ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ ರೂ 10 ಪೈಸೆ ಮರುಪಾವತಿ: ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಂಪೀರ್ ಖಾದ್ರಿ

ಕಾರವಾರ: ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಾರ್ಗದರ್ಶನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಹೆಸ್ಕಾಂ, 2024-25 ರ ಸಾಲಿನಲ್ಲಿ 153.46 ಕೋಟಿ ರೂ. ಉಳಿತಾಯ ಮಾಡಿದ್ದು, ಈ ಹಣವನ್ನುಗ್ರಾಹಕರಿಗೆ ಮರು ಪಾವತಿಸಲಾಗುತ್ತಿದೆ ಎಂದು ಹೆಸ್ಕಾಂ ಅಧ್ಯಕ್ಷ  ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಂಪೀರ್ ಖಾದ್ರಿ ಅವರು ತಿಳಿಸಿದ್ದಾರೆ. ವಿದ್ಯುತ್ ಖರೀದಿ, ಪೂರೈಕೆಯನ್ನು ಉತ್ತಮವಾಗಿ ನಿರ್ವಹಿಸಿದ ಪರಿಣಾಮ 2024-2025ರಲ್ಲಿ ಹೆಸ್ಕಾಂ 153.46 ಕೋಟಿ ರೂ. ಉಳಿತಾಯ ಮಾಡಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್ಸಿ) ಆದೇಶದ ಅನ್ವಯ 2024-25 ನೇ ಆರ್ಥಿಕ ವರ್ಷದ […]

Continue Reading

17, 18 ರಂದು ಕದ್ರಿ ಪಾರ್ಕ್ ನಲ್ಲಿ ರಾಜ್ಯ ಮಟ್ಟದ ಗೇರು ಮೇಳ, ಕಾರ್ಯಾಗಾರ, ಪೋಸ್ಟರ್ ಬಿಡುಗಡೆಗೊಳಿಸಿದ ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಕರಾವಳಿಯ ವಾಣಿಜ್ಯ ಬೆಳೆ ಗೇರು ಬೆಳೆಯ ಮಹತ್ವದ ಕುರಿತು ಬೆಳೆಗಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಿಟ್ಟಿನಲ್ಲಿ ಗೇರು ಮೇಳ ಪ್ರಮುಖ ಹೆಜ್ಜೆಯಾಗಿದೆ ಎಂದು ಸ್ಪೀಕರ್ ಯು. ಟಿ. ಖಾದರ್ ಅವರು ಹೇಳಿದರು. ಶನಿವಾರ ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ರಾಜ್ಯ ಅರಣ್ಯ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗೇರು ಮೇಳದ ಭಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರಾವಳಿಯಲ್ಲಿ ಗೇರು ಉದ್ಯಮ ಸಾಕಷ್ಟು ಕುಟುಂಬಕ್ಕೆ ಆಧಾರ ಆಗಿತ್ತು. ಬೆಳೆ ಕುಂಠಿತ ಆದ ಕಾರಣ […]

