Sample Page

ಕೇರಳ ಸಮಾಜಂನಲ್ಲಿ ಓಣಂ ಸಂಭ್ರಮ: ಸಾಂಸ್ಕೃತಿಕ ಕಾರ್ಯಕ್ರಮ, ಓಣಂಗೆ ಡಾ. ಎ.ಜೆ. ಶೆಟ್ಟಿ ಚಾಲನೆ

ಮಂಗಳೂರು: ಕೇರಳದ ಸಾಂಸ್ಕೃತಿಕ ಪರಂಪರೆ, ಕಲೆ ಹಾಗೂ ಸೌಹಾರ್ದದ ಸಂದೇಶ ಸಾರುವ ಓಣಂ ಹಬ್ಬವನ್ನು ಕೇರಳ ಸಮಾಜಂ ಮಂಗಳೂರು ವತಿಯಿಂದ ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕೂಟಕಲಾ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಪ್ರದರ್ಶನಗಳು ಹಾಗೂ ಸಾಂಪ್ರದಾಯಿಕ ಓಣಂ ಸಂಭ್ರಮ ಗಮನ ಸೆಳೆದವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇರಳ ಸಮಾಜಂ ಮಂಗಳೂರು ಅಧ್ಯಕ್ಷ ಟಿ.ಕೆ. ರಾಜನ್ ವಹಿಸಿದ್ದರು. ಸಮಾಜದ ಕಾರ್ಯದರ್ಶಿ ಮ್ಯಾಕ್ಸಿನ್ ಸೆಬಾಸ್ಟಿಯನ್ ಸ್ವಾಗತಿಸಿ, ಗಣ್ಯರು, ಸದಸ್ಯರು ಹಾಗೂ ಸಾರ್ವಜನಿಕರಿಗೆ ಓಣಂ ಶುಭಾಶಯ ಕೋರಿದರು. ಎ.ಜೆ. ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ […]

Continue Reading

ರಾಜ್ಯದಲ್ಲಿ ಮಳೆ ಕೊರತೆ: 189 ತಾಲೂಕುಗಳಲ್ಲಿ ಬರದ ಛಾಯೆ: ಡಿಸಿಎಂ ಡಾ. ಪರಮೇಶ್ವರ್

ಬೆಂಗಳೂರು: ಮುಂಗಾರು ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಬರದ ಪರಿಸ್ಥಿತಿ ಉಲ್ಬಣಗೊಂಡಿದ್ದು, 240 ತಾಲೂಕುಗಳ ಪೈಕಿ 189 ತಾಲೂಕುಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸೋಮವಾರ ಉಭಯ ಸದನಗಳಲ್ಲಿ ಮಾತನಾಡಿದ ಅವರು, ಜೂನ್‌ 1ರಿಂದ ಆ.24ರವರೆಗೆ ರಾಜ್ಯದಲ್ಲಿ 654 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 454 ಮಿ.ಮೀ. ಮಳೆಯಾಗಿದ್ದು, ಶೇ.31ರಷ್ಟು ಮಳೆ ಕೊರತೆಯಾಗಿದೆ ಎಂದರು. ಉತ್ತರ ಒಳನಾಡಿನಲ್ಲಿ ಶೇ.31, ದಕ್ಷಿಣ ಒಳನಾಡಿನಲ್ಲಿ ಶೇ.41, ಮಲೆನಾಡಿನಲ್ಲಿ ಶೇ.35 ಹಾಗೂ […]

Continue Reading

ಬಿಸಲಕೊಪ್ಪ ವಲಯ ಮಟ್ಟದ ಕ್ರೀಡಾಕೂಟಕ್ಕೆ ಬಿಇಒ ಎಂ.ಎಚ್. ನಾಯ್ಕ್ ಚಾಲನೆ

ಸಿರಸಿ: ಕ್ರೀಡಾಕೂಟಗಳು ಮಕ್ಕಳಲ್ಲಿ ಕ್ರೀಡಾ ಪ್ರತಿಭೆಯ ಜತೆಗೆ ಶಿಸ್ತು, ಸಮಯಪ್ರಜ್ಞೆ ಹಾಗೂ ತಂಡದ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ್ ಹೇಳಿದರು. ಬಿಸಲಕೊಪ್ಪದಲ್ಲಿ 2026-27ನೇ ಸಾಲಿನ 14 ವರ್ಷ ವಯೋಮಾನದೊಳಗಿನವರ ವಲಯ ಮಟ್ಟದ ