ತೂಗು ಸೇತುವೆಗಳ ಸರದಾರ, ಬ್ರಿಡ್ಜ್ ಮ್ಯಾನ್ ಡಾ. ಗಿರೀಶ್ ಭಾರದ್ವಾಜ್ ಇನ್ನಿಲ್ಲ, ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಸುಳ್ಯ: ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಗೆ ತಮ್ಮ ಬದುಕನ್ನೇ ಸಮರ್ಪಿಸಿ, ಅತ್ಯಂತ ಕಡಿಮೆ ವೆಚ್ಚದಲ್ಲಿ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ದೇಶದಾದ್ಯಂತ ‘ಬ್ರಿಡ್ಜ್ ಮ್ಯಾನ್’ ಹಾಗೂ ‘ತೂಗು ಸೇತುವೆಗಳ ಸರದಾರ’ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಸೋಮವಾರ ಬೆಳಿಗ್ಗೆ ಅನಾರೋಗ್ಯದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಗ್ರಾಮೀಣ ಜನರ ಬದುಕಿಗೆ ಸೇತುವೆಯಾಗಿ ನಿಂತಿದ್ದ ಅಪರೂಪದ ತಾಂತ್ರಿಕ ಸಾಧಕನ ಅಗಲಿಕೆಗೆ ರಾಜ್ಯದಾದ್ಯಂತ ತೀವ್ರ ಶೋಕ ತಂದಿದೆ. ಇಬ್ಬರು ಪುತ್ರರು ಮತ್ತು […]

Continue Reading

ಭಾರಿ ಮಳೆ, ಗಾಳಿ ಭೀತಿ: ಉ. ಕ ಜಿಲ್ಲೆಯ 16 ಹೆದ್ದಾರಿ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಡಿಸಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಹಾಗೂ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಭೂ ಕುಸಿತ ಹಾಗೂ ರಸ್ತೆ ಅಪಘಾತಗಳ ಅಪಾಯ ಹೆಚ್ಚುವ ಸಾಧ್ಯತೆ ಇರುವ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ 16 ಸೂಕ್ಷ್ಮ ಪ್ರದೇಶಗಳಲ್ಲಿ ಜುಲೈ 6 ರಿಂದ ಮಳೆಗಾಲ ಅಂತ್ಯ ಆಗುವವರಿಗೆ ಎಲ್ಲ ರೀತಿಯ ವಾಹನಗಳ ನಿಲುಗಡೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಎಲ್ಲೆಲ್ಲಿ ನಿಷೇಧ: ಕಾರವಾರ ತಾಲೂಕಿನ ಲಂಡನ್ ಬ್ರಿಡ್ಜ್‌ನಿಂದ ಬಿನಾಗಾ ಸುರಂಗದವರೆಗೆ 750 ಮೀಟರ್, ಅಗಾರ್‌ನ ಸಂಕುಬಾಗ […]

Continue Reading

ಉ.ಕ ಜಿಲ್ಲೆಯಲ್ಲಿ ದತ್ತು ಮಕ್ಕಳ ಪ್ರಕ್ರಿಯೆ; ಮೂರು ಮಕ್ಕಳಿಗೆ ಸ್ವದೇಶಿ, ಒಂದು ಮಗುವಿಗೆ ವಿದೇಶಿ ದತ್ತು ಪ್ರಕ್ರಿಯೆ ಭಾಗ್ಯ

