Sample Page

ಎಸ್‌ಐಆರ್‌, ಸೆಪ್ಟೆಂಬರ್ ಅಂತ್ಯದೊಳಗೆ ಮೊದಲ ನೋಟಿಸ್ ಪ್ರಕರಣಗಳ ವಿಚಾರಣೆ ಪೂರ್ಣ:ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026ರಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದಿರುವ ಹಾಗೂ ಮ್ಯಾಪಿಂಗ್‌ನಲ್ಲಿ ತಾರ್ಕಿಕ ವ್ಯತ್ಯಾಸ ಹೊಂದಿರುವ ಪ್ರಕರಣಗಳ ಮೊದಲ ನೋಟಿಸ್‌ಗಳ ವಿಚಾರಣೆಯನ್ನು ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದಿರುವ ಹಾಗೂ ತಾರ್ಕಿಕ ವ್ಯತ್ಯಾಸ ಹೊಂದಿರುವ ಒಟ್ಟು 65,248 ಪ್ರಕರಣಗಳಿವೆ. ಈ ಪೈಕಿ 64,749 […]

Continue Reading

ಕಾರು ತೆರವು ವಿಚಾರ: ವಿಧಾನಸೌಧದಲ್ಲಿ ಡಿಸಿಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ವಿಧಾನಸಭೆ ಕಲಾಪ ಮುಗಿಸಿ ಹೊರಬಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರನ್ನು ವಿಧಾನಸೌಧದ ಪಶ್ಚಿಮ ದ್ವಾರದಿಂದ ಪಾರ್ಕಿಂಗ್ ಸ್ಥಳಕ್ಕೆ ಸ್ಥಳಾಂತರಿಸಿದ್ದ ವಿಚಾರ ಸೋಮವಾರ ಕೆಲಕಾಲ ಬಿಗುವಿನ ವಾತಾವರಣಕ್ಕೆ ಕಾರಣವಾಯಿತು. ಕಾರು ಕಾಣದೆ ಕಾಯಬೇಕಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ, ವಿಧಾನಸೌಧದ ಭದ್ರತಾ ಉಸ್ತುವಾರಿ ಡಿಸಿಪಿ ಯೋಗೇಶ್ ಅವರನ್ನು ಸ್ಥಳದಲ್ಲೇ ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸಭೆ ಕಲಾಪ ಮುಗಿದ ಬಳಿಕ ಸಿದ್ದರಾಮಯ್ಯ ಅವರು ಕೆಂಗಲ್ ಹನುಮಂತಯ್ಯ ಗೇಟ್ ಎಂದೇ ಕರೆಯಲಾಗುವ ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೂಲಕ ಹೊರಬಂದರು. ಆದರೆ […]

Continue Reading

ಕಸ್ತೂರಿ ರಂಗನ್ ವರದಿ; ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರ ನೇಮಕ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್‌ ನಲ್ಲಿ ರಾಜ್ಯದ ಸ್ಪಷ್ಟ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರನ್ನು ನೇಮಿಸಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಂಗಳವಾರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಸಿಎಂ ಮಂಗಳವಾರ ಉತ್ತರಿಸಿದರು. ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು ಕಸ್ತೂರಿ ರಂಗನ್ ವರದಿ ಜಾರಿ ಹಿನ್ನೆಯಲ್ಲಿ ಕೇಂದ್ರ […]

Continue Reading

ಕಸ್ತೂರಿರಂಗನ್ ವರದಿ ಜಾರಿಗೆ ಮುನ್ನ ಜನರ ಅಹವಾಲು ಆಲಿಸಿ: ಅಮಿತ್ ಶಾಗೆ ಪೇಜಾವರ ಶ್ರೀಗಳ ಮನವಿ

ಉಡುಪಿ: ಕಸ್ತೂರಿರಂಗನ್ ವರದಿ ಜಾರಿಗೂ ಮುನ್ನ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿರುವ ಜನರ ಅಹವಾಲುಗಳನ್ನು ಆಲಿಸುವಂತೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯ ವಸಂತ್ ಕುಂಜ್‌ನಲ್ಲಿರುವ ಪೇಜಾವರ ಶಾಖಾಮಠ ವೇದವ್ಯಾಸ ಗುರುಕುಲದ ಶ್ರೀಕೃಷ್ಣಧಾಮದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಸೋಮವಾರ ಅಮಿತ್ ಶಾ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಕಸ್ತೂರಿರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಪಶ್ಚಿಮ […]

Continue Reading

ಚಂಡಮಾರುತ ವಿಪತ್ತು ನಿರ್ವಹಣೆ ಅಣಕು ಕಾರ್ಯಾಚರಣೆ: ಸಿದ್ಧತೆ ಕೈಗೊಳ್ಳಲು ಎಡಿಸಿ ಸಾಜಿದ್ ಮುಲ್ಲಾ ಸೂಚನೆ

ಕಾರವಾರ: ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಗಳನ್ನು ಒಳಗೊಂಡಂತೆ ಅಕ್ಟೋಬರ್ 1ರಂದು ನಡೆಯಲಿರುವ ಅಂತಾರಾಜ್ಯ ಮಟ್ಟದ ಚಂಡಮಾರುತ ವಿಪತ್ತು ನಿರ್ವಹಣೆ ಅಣಕು ಕಾರ್ಯಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅಣಕು ಕಾರ್ಯಾಚರಣೆಯ ಪೂರ್ವಸಿದ್ಧತೆ ಹಾಗೂ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಗೃಹ ವ್ಯವಹಾರಗಳ ಸಚಿವಾಲಯ ಹಾಗೂ ಭಾರತ ಸರ್ಕಾರದ ನಿರ್ದೇಶನದಂತೆ ಈ ಅಣಕು […]

Continue Reading

ಅಪಘಾತದಲ್ಲಿ ಗಾಯಗೊಂಡ ರಮಾನಾಥ ರೈ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಗೆ ಗಣ್ಯರ ಭೇಟಿ

ಮಂಗಳೂರು: ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈ ಅವರು, ದೇವರ ದಯೆ ಹಾಗೂ ಜನರ ಪ್ರಾರ್ಥನೆಯಿಂದ ಆರೋಗ್ಯವಾಗಿದ್ದೇನೆ ಎಂದು ಆಸ್ಪತ್ರೆಯಿಂದಲೇ ತಿಳಿಸಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸೋಮವಾರ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ರಮಾನಾಥ ರೈ ಹಾಗೂ ಅಪಘಾತದಲ್ಲಿ ಗಾಯಗೊಂಡಿರುವ ಅವರ ಆಪ್ತ ಸಹಾಯಕ ಡೆಂಜಿಲ್ ಮತ್ತು ಕಾರು […]

Continue Reading

ಕಸ್ತೂರಿರಂಗನ್ ವರದಿ ವಿಚಾರ: ವಿಧಾನಸಭೆಯಲ್ಲಿ ರಾಜಕೀಯ ಕಾವು; ಸರ್ವಪಕ್ಷ ನಿಯೋಗಕ್ಕೆ ಡಿಕೆಶಿ ಪ್ರಸ್ತಾಪ

ಬೆಂಗಳೂರು: ಕಸ್ತೂರಿರಂಗನ್ ವರದಿ ಜಾರಿ ವಿಚಾರ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನವೇ ಪ್ರಮುಖ ಚರ್ಚೆಗೆ ಕಾರಣವಾಯಿತು. ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶದ ರೈತರು, ಜನಸಾಮಾನ್ಯರು ಮತ್ತು ಪರಿಸರದ ಮೇಲೆ ವರದಿಯಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಸುದೀರ್ಘ ಚರ್ಚೆ ನಡೆಸಿದರು. ವರದಿ ವಿಚಾರದಲ್ಲಿ ರಾಜಕೀಯ ಬೇಡ: ಡಿಕೆಶಿ ಚರ್ಚೆ ಆರಂಭಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಸ್ತೂರಿರಂಗನ್ ವರದಿ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು. ಮಲೆನಾಡು ಹಾಗೂ ಪಶ್ಚಿಮ […]

