Sample Page

ಶಾಲಾ ಬಸ್‌ಗಳಲ್ಲಿ ಸುರಕ್ಷತೆ ನಗರ ಸಂಚಾರ ಪೊಲೀಸರಿಂದ ವಿಶೇಷ ಜಾಗೃತಿ; ಡಿಸಿಪಿ ರವಿಶಂಕರ್

ಮಂಗಳೂರು: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ಕುರಿತು ಮಂಗಳೂರು ನಗರ ಸಂಚಾರ ಪೊಲೀಸರ ವತಿಯಿಂದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಬುಧವಾರ ನಗರದ ಪುರಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲೆಗಳ ಶಾಲಾ ಬಸ್ ಚಾಲಕರು, ಮಾಲೀಕರು, ಬಸ್ ವ್ಯವಸ್ಥಾಪಕರು ಹಾಗೂ ಶಾಲಾ ಆಡಳಿತ ಮಂಡಳಿಗಳ ಸುಮಾರು 600 ಮಂದಿ ಭಾಗವಹಿಸಿದ್ದರು. ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬಸ್ ಚಾಲಕರು ಹಾಗೂ ನಿರ್ವಾಹಕರು ಪಾಲಿಸಬೇಕಾದ ಕಾನೂನು ನಿಯಮಗಳು, ರಸ್ತೆ ಸುರಕ್ಷತಾ ಕ್ರಮಗಳು, ಸಂಚಾರ ನಿಯಮಗಳು ಹಾಗೂ ಮಕ್ಕಳ ಸುರಕ್ಷತೆಗೆ […]

Continue Reading

ಚಾಲಕನ ಪುತ್ರಿಗೆ ವೈದ್ಯಕೀಯ ಪ್ರವೇಶ ಭಾಗ್ಯ: ಆಳ್ವಾಸ್ ದತ್ತು ಯೋಜನೆಯಿಂದ ಕನಸು ನನಸು, ಸಮಾಜಕ್ಕೆ ಮರಳಿ ನೀಡುವ ಸಂಕಲ್ಪ: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಸೀಮಿತ ಆರ್ಥಿಕ ಹಿನ್ನೆಲೆಯ ಕುಟುಂಬದಿಂದ ಬಂದ ವಿದ್ಯಾರ್ಥಿನಿಯೊಬ್ಬಳು ಪರಿಶ್ರಮ, ಸೂಕ್ತ ಮಾರ್ಗದರ್ಶನ ಹಾಗೂ ಆಳ್ವಾಸ್ ಪದವಿಪೂರ್ವ ಕಾಲೇಜಿನ ದತ್ತು ಯೋಜನೆಯ ನೆರವಿನಿಂದ ವೈದ್ಯಕೀಯ ಶಿಕ್ಷಣದ ಕನಸು ನನಸಾಗಿಸಿಕೊಂಡಿದ್ದಾರೆ. ಕಾರ್ಕಳದ ಕುಂಟಲ್ಪಾಡಿಯ ನಿವಾಸಿ ಸ್ನೇಹಾ, ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ನ (ಎಐಎಂಎಸ್‌ಆರ್‌ಸಿ) ಮೊದಲ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿ ಪ್ರವೇಶ ಪಡೆದಿದ್ದಾರೆ. ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿರುವುದು ಅವರ ಸಾಧನೆಯ ವಿಶೇಷತೆಯಾಗಿದೆ. ಸ್ನೇಹಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜೆಸೀಸ್ ಹೈಸ್ಕೂಲ್‌ನಿಂದ 590 ಅಂಕಗಳನ್ನು ಗಳಿಸಿದ್ದರು. […]

Continue Reading

ರಾಜ್ಯ ವ್ಯಾಪಿ ಸಿಹಿತಿಂಡಿ ತಯಾರಿಕಾ ಘಟಕ ತಪಾಸಣೆ, ಎರಡು ಸಿಹಿತಿಂಡಿ ತಯಾರಿಕಾ ಘಟಕ ಬಂದ್: ಸಚಿವ ಖಾದರ್

ಮಂಗಳೂರು: ಸಿಹಿತಿಂಡಿ ತಯಾರಿಕಾ ಘಟಕಗಳಲ್ಲಿ ಸ್ವಚ್ಛತೆ, ಗುಣಮಟ್ಟ ಮತ್ತು ಆಹಾರದ ಶುದ್ಧತೆ ಕಾಪಾಡುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರ. ಇತ್ತೀಚೆಗೆ ಆಹಾರ ಮತ್ತು ಸುರಕ್ಷತಾ ಇಲಾಖೆ ನಡೆಸಿದ ತಪಾಸಣೆಯಲ್ಲಿ ಎರಡು ಸಿಹಿತಿಂಡಿ ತಯಾರಿಕಾ ಘಟಕಗಳನ್ನು ಮುಚ್ಚಲಾಗಿದ್ದು, ಉಳಿದ ಘಟಕಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್‌ಗೆ ಉತ್ತರ ಬಂದ ಬಳಿಕ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಸಿಹಿತಿಂಡಿ ತಯಾರಿಕಾ ಘಟಕಗಳ ಮೇಲಿನ ತಪಾಸಣೆ […]