Continue Reading

ಆಳ್ವಾಸ್ ಪದವಿಪೂರ್ವ ಕಾಲೇಜು: ಎನ್‌ಡಿಎ ಪರೀಕ್ಷೆಯಲ್ಲಿ 24 ಮಂದಿ ವಿದ್ಯಾರ್ಥಿಗಳು ಉತ್ತೀರ್ಣ

ಮೂಡುಬಿದಿರೆ: ಕೇಂದ್ರದ ಲೋಕಸೇವಾ ಆಯೋಗದ ಮೂಲಕ ನಡೆಯುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 24 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ರಾಷ್ಟ್ರದ ಗಮನ ಸೆಳೆದಿದ್ದಾರೆ. ಭಾರತೀಯ ಸೇನೆ, ನೌಕಾಪಡೆ ಹಾಗೂ ವಾಯುಪಡೆಯ ಅಧಿಕಾರಿಗಳಾಗಲು ಎನ್‌ಡಿಎ ಪ್ರಮುಖ ಘಟ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸಮರ್ಥವಾಗಿ ಸಿದ್ಧಗೊಳಿಸುವ ಕಾರ್ಯವನ್ನು ಆಳ್ವಾಸ್ ಪದವಿಪೂರ್ವ ಕಾಲೇಜು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಾದ ವಿವೇಕ್ ಎ, ಅದ್ವೈತ್ ವಿಕ್ರಾಂತ್ ಶೆಂಡೆ, ಅಮೋಘ್ ನಾಗರಾಜ್ ಬಿಲ್ಲೂರ್, ಮೊಹಮ್ಮದ್ ಯೂಸುಫ್ […]

Continue Reading

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತ ಎಲ್ಲ ನಿರ್ಧಾರಗಳನ್ನೂ ಪಕ್ಷದ ವರಿಷ್ಠರೇ ಕೈಗೊಳ್ಳುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು. ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ನೇರ ಉತ್ತರ ನೀಡದೇ, ಯಾವುದೇ ತೀರ್ಮಾನವಾದರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಇದಕ್ಕೆ ಎಲ್ಲರೂ ಬದ್ಧರಾಗಿದ್ದೇವೆ. ಸರ್ಕಾರಕ್ಕೆ ಮೂರು ವರ್ಷ ಪೂರ್ತಿಯಾದ ಬಳಿಕ ವಿಸ್ತರಣೆ ಮಾಡುವ ಚರ್ಚೆ ನಡೆದಿತ್ತು. ಕೇರಳದಲ್ಲಿ ಸರ್ಕಾರ ರಚನೆಯ ನಂತರ ಪಕ್ಷದ ವರಿಷ್ಠರು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು. […]

Continue Reading

ಎಂಐಒ ಆಸ್ಪತ್ರೆಯ ಡಾ. ವಿಶ್ವಪ್ರಿಯಾ ಗೋದ್ಖಿಂಡಿಗೆ ಪ್ರತಿಷ್ಠಿತ ಯುರೋಪಿಯನ್ ಪೆಥಾಲಜಿ ಗೌರವ

ಮಂಗಳೂರು: ಇಲ್ಲಿನ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಅಂಕಾಲಜಿ (ಎಂಐಒ) ಆಸ್ಪತ್ರೆಯಲ್ಲಿ ಪೆಥಾಲಜಿ ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ವಿಶ್ವಪ್ರಿಯಾ ಗೋದ್ಖಿಂಡಿ ಅವರು ಯುರೋಪಿಯನ್ ಸೊಸೈಟಿ ಆಫ್ ಪೆಥಾಲಜಿ ಅಕಾಡೆಮಿ–2026 ರ ಗೌರವಕ್ಕೆ ಭಾಜನರಾಗಿದ್ದಾರೆ ಎಂದು ಎಂಐಒ ಆಸ್ಪತ್ರೆಯ ನಿರ್ದೇಶಕ ಡಾ. ಸುರೇಶ್ ರಾವ್ ಅವರು ತಿಳಿಸಿದ್ದಾರೆ. ಪೆಥಾಲಜಿ ಕ್ಷೇತ್ರದಲ್ಲಿ ಅವರ ಶೈಕ್ಷಣಿಕ ಹಾಗೂ ವೃತ್ತಿಪರ ಸಾಧನೆ ಗುರುತಿಸಿ ಈ ಗೌರವ ಲಭಿಸಿದೆ. 2026ನೇ ಸಾಲಿನಲ್ಲಿ ಯೂರೋಪಿಯನ್ ಸೊಸೈಟಿ ಆಫ್ ಪಥಾಲಜಿ ವತಿಯಿಂದ ಆಯ್ಕೆಯಾದ ಏಕೈಕ ಭಾರತೀಯ ಪ್ರಶಸ್ತಿ […]

