Sample Page

ಕಾರವಾರ ತಾಲೂಕು ಅಭಿವೃದ್ಧಿಗೆ ₹1,500 ಕೋಟಿಗೂ ಅಧಿಕ ಅನುದಾನ: ಶಾಸಕ ಸತೀಶ್ ಸೈಲ್

ಕಾರವಾರ: ತಾಲೂಕಿನಲ್ಲಿ 2023-24ನೇ ಸಾಲಿನಿಂದ ಇದುವರೆಗೆ ವಿವಿಧ ಇಲಾಖೆಗಳ ಮೂಲಕ ರಸ್ತೆ, ಕಟ್ಟಡ, ಚರಂಡಿ, ಸೇತುವೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೌಲಭ್ಯಗಳಿಗಾಗಿ 1,500 ಕೋಟಿಗೂ ಅಧಿಕ ಅನುದಾನ ಬಿಡುಗಡೆಯಾಗಿದೆ ಎಂದು ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ತಿಳಿಸಿದ್ದಾರೆ. ಕಾರವಾರ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ನಡೆದ ತಾಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಡುಗಡೆಯಾಗಿರುವ ಅನುದಾನದಲ್ಲಿ […]

Continue Reading

ಬರ ಬಂದಿದೆ, ಬೆಳೆ ಹಾಳಾಗಿದೆ ಎಂದು ಯೋಚನೆ ಮಾಡಬೇಡಿ, ‌ನಾನು, ನಮ್ಮ ಸರ್ಕಾರ ನಿಮ್ಮ ಜತೆಗಿದೆ: ಸಿಎಂ ಶಿವಕುಮಾರ್

ಬಾಗಲಕೋಟೆ: ಮಳೆ ಬಂದು ಎಷ್ಟು ದಿನ ಆಯಿತು? ಯಾವಾಗ ಬಿತ್ತನೆ ಮಾಡಿದ್ದು? ಎಷ್ಟು ಖರ್ಚಾಯಿತು ಎಂದು ಬಾಗಲಕೋಟೆಯ ಹುನಗುಂದದ ರೈತ ನಂದೆಪ್ಪ ಸಂಗಪ್ಪ ಬಾರಕೇರ ಅವರಿಂದ ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಯೊಂದು ಮಾಹಿತಿಯನ್ನೂ ಪಡೆದರು. ಯುವ ರೈತನ ತಂದೆ- ತಾಯಿಗೆ “ಬರ ಬಂದಿದೆ, ಬೆಳೆ ಹಾಳಾಗಿದೆ ಎಂದು ಯೋಚನೆ ಮಾಡಬೇಡಿ, ‌ನಾನು ಹಾಗೂ ನಮ್ಮ ಸರ್ಕಾರ ನಿಮ್ಮ ಜೊತೆಗಿದೆ” ಎಂದು ದೈರ್ಯ ತುಂಬಿದರು. ಜೊತೆಗೆ “ಗ್ಯಾರಂಟಿ ಯೋಜನೆಗಳು ತಲುಪುತ್ತಿವೆಯೇ? ನಿಮಗೆ” ಎಂದು ಸಿಎಂ ಕೇಳಲು […]

Continue Reading

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 21 ಮಂದಿ ಆಯ್ಕೆ

ಮಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ವಿವಿಧ ಶಾಲೆಗಳ 21 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಲ್ಲಿ ತಲಾ ಏಳು ಶಿಕ್ಷಕರಂತೆ ಒಟ್ಟು 21 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೆ. 5ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಿರಿಯ […]

