ ಎಂದು ಯೋಚನೆ ಮಾಡಬೇಡಿ, ‌ನಾನು ಹಾಗೂ ನಮ್ಮ ಸರ್ಕಾರ ನಿಮ್ಮ ಜೊತೆಗಿದೆ” ಎಂದು ದೈರ್ಯ ತುಂಬಿದರು. ಜೊತೆಗೆ “ಗ್ಯಾರಂಟಿ ಯೋಜನೆಗಳು ತಲುಪುತ್ತಿವೆಯೇ? ನಿಮಗೆ” ಎಂದು ಸಿಎಂ ಕೇಳಲು […]

Continue Reading

ಸೆಪ್ಟಂಬರ್ ಒಳಗೆ ಮೊದಲ ನೋಟಿಸ್‌ಗಳ ಪ್ರಕರಣ ಇತ್ಯರ್ಥ ಗುರಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಮ್ಯಾಪಿಂಗ್ ಆಗದಿರುವ ಹಾಗೂ ಮ್ಯಾಪಿಂಗ್‌ನಲ್ಲಿ ತಾರ್ಕಿಕ ವ್ಯತ್ಯಾಸ ಹೊಂದಿರುವ ಮತದಾರರಿಗೆ ನೀಡಲಾಗುತ್ತಿರುವ ಮೊದಲ ನೋಟಿಸ್‌ಗಳ ಪ್ರಕರಣಗಳನ್ನು ಸೆಪ್ಟಂಬರ್ ಅಂತ್ಯದೊಳಗೆ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ತಿಳಿಸಿದರು. ಶುಕ್ರವಾರ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದಿರುವ, ಮ್ಯಾಪಿಂಗ್‌ನಲ್ಲಿ […]

Continue Reading

ಕಾರವಾರದಲ್ಲಿ ನೂತನ ರಂಗಮಂದಿರ ನಿರ್ಮಾಣಕ್ಕೆ ಹೊಸ ಪ್ರಸ್ತಾವ ಸಲ್ಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಕಲಾತ್ಮಕ ಹಾಗೂ ಆಕರ್ಷಕ ನೂತನ ರಂಗಮಂದಿರ ನಿರ್ಮಾಣಕ್ಕೆ ಹೊಸ ಪ್ರಸ್ತಾವ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ರಂಗಮಂದಿರ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರವಾರದಲ್ಲಿ ನೂತನ ರಂಗಮಂದಿರ ನಿರ್ಮಾಣಕ್ಕೆ ಮೂರು ವರ್ಷಗಳ ಹಿಂದೆ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ ಈವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಅವಧಿಯಲ್ಲಿ […]

Continue Reading