Continue Reading

ಮಂಗಳೂರಿನಲ್ಲಿ ಜೆಎಲ್‌ಆರ್ ಇಂಡಿಯಾ ನೂತನ ಮಳಿಗೆಗೆ ರಾಜನ್ ಅಂಬಾ ಚಾಲನೆ

ಮಂಗಳೂರು: ಐಷಾರಾಮಿ ಕಾರುಗಳ ವಿಭಾಗದಲ್ಲಿ ಮಂಗಳೂರು, ದಕ್ಷಿಣ ಭಾರತದ ಅತ್ಯಂತ ಪ್ರಮುಖ ಮಾರುಕಟ್ಟೆ ಆಗಿದೆ. ಇಲ್ಲಿ ನಮ್ಮ ನೂತನ ಘಟಕವನ್ನು ಆರಂಭಿಸಲು ನಮಗೆ ಸಂತೋಷ ಆಗಿದೆ. ಕರ್ನಾಟಕದಲ್ಲಿ ಮತ್ತು ಈ ಭಾಗದಲ್ಲಿ ನಮ್ಮ ಗ್ರಾಹಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ಈ ಹೆಜ್ಜೆ ಇಟ್ಟಿದ್ದೇವೆ” ಎಂದು ಪ್ರತಿಷ್ಠಿತ ಐಷಾರಾಮಿ ಕಾರು ತಯಾರಿಕಾ ಸಂಸ್ಥೆ ಜೆಎಲ್‌ಆರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ರಾಜನ್ ಅಂಬಾ ಅವರು ತಿಳಿಸಿದರು. ಮಂಗಳೂರಿನ ಕೊಟ್ಟಾರದಲ್ಲಿ ಇರುವ ಜೆಎಲ್‌ಆರ್ ಇಂಡಿಯಾದ ಸೇವಾ ಮತ್ತು ಬಿಡಿಭಾಗಗಳ ಕೇಂದ್ರದ ಪಕ್ಕದಲ್ಲೇ ಸಂಸ್ಥೆಯು […]

Continue Reading

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠ, ಸ್ಥಳ ಪರಿಶೀಲನೆ: ಐವನ್ ಡಿಸೋಜ ಶೀಘ್ರವೇ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಮಂಗಳೂರಿಗೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ , ಚಿಕ್ಕಮಗಳೂರು, ಕೊಡಗು ಜಿಲ್ಲೆಗಳನ್ನು ಒಳಗೊಂಡು ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಹಾಗೂ ಕಾಯಂ ಪೀಠ ಸ್ಥಾಪಿಸಬೇಕು ಎಂಬ ಬೇಡಿಕೆ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಮನವರಿಕೆ ಆಗಿದ್ದು, ಅವರೇ ಸ್ಥಳ ಪರಿಶೀಲನೆಗೆ ಬರುವುದಾಗಿ ಒಪ್ಪಿಕೊಂಡಿದ್ದಾರೆ. ಶೀಘ್ರವೇ ಅವರು ಮಂಗಳೂರಿಗೆ ಭೇಟಿ ನೀಡುವ ದಿನವು ನಿಗದಿ ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳೀಸಿದರು. ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೈಕೋರ್ಟ್ ಸಂಚಾರ […]

Continue Reading

ಸಂವಿಧಾನದ 10 ನೇ ವಿಧಿ ಬಲಿಷ್ಠಗೊಳಿಸುವುದಕ್ಕೆ ಲೋಕಸಭೆ ವರದಿ ಮಂಡನೆ ಪಕ್ಷಾಂತರ ನಿಷೇಧ ಕಾಯ್ದೆ, ಜೂನ್ ನಲ್ಲಿ ಸಮಿತಿ ಸಭೆ- ಸ್ಪೀಕರ್ ಖಾದರ್

ಮಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆ ಕುರಿತಂತೆ ಲೋಕಸಭೆಯ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ 3 ನೇ ಸಭೆ ರಾಜ್ಯದಲ್ಲಿ ಜೂನ್ ತಿಂಗಳ ಅಂತ್ಯದಲ್ಲಿ ನಡೆಯಲಿದ್ದು, ಬಳಿಕ ಸಮಿತಿ ತನ್ನ ವರದಿ ಲೋಕಸಭೆಗೆ ಮಂಡಿಸಲಿದೆ ಎಂದು ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಚುನಾಯಿತ ಪ್ರತಿನಿಧಿಗಳು ಮತ್ತೇ ಮತ್ತೇ ಪಕ್ಷಾಂತರ ಮಾಡುವುದ್ನು ತಡೆಯುವ ಉದ್ದೇಶದಿಂದ ಸಂವಿಧಾನದ 10 ನೇ ವಿಧಿ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸ್ಪೀಕರ್ […]

Continue Reading

ಮಾತಾ ಅಮೃತಾನಂದಮಯಿಮ ಮಠಕ್ಕೆ 28ಕ್ಕೆ ಅಮ್ಮ ಭೇಟಿ, ಚಪ್ಪರ ಮುಹೂರ್ತ ಅಮ್ಮ ನಡೆದಾಡುವ, ಮಾತನಾಡುವ ದೇವರು: ಮಾಜಿ ಸಂಸದ ಕಟೀಲ್

ಮಂಗಳೂರು: ಮಾತಾ ಅಮೃತಾನಂದಮಯಿ ಮಠಕ್ಕೆ ಮೇ 28 ರಂದು ಆಗಮಿಸುವ ಸದ್ಗುರು ಮಾತಾ ಅಮೃತಾನಂದಮಯಿ ದೇವಿ ಅವರ ಕಾರ್ಯಕ್ರಮ” ಬ್ರಹ್ಮಸ್ಥಾನಂ ಮಹೋತ್ಸವ ಮತ್ತು ಅಮೃತಸಂಗಮ ಅಂಗವಾಗಿ ಚಪ್ಪರ ಮುಹೂರ್ತ ನಡೆಯಿತು. ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ನಡೆದ ಈ‌ ಕಾರ್ಯಕ್ರಮದಲ್ಲಿ ನಿಕಟಪೂರ್ವ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ವಿಧ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿ, ಮಾನವ ಮಹಾದೇವತ್ವಕ್ಕೆ ಏರುವ ಪುಣ್ಯಭೂಮಿ ಭಾರತ. ನಡೆದಾಡುವ , ಮಾತನಾಡುವ ದೇವರು ಮಾತಾ ಅಮೃತಾನಂದಮಯಿ ದೇವಿ, ಅವರು ಜಗತ್ತಿಗೆ […]

Continue Reading

ಇಂಧನ ಸಚಿವ ಕೆ.ಜೆ. ಜಾರ್ಜ್ ನಿರ್ದೇಶನ: ಕೆಪಿಟಿಸಿಎಲ್ ಎಂಡಿ ಡಾ. ರಾಮ್ ಪ್ರಸಾತ್ ಮನೋಹರ್-ಜುಲೈ 𝟭𝟱ರೊಳಗೆ ಕಡಂದಲೆ 400 ಕೆ.ವಿ ಉಪಕೇಂದ್ರ ಕಾಮಗಾರಿ ಪೂರ್ಣ ಗುರಿ

ಮಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನದಂತೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ ತಡೆರಹಿತ, ಉತ್ತಮ ಗುಣಮಟ್ಟದ ವಿದ್ಯುತ್ ಸೌಲಭ್ಯ ಒದಗಿಸುವ ‘ಕಡಂದಲೆ 400 ಕೆವಿ ವಿದ್ಯುತ್ ಉಪಕೇಂದ್ರ’ ಕಾಮಗಾರಿ ಜುಲೈ 15 ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಬುಧವಾರ ತಿಳಿಸಿದ್ದಾರೆ. ಭೂವ್ಯಾಜ್ಯದ ಕಾರಣದಿಂದಾಗಿ ಮೂರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲ್ಲೂಕಿನ ಕಡಂದಲೆ ಗ್ರಾಮದಲ್ಲಿ 400 […]

Continue Reading