Continue Reading

ರಚನಾ ಸದಸ್ಯರ ಸಭೆ: ಕ್ರಿಪ್ಟೊ ಕರೆನ್ಸಿ ಮಾಹಿತಿ ಕಾರ್ಯಾಗಾರ, ವ್ಯಾಪಾರ ಪ್ರದರ್ಶನಕ್ಕೆ ಸಿದ್ಧತೆ

ಮಂಗಳೂರು: ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ರಚನಾ ವತಿಯಿಂದ ಆಗಸ್ಟ್ 29ರಂದು ಬೆಂದೂರಿನ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಸಭಾಂಗಣದಲ್ಲಿ ‘ರಚನಾ ಕ್ರಿಪ್ಟೊ ಕನೆಕ್ಟ್’ ಹೆಸರಿನಲ್ಲಿ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ಕ್ರಿಪ್ಟೊ ಕರೆನ್ಸಿ, ಡಿಜಿಟಲ್ ಆಸ್ತಿಗಳು ಹಾಗೂ ಜವಾಬ್ದಾರಿಯುತ ವಹಿವಾಟಿನ ಕುರಿತು ಕ್ರಿಪ್ಟೊ ಶಿಕ್ಷಣತಜ್ಞ ಹಾಗೂ ಆಲ್ಗೊ ವ್ಯಾಪಾರ ಅಭಿವೃದ್ಧಿಪಡಿಸುವ ರೋಷನ್ ಡಿಸೋಜಾ ಮಾಹಿತಿ ನೀಡಿದರು. ಡಿಜಿಟಲ್ ಆಸ್ತಿ ಕ್ಷೇತ್ರದಲ್ಲಿನ ಅವಕಾಶಗಳು ಮತ್ತು ಅಪಾಯಗಳ ಕುರಿತು ವಿವರಿಸಿದ ಅವರು, ಜವಾಬ್ದಾರಿಯುತ ವಹಿವಾಟಿನ ಅಗತ್ಯವನ್ನು […]

Continue Reading

‘ರೋಹನ್ ಸ್ಕ್ವೇರ್ ಬಸ್ ತಂಗುದಾಣ’ ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ನಗರದ ಕಪಿತಾನಿಯೊದಲ್ಲಿ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ಮಿಸಿರುವ ‘ರೋಹನ್ ಸ್ಕ್ವೇರ್ ಬಸ್ ತಂಗುದಾಣ’ವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸಿದರು. ನಗರದ ನಾಗರಿಕ ಮೂಲಸೌಕರ್ಯವನ್ನು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬಸ್ ತಂಗುದಾಣ ನಿರ್ಮಿಸಲಾಗಿದೆ. ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ‘ಜನರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಮಾಡುವ ಕೆಲಸವೇ ನಿಜವಾದ ಸೇವೆ. ಸಾರ್ವಜನಿಕರ ದೈನಂದಿನ ಪ್ರಯಾಣಕ್ಕೆ ಅನುಕೂಲ ಆಗುವಂತೆ ರೋಹನ್ ಕಾರ್ಪೊರೇಶನ್ ಕೈಗೊಂಡಿರುವ ಕಾರ್ಯ ಶ್ಲಾಘನೀಯ’ ಎಂದರು. ಕಾರ್ಪೊರೇಟರ್ ಸಂದೀಪ್ ಗರೋಡಿ […]

Continue Reading

3 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಮಂಗಳೂರು ಸಿಸಿಬಿ ಪೊಲೀಸರಿಂದ ಖೆಡ್ಡಾ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (ಎನ್‌ಸಿಐಬಿ) ಅಧಿಕಾರಿ ಎಂದು ಸುಳ್ಳು ಪರಿಚಯಿಸಿಕೊಂಡು ವಂಚನೆ ಹಾಗೂ ಸುಲಿಗೆ ನಡೆಸಿದ ಪ್ರಕರಣದಲ್ಲಿ ಬಂಧಿತನಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64) ಬಂಧಿತ ಆರೋಪಿ. ಆರೋಪಿಯು ತನ್ನದೇ ತಂಡ ರಚಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ. ಹಣಕಾಸು ವಿವಾದ, ಬ್ಯಾಂಕ್ […]

