ಬಜ್ಪೆ ಠಾಣೆಯ ಪೊಲೀಸರ ಎಡವಟ್ಟು, ಮಾಹಿತಿ ಕಲೆ ಹಾಕದೇ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್, ಇಬ್ಬರ ಅಮಾನತು

ಮಂಗಳೂರು: ಅಸ್ಸಾಂ ಹಾಗೂ ಬಿಹಾರ ಮೂಲದ 30 ಕ್ಕೂ ಹೆಚ್ಚು ಕಾರ್ಮಿಕರಿಗೆ ಸಮರ್ಪಕವಾಗಿ ಮಾಹಿತಿ ಕಲೆ ಹಾಕದೇ, ಪರಿಶೀಲನೆ ನಡೆಸದೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (ಪಿಸಿಸಿ) ನೀಡಿದ ಆರೋಪದ ಹಿನ್ನೆಲೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ಇಬ್ಬರು ಸಿಬ್ಬಂದಿಯನ್ನು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರು ಅಮಾನತು ಮಾಡಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಮಾನತುಗೊಂಡವರಲ್ಲಿ ಮಹಿಳಾ ಸಿಬ್ಬಂದಿ ಆಶಾ ಹಾಗೂ ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್ ಸೇರಿದ್ದಾರೆ. ವರ್ಷದ ಅವಧಿಯಲ್ಲಿ 31 ಮಂದಿಗೆ […]

Continue Reading

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ಮೊದಲ ಜೆಂಡರ್ ಅಫರ್ಮಿಂಗ್ ಯಶಸ್ವಿ ಶಸ್ತ್ರಚಿಕಿತ್ಸೆ, ವೈದ್ಯರ ಸಾಧನೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಟ್ರಾನ್ಸ್ಜೆಂಡರ್ ಮಹಿಳೆಗೆ ಮೊದಲ ಬಾರಿಗೆ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಚೆಗೆ ನಡೆದ ಈ ಶಸ್ತ್ರಚಿಕಿತ್ಸೆ ನಂತರ ರೋಗಿ ವೈದ್ಯಕೀಯ ತಂಡದ ಆರೈಕೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಸಂಯುಕ್ತ ತಂಡವು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಎರಡೂ ವಿಭಾಗಗಳ ನಿಕಟ ಸಮನ್ವಯದಲ್ಲಿ ಹಲವು ಗಂಟೆಗಳ ಕಾಲ ಕಾರ್ಯ ನಡೆದಿದೆ. ಪ್ಲಾಸ್ಟಿಕ್ ಸರ್ಜರಿ ವಿಭಾಗವು ಇದಕ್ಕೂ ಮುನ್ನ ಮುಖದ ಸ್ತ್ರೀಕರಣ ಮತ್ತು […]

Continue Reading

ಶಾಲೆ ಅನುಮತಿ ನವೀಕರಣಕ್ಕೆ ಲಂಚ: ಶಿಕ್ಷಣ ಇಲಾಖೆಯ ಎಫ್‌ಡಿಸಿ ಲೋಕಾಯುಕ್ತ ಬಲೆಗೆ

ರಾಯಚೂರು: ಖಾಸಗಿ ಶಾಲೆಯ ಅನುಮತಿ ನವೀಕರಣಕ್ಕೆ ಲಂಚ ಬೇಡಿಕೆ ಇಟ್ಟಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಸಿ)ಯನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ. ಬಂಧಿತನನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಫ್‌ಡಿಸಿ ಮಹಾಬಲೇಶ್ವರ ಎಸ್ ಎಂದು ಗುರುತಿಸಲಾಗಿದೆ. ರಾಂಪುರದ ಸಿದ್ಧಪ್ಪ ಅವರಿಗೆ ಸೇರಿದ ವಿದ್ಯಾಜ್ಯೋತಿ ಶಾಲೆಯ ಅನುಮತಿ ನವೀಕರಣ ಪ್ರಕ್ರಿಯೆ ಪೂರ್ಣಗೊಳಿಸಲು ಆರೋಪಿಯು 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಲಂಚ ನೀಡಲು ಇಚ್ಛಿಸದ ಸಿದ್ಧಪ್ಪ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಅದರಂತೆ […]

