Sample Page

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ, ದ್ವೇಷ ರಾಜಕೀಯ ಸರಿಯಲ್ಲ: ಸಚಿವ ಖಾದರ್

ಮಂಗಳೂರು: ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಶುದ್ಧೀಕರಣ ಪ್ರಕರಣದ ವಿವಾದಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದುರುದ್ದೇಶಪೂರಿತವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಲಾಲ್‌ಬಾಗ್‌ನ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು […]

Continue Reading

ಹಿರಿಯ ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ

ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ರಜತ ಮಹೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ಆರ್‌ಎನ್‌ಎಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ಪ್ರಶಸ್ತಿಯನ್ನು […]

Continue Reading

ಇ-ಸ್ವತ್ತು 2.0 ಲೋಪದೋಷ ತಕ್ಷಣವೇ ಸರಿಪಡಿಸಿ, ಸರಕಾರದ ವಿರುದ್ಧ ಎಂಎಲ್ಸಿ ಕಿಶೋರ್ ಕುಮಾರ್ ಚಾಟಿ

ಮಂಗಳೂರು: ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರು, ರೈತರು ಹಾಗೂ ಬಡ ಕುಟುಂಬಗಳಿಗೆ ಸಮಸ್ಯೆ ಆಗುತ್ತಿರುವ ಇ-ಸ್ವತ್ತು 2.0 ತಂತ್ರಾಂಶದಲ್ಲಿನ ಲೋಪದೋಷಗಳನ್ನು ಸರ್ಕಾರ ತಕ್ಷಣವೇ ಸರಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು. ಡಿಜಿಟಲೀಕರಣ ಹಾಗೂ ಆಡಳಿತ ಸುಧಾರಣೆಯ ಉದ್ದೇಶದಿಂದ ಜಾರಿಗೆ ತಂದಿರುವ ಇ-ಸ್ವತ್ತು 2.0 ವ್ಯವಸ್ಥೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಬದಲು ಕಚೇರಿಗಳ ಅಲೆದಾಟ, ವಿಳಂಬ ಹಾಗೂ ಮಾನಸಿಕ ಕಿರುಕುಳಕ್ಕೆ ಕಾರಣ ಆಗಿದೆ ಎಂದು ಆರೋಪಿಸಿದರು. ಸರ್ಕಾರವೇ ವಿಧಾನ […]

Continue Reading

ಅಂಗನವಾಡಿ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಡಿ ಕೈಗೊಂಡಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ 91 ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು […]

Continue Reading

ಬೆಳಗಾವಿ ಜಿ.ಪಂ ಸಿಇಒ ರಾಹುಲ್ ಶಿಂಧೆಗೆ ರಾಜ್ಯಮಟ್ಟದ ಹೊಸ ಜವಾಬ್ದಾರಿ, ಪಂಚಾಯತ್ ರಾಜ್ ಆಯುಕ್ತಾಲಯದ ವಿಶೇಷ ಅಧಿಕಾರಿಯಾಗಿ ನೇಮಕ

ಬೆಂಗಳೂರು: ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ರಾಹುಲ್ ಶಿಂಧೆ ಅವರ ಆಡಳಿತಾತ್ಮಕ ಕಾರ್ಯವ್ಯಾಪ್ತಿ ಇದೀಗ ರಾಜ್ಯ ಮಟ್ಟಕ್ಕೆ ವಿಸ್ತರಣೆ ಆಗಿದೆ. ಹಾಲಿ ಹುದ್ದೆಯ ಜತೆಗೆ ಪಂಚಾಯತ್ ರಾಜ್ ಆಯುಕ್ತಾಲಯದ ವಿಶೇಷ ಅಧಿಕಾರಿಯಾಗಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಅಗಸ್ಟ್ 27 ರಂದು ಹೊರಡಿಸಿರುವ ಆದೇಶದಂತೆ ರಾಹುಲ್ ಶಿಂಧೆ ಅವರು ಪಂಚಾಯತ್ ರಾಜ್ ಆಯುಕ್ತಾಲಯದ ವಿಶೇಷ ಅಧಿಕಾರಿಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ರಾಜ್ಯದ ಅತಿ ದೊಡ್ಡ ಜಿಲ್ಲೆಗಳಲ್ಲೊಂದಾದ ಬೆಳಗಾವಿಯಲ್ಲಿ ಆಡಳಿತಾತ್ಮಕ ಅನುಭವ ಹೊಂದಿರುವ ಹಿನ್ನೆಲೆಯಲ್ಲಿ ಅವರಿಗೆ […]

Continue Reading

ಲಂಚದ ಆರೋಪದ ಆಡಿಯೊ ವೈರಲ್: ಮೂವರು ಪಿಎಸ್‌ಐ ಅಮಾನತು: ಎಎಸ್‌ಪಿ ನೇತೃತ್ವದಲ್ಲಿ ತನಿಖೆ

ಕಾರವಾರ: ಹಳಿಯಾಳ ಪೊಲೀಸ್ ಠಾಣೆಯ ಪಿಎಸ್‌ಐಗಳ ಪೋಸ್ಟಿಂಗ್ ಹಾಗೂ ಲಂಚದ ವ್ಯವಹಾರಕ್ಕೆ ಸಂಬಂಧಿಸಿದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಿಎಸ್‌ಐಗಳನ್ನು ಅಮಾನತುಗೊಳಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಆದೇಶ ಹೊರಡಿಸಿದ್ದಾರೆ. ಹಳಿಯಾಳ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಕಿರಣ್ ಪಾಟೀಲ್, ಅಪರಾಧ ವಿಭಾಗದ ಪಿಎಸ್‌ಐ ಕೃಷ್ಣ ಹಾಗೂ ಈ ಹಿಂದೆ ಹಳಿಯಾಳದಲ್ಲಿ ಪಿಎಸ್‌ಐ ಆಗಿ ಕಾರ್ಯನಿರ್ವಹಿಸಿ ವರ್ಗಾವಣೆಯಾಗಿದ್ದ ವಿನೋದ್ ರೆಡ್ಡಿ ಅಮಾನತುಗೊಂಡವರು. ಮೂವರು ಪಿಎಸ್‌ಐಗಳು […]