Continue Reading

ಪಾಲಿಕೆ ವ್ಯಾಪ್ತಿ ವಿವಿಧೆಡೆ ಭೇಟಿ, ಕಾಮಗಾರಿ ಪ್ರಗತಿ ಪರಿಶೀಲಿಸಿದ ಪಾಲಿಕೆ ಕಮಿಷನರ್ ‌ರಾಹುಲ್ ರತ್ನಂ ಪಾಂಡೆ

ಮಂಗಳೂರು: ನಗರದ ವಿವಿಧೆಡೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು. ಹಂಪನಕಟ್ಟೆಯ ರಾಜಾಜಿ ಪಾರ್ಕ್‌ಗೆ ಭೇಟಿ ನೀಡಿದ ಆಯುಕ್ತರು ಆಹಾರ ಮಳಿಗೆ ಪ್ರದೇಶ ಹಾಗೂ ಬಯಲು ರಂಗಮಂದಿರವನ್ನು ಪರಿಶೀಲಿಸಿದರು. ಬಯಲು ರಂಗಮಂದಿರದಲ್ಲಿ ಪ್ರತಿ ವಾರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗುವಂತೆ ಉತ್ತಮ ಗುಣಮಟ್ಟದ ಧ್ವನಿ ಹಾಗೂ ಬೆಳಕಿನ ವ್ಯವಸ್ಥೆ, ಸುಸಜ್ಜಿತ ವೇದಿಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ […]

Continue Reading

ಗ್ರಾ.ಪಂ, ವಾರ್ಡ್ ಮಟ್ಟದಲ್ಲಿ 6 ಮಂದಿ ಸದಸ್ಯರ ಸಮಿತಿ ರಚನೆ, ಸ್ ಕೊರತೆ ನೀಗಿಸಲು ಕ್ರಮ: ಎಚ್‌.ಎಂ. ರೇವಣ್ಣ

ಮಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪಾರದರ್ಶಕ ಅನುಷ್ಠಾನ ಹಾಗೂ ಮರುಪರಿಶೀಲನೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ‘ಗ್ರಾಮ ಗ್ಯಾರಂಟಿ ಸಮಿತಿ’ ರಚಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಂ. ರೇವಣ್ಣ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕರಾವಳಿ ಭಾಗದಲ್ಲಿ ಬಸ್‌ಗಳ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಮಂಗಳೂರು ಹಾಗೂ ಉಡುಪಿಗೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಯೋಜಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ಮತ್ತಷ್ಟು ಸುಧಾರಿಸಲಿದೆ ಎಂದರು. ಪ್ರತಿ ಗ್ರಾಮ […]

Continue Reading

ಮಂಗಳೂರು ದಸರಾ, ವ್ಯವಸ್ಥಿತ ಸಿದ್ಧತೆಗೆ ಸಚಿವ ಯು.ಟಿ. ಖಾದರ್ ಸೂಚನೆ

ಮಂಗಳೂರು: ಮುಂಬರುವ ಮಂಗಳೂರು ದಸರಾ ಮಹೋತ್ಸವಕ್ಕೆ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವಂತೆ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳೂರು ದಸರಾ ಮಹೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಂಗಳೂರು ನಗರದಲ್ಲಿ ದಸರಾ ಸಂದರ್ಭದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗುವಂತೆ ವಿದ್ಯುತ್ ದೀಪಾಲಂಕಾರ, ಸ್ವಚ್ಛತೆ ಹಾಗೂ ಅಲಂಕಾರಕ್ಕೆ ಆದ್ಯತೆ ನೀಡಬೇಕು. ಕುದ್ರೋಳಿ ಶ್ರೀ […]

Continue Reading

‘ಪಂಚ ಗ್ಯಾರಂಟಿ’ಗಳಿಂದ ಜನಜೀವನದಲ್ಲಿ ಬದಲಾವಣೆ: ಯು.ಟಿ. ಖಾದರ್

ಮಂಗಳೂರು: ರಾಜ್ಯ ಸರ್ಕಾರದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳು ಅನುಷ್ಠಾನದ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರಲಿವೆ ಎಂಬ ಟೀಕೆಗಳಿಗೆ ಗುರಿಯಾಗಿದ್ದರೂ, ಇಂದು ದೇಶಕ್ಕೆ ಮಾದರಿಯಾಗುವ ಜನಪರ ಯೋಜನೆಗಳಾಗಿ ಯಶಸ್ವಿಯಾಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ […]

Continue Reading