Continue Reading

ಮೂಡುಬಿದಿರೆ ಮಿಜಾರಿನಲ್ಲಿ ಆಳ್ವಾಸ್ ವೈದ್ಯಕೀಯ ಕಾಲೇಜು ಲೋಕಾರ್ಪಣೆ: ಆಳ್ವಾಸ್ ಗೆ ತಿಂಗಳೊಳಗೆ ಡೀಮ್ಡ್ ವಿವಿ ಮಾನ್ಯತೆ: ಸಚಿವ ಪ್ರಹ್ಲಾದ್ ಜೋಶಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡೀಮ್ಡ್ ಯೂನಿವರ್ಸಿಟಿ ಸ್ಥಾನಮಾನದ ಪ್ರಸ್ತಾವನೆಗೆ ಸಂಬಂಧಿಸಿದ ಅಗತ್ಯ ಸ್ಪಷ್ಟೀಕರಣ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಒಂದು ತಿಂಗಳೊಳಗೆ ಅನುಮೋದನೆ ನೀಡುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದರು. ಮಿಜಾರಿನ ಶ್ರೀಮತಿ ಶೋಭಾ ಮೋಹನ ಆಳ್ವ ಆವರಣದ ಮಿಜಾರುಗುತ್ತು ಶ್ರೀಮತಿ ಸುಂದರಿ ಆನಂದ ಆಳ್ವ ವೇದಿಕೆಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್ (ಆಳ್ವಾಸ್ ಮೆಡಿಕಲ್ ಕಾಲೇಜು) ಅನ್ನು ಉದ್ಘಾಟಿಸಿ […]

Continue Reading

ಮಂಗಳೂರು ವೆನ್ಲಾಕ್‌ನಲ್ಲಿ ಮಹಾನ್ ಅಂಗದಾನ, ಇಬ್ಬರಿಗೆ ನವ ಜೀವನಕ್ಕೆ ನಾಂದಿ: ಡಾ. ಶಿವಪ್ರಕಾಶ್

ಮಂಗಳೂರು: ಮೆದುಳು ಮರಣದ ಬಳಿಕ ಅಂಗಾಂಗಗಳನ್ನು ದಾನ ಮಾಡುವ ಮೂಲಕ ನಾಲ್ವರು ರೋಗಿಗಳ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಿದ ಪ್ರಕಾಶ್ ಆಚಾರ್ಯ ಅವರ ಕುಟುಂಬದ ಮಾನವೀಯ ನಿರ್ಧಾರಕ್ಕೆ ಗೌರವಪೂರ್ವಕ ನಮನ ಸಲ್ಲಿಸುವುದಾಗಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ.ಎಸ್. ತಿಳಿಸಿದ್ದಾರೆ ಉಳ್ಳಾಲ ತಾಲ್ಲೂಕಿನ ಕೋಟೇಕಾರ್ ಸಮೀಪದ ಬೀರಿ, ಮದೂರು ಸೈಟ್ ನಿವಾಸಿ ಪ್ರಕಾಶ್ ಆಚಾರ್ಯ ಅವರು ಸೆಪ್ಟೆಂಬರ್ 14ರಂದು ಮನೆಯ ಮುಂದೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಅವರನ್ನು ವೆನ್ಲಾಕ್ […]

Continue Reading

ಎಜೆ ಆಸ್ಪತ್ರೆಯಲ್ಲಿ 15 ವರ್ಷದ ಬಾಲಕನ ತಲೆಬುರುಡೆ ತಳಭಾಗದ ಅಪರೂಪದ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: ಡಾ. ಪ್ರಶಾಂತ್ ಮಾರ್ಲ

ಮಂಗಳೂರು: ಅಪರೂಪದ ಹಾಗೂ ಅತ್ಯಂತ ಸಂಕೀರ್ಣ ವೈದ್ಯಕೀಯ ಪ್ರಕರಣಗಳ ಚಿಕಿತ್ಸೆಯಲ್ಲಿ ವಿವಿಧ ವಿಭಾಗಗಳ ತಜ್ಞರ ಪರಿಣತಿ ಮತ್ತು ಪರಸ್ಪರ ಸಮನ್ವಯ ಪ್ರಮುಖ ಪಾತ್ರ ವಹಿಸುತ್ತದೆ. ನಿಖರವಾದ ಪೂರ್ವಸಿದ್ಧತೆ, ಸೂಕ್ಷ್ಮ ಶಸ್ತ್ರಚಿಕಿತ್ಸಾ ನಿರ್ವಹಣೆ ಹಾಗೂ ಶಸ್ತ್ರಚಿಕಿತ್ಸೆಯ ಬಳಿಕದ ನಿರಂತರ ಆರೈಕೆಯಿಂದ ರೋಗಿಯ ಪ್ರಮುಖ ನರಗಳ ಕಾರ್ಯ ಮತ್ತು ದೃಷ್ಟಿಯನ್ನು ಸಂರಕ್ಷಿಸಲು ಸಾಧ್ಯ ಎಂದು ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಸರಗೋಡು ಜಿಲ್ಲೆಯ 15 ವರ್ಷದ ಬಾಲಕನ […]

Continue Reading