ಕಾರವಾರ: ಅನಾಥ, ತ್ಯಜಿಸಲ್ಪಟ್ಟ ಹಾಗೂ ಪಾಲಕರ ಆರೈಕೆಯಿಂದ ವಂಚಿತ ಮಕ್ಕಳಿಗೆ ಶಾಶ್ವತ ಕುಟುಂಬ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ದತ್ತು ಪ್ರಕ್ರಿಯೆಗೆ ಹೆಚ್ಚಿನ ಚುರುಕು ನೀಡಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ಎನ್. ತಿಳಿಸಿದ್ದಾರೆ. ದತ್ತು ಪ್ರಕ್ರಿಯೆಯನ್ನು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ–2015 ಹಾಗೂ ದತ್ತು ನಿಯಮಾವಳಿ–2022ರ ಪ್ರಕಾರ ನಡೆಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಮಕ್ಕಳ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸ್ವದೇಶಿ ದತ್ತು ಪ್ರಕ್ರಿಯೆಯಲ್ಲಿ ಭಾರತೀಯ ನಾಗರಿಕರು ದೇಶದೊಳಗಿನ ಮಕ್ಕಳನ್ನು […]

Continue Reading

ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಹಾದಿಯಲ್ಲಿ ಡಾ. ರಾಜೇಂದ್ರಕುಮಾರ್, ಅರ್ಥಪೂರ್ಣ ಪ್ರತಿಭಾ ಪುರಸ್ಕಾರ

ಮಂಗಳೂರು: ಶಿಕ್ಷಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಅವರ ಸಾಧನೆಗೆ ಮನ್ನಣೆ ನೀಡುವುದಷ್ಟೇ ಅಲ್ಲ, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ಆಗುತ್ತದೆ. ಪ್ರತಿಭಾವಂತರು ಸಮಾಜ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಹೊಣೆಗಾರಿಕೆಯನ್ನು ಮನಗಂಡು ಮುಂದುವರೆಯಬೇಕು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೇಳಿದರು. ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಇನ್ನಷ್ಟು ಎತ್ತರಕ್ಕೆ […]

Continue Reading

ಉ. ಕದಲ್ಲಿ ಜು. 9 ರವರೆಗೆ ಆರೆಂಜ್ ಅಲರ್ಟ್, ಭಾರಿ ಗಾಳಿ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜುಲೈ 5 ರಂದು ಮಧ್ಯಾಹ್ನ 1 ಗಂಟೆಯಿಂದ ಜುಲೈ 9 ರ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. […]

Continue Reading

ಬಾಲಕಿಗೆ ಲೈಂಗಿಕ ಕಿರುಕುಳ, ಪೋಕ್ಸೊ ಪ್ರಕರಣದಲ್ಲಿ ಮಂಕಿ ಪಿಎಸ್ಐ ಅಭಿನಂದನ್ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಪೋಕ್ಸೊ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಭಿನಂದನ್ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ […]

Continue Reading

ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ: ಅಪಹರಣ–ದರೋಡೆ ಪ್ರಕರಣ, ಮೂರು ಮಂದಿ ಬಂಧನ

ಮಂಗಳೂರು: ಮಹಾರಾಷ್ಟ್ರದಿಂದ ಕೇರಳಕ್ಕೆ ಕುಟುಂಬದ ಜತೆಗೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಅಪಹರಿಸಿ, ಕಾರು ಹಾಗೂ ಚಿನ್ನಾಭರಣ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿ ನಿವಾಸಿ ನಿಮಿಲ್ ಆರ್.ಕೆ. (37), ಆರೋಪಿಗಳಿಗೆ ತಲೆಮರೆಸಿಕೊಳ್ಳಲು ನೆರವು ನೀಡಿದ ಕೊಡಗು ಜಿಲ್ಲೆಯ ಅಕ್ಕತ್ತೂರು ನಿವಾಸಿ ಇರ್ಷಾದ್ (40) […]

Continue Reading

ಕಡಬ: 9 ಗ್ರಾ. ಪಂಗಳಲ್ಲಿ ಏಕಕಾಲಕ್ಕೆ ಶ್ರಮದಾನ, 45 ಕಿ.ಮೀ. ರಾಜ್ಯ ಹೆದ್ದಾರಿ ಸ್ವಚ್ಛತೆ, ಜಯಲಕ್ಷ್ಮೀ ರಾಯಕೋಡ್ ಚಾಲನೆ