Continue Reading

ಸೆಪ್ಟಂಬರ್ ಒಳಗೆ ಮೊದಲ ನೋಟಿಸ್‌ಗಳ ಪ್ರಕರಣ ಇತ್ಯರ್ಥ ಗುರಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಮ್ಯಾಪಿಂಗ್ ಆಗದಿರುವ ಹಾಗೂ ಮ್ಯಾಪಿಂಗ್‌ನಲ್ಲಿ ತಾರ್ಕಿಕ ವ್ಯತ್ಯಾಸ ಹೊಂದಿರುವ ಮತದಾರರಿಗೆ ನೀಡಲಾಗುತ್ತಿರುವ ಮೊದಲ ನೋಟಿಸ್‌ಗಳ ಪ್ರಕರಣಗಳನ್ನು ಸೆಪ್ಟಂಬರ್ ಅಂತ್ಯದೊಳಗೆ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ತಿಳಿಸಿದರು. ಶುಕ್ರವಾರ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದಿರುವ, ಮ್ಯಾಪಿಂಗ್‌ನಲ್ಲಿ […]

Continue Reading

ಕಾರವಾರದಲ್ಲಿ ನೂತನ ರಂಗಮಂದಿರ ನಿರ್ಮಾಣಕ್ಕೆ ಹೊಸ ಪ್ರಸ್ತಾವ ಸಲ್ಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಕಲಾತ್ಮಕ ಹಾಗೂ ಆಕರ್ಷಕ ನೂತನ ರಂಗಮಂದಿರ ನಿರ್ಮಾಣಕ್ಕೆ ಹೊಸ ಪ್ರಸ್ತಾವ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ರಂಗಮಂದಿರ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರವಾರದಲ್ಲಿ ನೂತನ ರಂಗಮಂದಿರ ನಿರ್ಮಾಣಕ್ಕೆ ಮೂರು ವರ್ಷಗಳ ಹಿಂದೆ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ ಈವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಅವಧಿಯಲ್ಲಿ […]

Continue Reading

ಸೆ. 6 ರಂದು ಅಗರಮೇಲು ಜಾರಂದಾಯ ದೈವಸ್ಥಾನ, ನೂತನ ಧ್ವಜಸ್ತಂಭಕ್ಕೆ ಎಳ್ಳೆಣ್ಣೆ ಸಮರ್ಪಣೆ

ಸುರತ್ಕಲ್: ಅಗರಮೇಲು ಜಾರಂದಾಯ ದೈವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಧ್ವಜಸ್ತಂಭಕ್ಕೆ ಎಳ್ಳೆಣ್ಣೆ ಸಮರ್ಪಣಾ ಸೇವೆ ಸೆ. 6ರಂದು ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ. ದೈವಸ್ಥಾನದ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ಊರ ಹತ್ತು ಸಮಸ್ತರಿಂದ ಮುಷ್ಟಿ ಕಾಣಿಕೆ ಸಮರ್ಪಣೆ ನಡೆಯಲಿದ್ದು, ಬೆಳಿಗ್ಗೆ 11.30ಕ್ಕೆ ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ಸಮಾಲೋಚನಾ ಸಭೆ ಆಯೋಜಿಸಲಾಗಿದೆ. ವೇದಮೂರ್ತಿ ಕೆ. ಶ್ರೀ ಲಕ್ಷ್ಮೀನಾರಾಯಣ ಆಸ್ರಣ್ಣ, ಪ್ರಧಾನ ಅರ್ಚಕರು, ಶ್ರೀ ಕ್ಷೇತ್ರ ಕಟೀಲು ಅವರು ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ […]

Continue Reading

ಸೆ.6 ರಂದು ‘ರಾಗ ಸುಧಾ’ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ: ವಿಭಾ ಶ್ರೀನಿವಾಸ್

ಮಂಗಳೂರು: ಕಲಾಸಾಧನ ಸಂಸ್ಥೆಯ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಇದೇ 6 ರಂದು ಸಂಜೆ 5 ಗಂಟೆಗೆ ನಗರದ ರಾಮಕೃಷ್ಣ ಮಠದಲ್ಲಿ ‘ರಾಗ ಸುಧಾ’ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಲಾಸಾಧನ ಸಂಸ್ಥೆಯ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ವಾಲಿಯರ್ ಘರಾನಾ ಕಲಾವಿದ ಡಾ. ಪಂಡಿತ್ ರಾಮ್ ದೇಶಪಾಂಡೆ ಅವರ ಹಿರಿಯ ಶಿಷ್ಯ, ಖ್ಯಾತ ಗಾಯಕ ಆದಿತ್ಯ ಮೋದಕ್, ಗ್ವಾಲಿಯರ್– ಕಿರಾಣಾ ಪದ್ಧತಿಯ ಗಾಯಕ ಹಾಗೂ ಹಾರ್ಮೋನಿಯಂ ವಾದಕ […]

