Sample Page

ಮೆಸ್ಕಾಂನಲ್ಲಿ ಸುರಕ್ಷತೆಗೆ 705 ವೋಲ್ಟೇಜ್ ಡಿಟೆಕ್ಟರ್: ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್

ಮಂಗಳೂರು: ಮೆಸ್ಕಾಂನಲ್ಲಿ ಖಾಲಿ ಇರುವ ಪವರ್‌ಮೇನ್ ಹುದ್ದೆಗಳ ಪೈಕಿ 430 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಈ ಪೈಕಿ 395 ಮಂದಿಯನ್ನು ನೇಮಕ ಮಾಡಲಾಗಿದೆ. ಈಗಾಗಲೇ ಅವರಿಗೆ ನೇಮಕಾತಿ ಪತ್ರ ನೀಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೆಸ್ಕಾಂನಲ್ಲಿ ಇನ್ನೂ ಪವರ್‌ಮೇನ್ ಹುದ್ದೆಗಳು ಖಾಲಿ ಇದ್ದು, ಮುಂದಿನ ಹಂತದಲ್ಲಿ 165 ಮಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು. ಇತ್ತೀಚೆಗೆ ನೇಮಕಗೊಂಡ ಹೊಸ ಪವರ್‌ಮೇನ್‌ಗಳ ಪೈಕಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯವರು ಕೇವಲ ಐದು […]

Continue Reading

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನೂತನ ಅಧ್ಯಕ್ಷರನ್ನಾಗಿ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನೇಮಕ ಮಾಡಲಾಗಿದೆ. ಈ ಕುರಿತು ಸರ್ಕಾರದ ನಗರಾಭಿವೃದ್ಧಿ ಇಲಾಖೆಯು ಶನಿವಾರ ಅಧಿಸೂಚನೆ ಹೊರಡಿಸಿದೆ. ಹಿಂದೆ ಅಧ್ಯಕ್ಷರಾಗಿದ್ದ ಸದಾಶಿವ ಉಲ್ಲಾಳ್ ಅವರ ಬದಲಿಗೆ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ನೇಮಕವು ತಕ್ಷಣದಿಂದ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ […]

Continue Reading

ಹುತಾತ್ಮ ಯೋಧ ವಿನೋದ ನಾಯ್ಕ 21ನೇ ಪುಣ್ಯತಿಥಿ:ಸ್ಮಾರಕದ ನೂತನ ಕಾಂಪೌಂಡ್ ಉದ್ಘಾಟಿಸಿದ ಮಾಜಿ ಶಾಸಕಿ ರೂಪಾಲಿ ನಾಯ್ಕ

ಕಾರವಾರ: ದೇಶದ ಗಡಿಯಲ್ಲಿ ಉಗ್ರರೊಂದಿಗೆ ಹೋರಾಡುತ್ತಾ ವೀರ ಮರಣವನ್ನಪ್ಪಿದ ಕಡವಾಡ ಗ್ರಾಮದ ಲ್ಯಾನ್ಸ್ ನಾಯಕ್ ಹುತಾತ್ಮ ವಿನೋದ ನಾಯ್ಕ ಅವರ 21ನೇ ಪುಣ್ಯತಿಥಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುತಾತ್ಮ ವಿನೋದ ನಾಯ್ಕ ಅವರ ಸ್ಮಾರಕದ ಸುತ್ತಲೂ ನೂತನವಾಗಿ ನಿರ್ಮಿಸಲಾದ ಕಾಂಪೌಂಡ್ ಗೋಡೆ ಹಾಗೂ ಕಬ್ಬಿಣದ ಗೇಟನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹುತಾತ್ಮ ವಿನೋದ ನಾಯ್ಕ ಅವರ ಪುಣ್ಯತಿಥಿಯಂದು ಅವರ ಪುಣ್ಯಭೂಮಿಗೆ ಬಂದು […]

Continue Reading

ಕಾರವಾರ ಮೆಡಿಕಲ್ ಕಾಲೇಜು, ಶಿವರಾಮ ಕಾರಂತ ಬಡಾವಣೆಯ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಡಿಕೆಶಿ ಘೋಷಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶನಿವಾರ ನಡೆದ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತರ ಕನ್ನಡ ಜಿಲ್ಲೆಯ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಅವರ ಹೆಸರಿಡುವ ನಿರ್ಧಾರವನ್ನು ಇದೇ ಸಂದರ್ಭದಲ್ಲಿ ಪ್ರಕಟಿಸಿದ ಮುಖ್ಯಮಂತ್ರಿ, ಬೆಂಗಳೂರಿನ ಶಿವರಾಮ […]

Continue Reading

ರಾಜ್ಯದಲ್ಲಿ ನಾಲ್ವರು ಐಎಎಸ್, ಓರ್ವ ಐಎಫ್‌ಎಸ್ ಅಧಿಕಾರಿ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಹಾಗೂ ಓರ್ವ ಐಎಫ್‌ಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳ ವರ್ಗಾವಣೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ **ಪಾಟೀಲ್ ಯಲಗೌಡ ಶಿವನಗೌಡ** ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಇದರೊಂದಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನೂ ಅವರಿಗೆ ವಹಿಸಲಾಗಿದೆ. ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ದಿಗ್ವಿಜಯ ಬೊಡ್ಕೆ […]