ಕಡಬ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಉಪ್ಪಿನಂಗಡಿ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸುಮಾರು 45 ಕಿಲೋಮೀಟರ್‌ ವ್ಯಾಪ್ತಿಯನ್ನು ಕಡಬ ತಾಲೂಕಿನ 9 ಗ್ರಾಮ ಪಂಚಾಯತ್‌ಗಳಲ್ಲಿ ಶನಿವಾರ ಏಕಕಾಲದಲ್ಲಿ ಸ್ವಚ್ಛಗೊಳಿಸುವ ಮೂಲಕ ಬೃಹತ್ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ), ಕಡಬ ತಾಲೂಕು ಪಂಚಾಯತ್, ವಿವಿಧ ಗ್ರಾಮ ಪಂಚಾಯತ್‌ಗಳು, ಕಡಬ ಪಟ್ಟಣ ಪಂಚಾಯತ್ ಹಾಗೂ ವಿವಿಧ ಸಂಘ–ಸಂಸ್ಥೆಗಳು ಮತ್ತು ಇಲಾಖೆಗಳ ಸಹಯೋಗದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಕೊಯಿಲ, ರಾಮಕುಂಜ, ಆಲಂಕಾರು, ಪೆರಾಬೆ, […]

Continue Reading

ಸೇತುವೆ ಇಲ್ಲದ ಸಂಕಷ್ಟ: ಉಕ್ಕಿ ಹರಿಯುತ್ತಿದ್ದ ಭಾಸ್ಕೇರಿ ಹೊಳೆಯಲ್ಲಿ ಶವ ಹೊತ್ತು ಅಂತ್ಯಸಂಸ್ಕಾರ, ಮೂಲ ಸೌಕರ್ಯದಿಂದ ವಂಚಿತ ಗ್ರಾಮಸ್ಥರು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ದೊಡ್ಡ ಹಿತ್ತಲ ಗ್ರಾಮದಲ್ಲಿ ಮೂಲ ಸೌಕರ್ಯಗಳ ಕೊರತೆಯ ಮತ್ತೊಂದು ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯಲು ಉಕ್ಕಿ ಹರಿಯುತ್ತಿದ್ದ ಹೊಳೆಯನ್ನು ಗ್ರಾಮಸ್ಥರು ಜೀವದ ಹಂಗು ತೊರೆದು ದಾಟಿದ ಘಟನೆ ನಡೆದಿದೆ. ಈ ಘಟನೆ ಜಾಲತಾಣದಲ್ಲಿ ವೈರಲ್ ಅಗುತ್ತಿದ್ದು, ಬಾರಿ ಚರ್ಚೆಗೆ ಗ್ರಾಸವಾಗುತ್ತಿದೆ. ನಿರಂತರ ಮಳೆಯಿಂದ ಭಾಸ್ಕೇರಿ ಹೊಳೆ ತುಂಬಿ ಹರಿಯುತ್ತಿದ್ದು, ಗ್ರಾಮದ ಸಂಪರ್ಕ ರಸ್ತೆಯೂ ಜಲಾವೃತ ಆಗಿದೆ. ಈ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರಕ್ಕೆ […]

Continue Reading

ಓವರ್‌ಲೋಡ್ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಸರಕು ಸಾಗಿಸುತ್ತಿರುವ ಓವರ್‌ಲೋಡ್ ವಾಹನಗಳ ವಿರುದ್ಧ ತಕ್ಷಣ ಪ್ರಕರಣ ದಾಖಲಿಸುವಂತೆ ಹಾಗೂ ಜಿಲ್ಲೆಯಾದ್ಯಂತ ತಪಾಸಣೆಗಳನ್ನು ಮತ್ತಷ್ಟು ತೀವ್ರಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದೇ ರಸ್ತೆಗೆ ಸೀಮಿತವಾಗದೆ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ನಿಯಮಿತ ತಪಾಸಣೆ ನಡೆಸಿ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ […]

Continue Reading