Continue Reading

ಸಾವಯವ ಕೃಷಿಕರ ಮಾವು–ಹಲಸು ಮೇಳ, ವಿವಿಧ ತಳಿಯ ಮಾವು, ಹಲಸು ಪ್ರದರ್ಶನ, ಮಾರಾಟ: ಕಲ್ಕೂರ

ಮಂಗಳೂರು: ಕಲ್ಕೂರ ಪ್ರತಿಷ್ಠಾನ ಮಂಗಳೂರು ಹಾಗೂ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಕಾರದಲ್ಲಿ ಸಾವಯವ ಕೃಷಿಕರು ಬೆಳೆಸಿದ ವಿಶಿಷ್ಟ ತಳಿಗಳ ಮಾವು ಮತ್ತು ಹಲಸಿನ ಸಮೃದ್ಧಿಯನ್ನು ಪರಿಚಯಿಸುವ ಮಾವು–ಹಲಸು ಮೇಳವನ್ನು ಜೂನ್ 20 ಮತ್ತು 21ರಂದು ನಗರದ ಕದ್ರಿ ಕಂಬಳ ಮಲ್ಲಿಕಾ ಬಡಾವಣೆಯ ‘ಮಂಜು ಪ್ರಾಸಾದ’ದ ಆವರಣದಲ್ಲಿ ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ಆಯೋಜನೆ ಮಾಡಲಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ನಾಡು–ನುಡಿ ಜಾಗೃತಿ ಸಮ್ಮೇಳನ ಸರಣಿ […]

Continue Reading

ಎತ್ತಿನಹೊಳೆ ಯೋಜನೆಯ ವೈಜ್ಞಾನಿಕ ಸಮೀಕ್ಷೆ ನಡೆಸಿ: ವೇಕಾನಂದ ಸಾಲಿನ್ಸ್

ಮಂಗಳೂರು: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರುಣಿಸುವ ಉದ್ದೇಶದಿಂದ ಆರಂಭಿಸಿರುವ ಎತ್ತಿನಹೊಳೆ ಯೋಜನೆ ಕುರಿತು ಸಮಗ್ರ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಹಾಗೂ ಕರಾವಳಿಯ ಪರಿಸರ ವ್ಯವಸ್ಥೆ ರಕ್ಷಿಸಲು ಸರ್ಕಾರ ಖಚಿತ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಉಡುಪಿ ವಾರಾಹಿ ನೀರಾವರಿ ಯೋಜನೆ, ಎಡದಂಡೆ ಕಾಲುವೆ ಹಾಗೂ ಅಕ್ವಿಡಕ್ಟ್ ಯೋಜನೆಗಳಿಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚವಾಗಿದ್ದರೂ ನಾಲ್ಕು ದಶಕಗಳ ಬಳಿಕವೂ ಪೂರ್ಣಗೊಂಡಿಲ್ಲ. ಇದೇ ರೀತಿಯಾಗಿ […]

Continue Reading

ಬಾಂಬ್ ಬೆದರಿಕೆ, ಬಾಗಲಕೋಟೆ, ದಾವಣಗೆರೆ, ಧಾರವಾಡ, ಕೋಲಾರ ಕೋರ್ಟ್‌ಗಳಲ್ಲಿ ಆತಂಕ; ಶೋಧ ಕಾರ್ಯ ಬಳಿಕ ಸುರಕ್ಷತೆ ಖಚಿತ

ಬೆಂಗಳೂರು: ಬಾಗಲಕೋಟೆ, ದಾವಣಗೆರೆ, ಧಾರವಾಡ ಹಾಗೂ ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಇ-ಮೇಲ್‌ಗಳ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ karunanidhi.kundi@underworld.dog ಎಂಬ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದ್ದು, ಮಧ್ಯಾಹ್ನ 2 ಗಂಟೆಗೆ ಸ್ಫೋಟ ಸಂಭವಿಸುವುದಾಗಿ ಉಲ್ಲೇಖಿಸಲಾಗಿತ್ತು. ಚಿತ್ರದುರ್ಗದಿಂದ ಮೊದಲು ಈ ಸಂದೇಶ ಬಂದಿದ್ದು ಬಳಿಕ ಬಾಗಲಕೋಟೆಗೆ ರವಾನೆ ಆಗಿರುವುದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ […]