Continue Reading

ಕಾಂಗ್ರೆಸ್ ಸರಕಾರದ ವಿರುದ್ಧ ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

ಮಂಗಳೂರು: ರಾಜ್ಯದಲ್ಲಿ ‘ಲಂಚ ಗ್ಯಾರಂಟಿ’ ಸರ್ಕಾರದ ಆಡಳಿತ ನಡೆಯುತ್ತಿದ್ದು, ಸಚಿವರಿಗೆ ಕಮಿಷನ್ ನೀಡಲು ಅಧಿಕಾರಿಗಳು ಲಂಚ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಸರ್ಕಾರದ ಸಚಿವರೇ ಭ್ರಷ್ಟಾಚಾರದಲ್ಲಿ ಭಾಗಿ ಆಗಿದ್ದಾರೆ ಎಂದು ಆಡಳಿತ ಪಕ್ಷದ ಶಾಸಕರೇ ಆರೋಪಿಸಿರುವುದು ಗಮನಾರ್ಹ ಸಂಗತಿ. ಪಾವತಿ ಕೋಟಾದಡಿ ಸಚಿವರಾಗಿರುವವರು ಅಧಿಕಾರಿಗಳ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಇತ್ತೀಚಿನ ವಿದ್ಯಮಾನಗಳು ಇದಕ್ಕೆ ಸಾಕ್ಷಿ ಆಗಿವೆ ಎಂದರು. ಉಪ […]

Continue Reading

ಗಂಗೊಳ್ಳಿ ಅಳಿವಿನಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: 6 ಮಂದಿ ಮೀನುಗಾರರ ರಕ್ಷಣೆ

ಕುಂದಾಪುರ: ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಬುಧವಾರ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಿದ್ದು, ಬೋಟಿನಲ್ಲಿದ್ದ ಆರು ಮಂದಿ ಮೀನುಗಾರರನ್ನು ಇತರೆ ಬೋಟಿನ ಮೀನುಗಾರರು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಗಂಗೊಳ್ಳಿ ಬಂದರಿನಿಂದ ಬುಧವಾರ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ್ದ ಕುಂಭಾಶಿ ಕೊರವಡಿಯ ಸಂತೋಷ್ ಎ. ಅವರಿಗೆ ಸೇರಿದ ‘ಮಂಜುನಾಥ ಸಾಗರ’ ಹೆಸರಿನ ತ್ರಿಸೆವೆಂಟಿ ಬೋಟ್ ಅಳಿವೆ ಪ್ರದೇಶದಲ್ಲಿ ಮುಳುಗಿತು. ಘಟನೆ ತಿಳಿಯುತ್ತಿದ್ದಂತೆ ಇತರೆ ಮೀನುಗಾರರು ಪರ್ಸಿನ್ ಬೋಟ್ ಮೂಲಕ ಸ್ಥಳಕ್ಕೆ ತೆರಳಿ ಅಪಾಯದಲ್ಲಿದ್ದ ಆರು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದರು. ಬಳಿಕ […]

Continue Reading

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ: ದಿನೇಶ್ ಮುಳೂರು ಖಂಡನೆ

ಮಂಗಳೂರು: ಕಾಂಗ್ರೆಸ್ ಅಧ್ಯಕ್ಷ ಹಾಗೂ ದಲಿತ ಸಮುದಾಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿರುವ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸುವ ಬದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ದಿನೇಶ್ ಮುಳೂರು ಅವರು ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆ.10 ರಂದು ಉತ್ತರ ಪ್ರದೇಶದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು […]

Continue Reading