Continue Reading

ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಮೂಡಾ ಮಾಸ್ಟರ್ ಪ್ಲಾನ್‌ಗೆ ಮೊದಲ ಆದ್ಯತೆ: ನೂತನ ಮೂಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ

ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಸಂತೋಷ್ ಕುಮಾರ್ ಶೆಟ್ಟಿ ಅವರು, ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಮೂಡಾ ಮಾಸ್ಟರ್ ಪ್ಲಾನ್‌ಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸೋಮವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಾಸ್ಟರ್ ಪ್ಲಾನ್‌ಗೆ ಸಂಬಂಧಿಸಿದ ಸಣ್ಣಪುಟ್ಟ ತೊಡಕುಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಶೀಘ್ರವೇ ಯೋಜನೆಯನ್ನು ಅಂತಿಮಗೊಳಿಸಲು ಪ್ರಯತ್ನಿಸಲಾಗುವುದು ಎಂದರು. ಮೂಡಾ ಕೇವಲ ನಿವೇಶನಗಳ ಹಂಚಿಕೆಗೆ ಸೀಮಿತವಾಗಬಾರದು. ಬದಲಾಗಿ ಮಂಗಳೂರು ನಗರದ ಸಮಗ್ರ […]

Continue Reading

ಪಶ್ಚಿಮ ವಲಯದ ಸಾರಥ್ಯ ಆರ್. ಚೇತನ್ ಹೆಗಲಿಗೆ, ಬ್ಯಾಟನ್ ಹಸ್ತಾಂತರ, ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಮಹಾ ನಿರೀಕ್ಷಕರಾಗಿ ಐಪಿಎಸ್ ಅಧಿಕಾರಿ ಆರ್. ಚೇತನ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು, ಸಾಂಪ್ರದಾಯಿಕವಾಗಿ ಪೊಲೀಸ್ ಇಲಾಖೆಯ ಬ್ಯಾಟನ್ ಅನ್ನು ಹಸ್ತಾಂತರಿಸುವ ಮೂಲಕ ಆರ್. ಚೇತನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ನೂತನ ಪೊಲೀಸ್ ಮಹಾನಿರೀಕ್ಷಕ ಆರ್. ಚೇತನ್ ಅವರು ಅಧಿಕಾರ ವಹಿಸಿಕೊಂಡು ಪಶ್ಚಿಮ ವಲಯದ ಪೊಲೀಸ್ ಆಡಳಿತದ ಜವಾಬ್ದಾರಿಯನ್ನು […]

Continue Reading

ಕಾರವಾರ–ಮಲ್ಲಾಪುರ ರಸ್ತೆಯಲ್ಲಿ 30 ಟನ್‌ಗೂ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧ: ಡಿಸಿ ಲಕ್ಷ್ಮೀಪ್ರಿಯಾ ಆದೇಶ

ಕಾರವಾರ: ತಾಲೂಕಿನ ರಾಜ್ಯ ಹೆದ್ದಾರಿ 6ರ ಕಾರವಾರ–ದೇವಳಮಕ್ಕಿ–ಕೆರವಾಡಿ–ಬೋಳ್ವೆ–ಇರಪಾಗೆ–ಮಲ್ಲಾಪುರ ರಸ್ತೆಯಲ್ಲಿ 30 ಟನ್‌ಗಿಂತ ಹೆಚ್ಚಿನ ಭಾರವುಳ್ಳ ಸರಕು ಹಾಗೂ ಬೃಹತ್ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಬೃಹತ್ ಹಾಗೂ ಅಧಿಕ ಭಾರದ ವಾಹನಗಳ ನಿರಂತರ ಸಂಚಾರದಿಂದ ರಸ್ತೆಯಲ್ಲಿ ದೊಡ್ಡ ಪ್ರಮಾಣದ ಗುಂಡಿಗಳು ಉಂಟಾಗಿ ರಸ್ತೆ ಹಾಳಾಗಿದೆ. ಇದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳ ಸುರಕ್ಷತೆಗೆ ಅಪಾಯ ಎದುರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. […]

Continue Reading

ಬೆಳಗಾವಿ: ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ, ಮನೆಗಳಲ್ಲಿ ತಪಾಸಣೆ

ಬೆಳಗಾವಿ: ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಉತ್ತರ ವಲಯ ಪೊಲೀಸರು ಭಾನುವಾರ ಮುಂಜಾನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐದು ಜಿಲ್ಲೆಗಳ 1,041 ರೌಡಿಶೀಟರ್‌ಗಳ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ರೌಡಿಶೀಟರ್‌ಗಳ ಮನೆಗಳನ್ನು ಪರಿಶೀಲಿಸಿ, ಅವರ ಇತ್ತೀಚಿನ ಚಟುವಟಿಕೆಗಳು ಹಾಗೂ ಸಂಪರ್ಕಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ ಎಂದು ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ ತಿಳಿಸಿದ್ದಾರೆ. ಜಿಲ್ಲಾವಾರು […]

Continue Reading