Continue Reading

ವಿಧಾನ ಪರಿಷತ್ ಫೈಟ್: ಕಾಂಗ್ರೆಸ್‌ಗೆ 5 ಸ್ಥಾನಗಳ ಭರ್ಜರಿ ಗೆಲುವು, ಅಡ್ಡ ಮತದಾನ ಓಟಿಂಗ್ ಏಟು, ಮೈತ್ರಿ ಸದಸ್ಯರಿಂದಲೇ ಕೈಗೆ ಮತ, ಜೆಡಿಎಸ್ ಗೆ ಹೀನಾಯ ಸೋಲು

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ಐವರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಚುನಾವಣಾ ಫಲಿತಾಂಶವು ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣ ಆಗಿದೆ. ಚುನಾವಣೆಯಲ್ಲಿ ಮೈತ್ರಿ ಪಕ್ಷದ ಕೆಲವು ಶಾಸಕರು ಅಡ್ಡಮತದಾನ ಮಾಡಿರುವುದು ಫಲಿತಾಂಶದ ಮೇಲೆ ಮಹತ್ವದ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. ಬಿಜೆಪಿ 3 ರಿಂದ 4 ಮಂದಿ ಹಾಗೂ ಜೆಡಿಎಸ್‌ 6 ರಿಂದ 7 ಮಂದಿ ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ ಎಂಬ ಮಾಹಿತಿ ಲಭ್ಯ […]

Continue Reading

ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಆಯೋಗ ಬದ್ದ: ಯು. ನಿಸಾರ್ ಅಹಮದ್

ಕಾರವಾರ: ರಾಜ್ಯದಲ್ಲಿನ ಅಲ್ಪಸಂಖ್ಯಾತರ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸದಿದ್ದರೆ ಅವರನ್ನು ಆಯೋಗಕ್ಕೆ ಕರೆಸಿ ನಿರ್ದೇಶನ ನೀಡುವ ಹಾಗೂ ಅಗತ್ಯವಿದ್ದರೆ ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿನ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ, ಸಿಖ್ […]

Continue Reading

ಅಲ್ಪಸಂಖ್ಯಾತರ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಿ: ಯು. ನಿಸಾರ್ ಅಹಮದ್

ಕಾರವಾರ: ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿರುವ ಕಾರ್ಯಕ್ರಮಗಳ ಸಂಪೂರ್ಣ ಪ್ರಯೋಜನವನ್ನು ಸಮುದಾಯದ ಜನತೆಗೆ ಸಮರ್ಪಕವಾಗಿ ತಲುಪಿಸುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳು ಕಡ್ಡಾಯ ಶಿಕ್ಷಣ ಪಡೆಯುವಂತೆ ಹಾಗೂ ಶಾಲೆಯಿಂದ ಹೊರಗುಳಿಯದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ […]

Continue Reading

ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ: ಪ್ರಜಾಪ್ರಭುತ್ವ ಬಲಪಡಿಸಲು ಬಿಜೆಪಿ ಸಹಕಾರ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ತೆರವಾಗಿರುವ ಸ್ಥಾನಗಳ ಭರ್ತಿಗಾಗಿ ವಿಧಾನಸೌಧದಲ್ಲಿ ಗುರುವಾರ ನಡೆದ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಬಿಜೆಪಿ ಸದಸ್ಯರು ಮತವನ್ನು ಚಲಾಯಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವ ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ಸ್ಪರ್ಧಿಸುತ್ತಿರುವ ಇಬ್ಬರೂ ಅಭ್ಯರ್ಥಿಗಳು ಭರ್ಜರಿ ವಿಜಯ ಸಾಧಿಸಲಿದ್ದಾರೆ ಎಂದು ಆರ್ ಅಶೋಕ ಹೇಳಿದರು. ಅವರು ವಿಧಾನ ಪರಿಷತ್ತಿನಲ್ಲಿ ಜನಸಾಮಾನ್ಯರ ಆಶೋತ್ತರಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳನ್ನು ಪರಿಣಾಮಕಾರಿಯಾಗಿ […]

Continue Reading