Continue Reading

15 ಮಂದಿ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ, ಮಂಗಳೂರು ಐಜಿಪಿ ಆರ್ ಚೇತನ್, ಡಿಸಿಪಿ ಮಿಥುನ್ ಗದಗ ಎಸ್ಪಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಮಹತ್ವದ ಬೆಳವಣಿಗೆ ಆಗಿದ್ದು, ಸರ್ಕಾರ 15 ಮಂದಿ ಮಂದಿ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ. ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿದ್ದ ಪಿ. ಹರಿಶೇಖರನ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ನಗರ ಪೊಲೀಸ್‌ ಕಮಿಷನರ್ ಆಗಿದ್ದ ಭೂಷಣ್ ಬೊರಸೆ ಅವರನ್ನು ಹುಬ್ಬಳ್ಳಿ–ಧಾರವಾಡ ನಗರ ಪೊಲೀಸ್‌ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. […]

Continue Reading

ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ಜೋಡಣೆಗೆ ವಿರೋಧ:ಸಹಿ ಅಭಿಯಾನಕ್ಕೆ ವೈದ್ಯರ ಬೆಂಬಲ

ಸಿರಸಿ: ಪಶ್ಚಿಮಘಟ್ಟದ ಸೂಕ್ಷ್ಮ ಪರಿಸರ ವ್ಯವಸ್ಥೆ, ನದಿಗಳ ನೈಸರ್ಗಿಕ ಹರಿವು ಹಾಗೂ ಜೀವವೈವಿಧ್ಯಕ್ಕೆ ಧಕ್ಕೆ ಉಂಟುಮಾಡಬಹುದಾದ ಬೇಡ್ತಿ–ವರದಾ ಮತ್ತು ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಕೈಬಿಡುವಂತೆ ಆಗ್ರಹಿಸಿ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನಕ್ಕೆ ವೈದ್ಯಕೀಯ ಕ್ಷೇತ್ರದ ಗಣ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಎಂ.ಎಂ. ಜೋಶಿ ಗಣೇಶ್ ನೇತ್ರಾಲಯದ ಹಿರಿಯ ನೇತ್ರ ತಜ್ಞ ಡಾ. ಶಿವರಾಂ ಹಾಗೂ ಹಿರಿಯ ವೈದ್ಯ ಡಾ. ಧರ್ಮಶಾಲಾ ಅವರು ಸಹಿ ಸಂಗ್ರಹ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಬೆಂಬಲ ಸೂಚಿಸಿದರು. ಪಶ್ಚಿಮಘಟ್ಟದ ಪರಿಸರ ವ್ಯವಸ್ಥೆ, […]

Continue Reading

21 ವರ್ಷದೊಳಗಿನ ವ್ಯಕ್ತಿಗಳಿಗೆ ಸಿಗರೇಟ್ ಮಾರಾಟ ಮಾಡಿದರೆ ಪರವಾನಗಿ ರದ್ದು: ಎಡಿಸಿ ರಾಜು ಸೂಚನೆ

ಮಂಗಳೂರು: 21 ವರ್ಷದೊಳಗಿನ ವ್ಯಕ್ತಿಗಳಿಗೆ ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ.ನಿಯಮ ಉಲ್ಲಂಘಿಸುವ ಅಂಗಡಿಗಳ ಪರವಾನಗಿ ರದ್ದುಪಡಿಸುವಂತೆ ಅಪರ ಜಿಲ್ಲಾಧಿಕಾರಿ ರಾಜು ಕೆ.ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯಿದೆಗೆ 2024ರಲ್ಲಿ ಮಾಡಿರುವ ತಿದ್ದುಪಡಿಯಂತೆ, 21 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ […]

Continue Reading

ಸೆ.4 ರಂದು ಕದ್ರಿಯಲ್ಲಿ ರಾಷ್ಟ್ರಮಟ್ಟದ ಮಕ್ಕಳ ಉತ್ಸವ, 44 ವಿಭಾಗಗಳಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ: ಪ್ರದೀಪ್ ಕುಮಾರ್ ಕಲ್ಕೂರ

ಮಂಗಳೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುವುದರ ಜತೆಗೆ, ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ರಾಷ್ಟ್ರಮಟ್ಟದ ಮಕ್ಕಳ ಉತ್ಸವ ಹಾಗೂ ಶ್ರೀಕೃಷ್ಣ ವೇಷ ಸ್ಪರ್ಧೆ ಸೆ.4 ರಂದು ಕದ್ರಿ ಮಂಜುನಾಥ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 44 ವರ್ಷಗಳಿಂದ ಆಯೋಜಿಸಿಕೊಂಡು ಬರುತ್ತಿರುವ ಮಕ್ಕಳ ಉತ್ಸವದಲ್ಲಿ ಈ ಬಾರಿ 44 ವಿಭಾಗಗಳಲ್ಲಿ ಶ್ರೀಕೃಷ್ಣ ವೇಷ […]

Continue Reading

ಹೈಕೋರ್ಟ್ ಸಂಚಾರ ಪೀಠಕ್ಕೆ ಸಮಿತಿ ರಚನೆ:ಐವನ್ ಡಿಸೋಜ ನೇತೃತ್ವದಲ್ಲಿ ಭೇಟಿ

ಮಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಸಮಿತಿ ರಚಿಸಿ, ವಾಸ್ತವಾಂಶಗಳನ್ನು ಪರಿಶೀಲಿಸಿದ ಬಳಿಕ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಭರವಸೆ ನೀಡಿದ್ದಾರೆ ಎಂದು ಹೈಕೋರ್ಟ್ ಕರಾವಳಿ ಸಂಚಾರಿ ಪೀಠ ಸ್ಥಾಪನೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ತಿಳಿಸಿದ್ದಾರೆ. ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಕರ್ನಾಟಕ ಸರ್ಕಾರ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯ ಮೂಲಸೌಕರ್ಯ ಒದಗಿಸಲು […]

Continue Reading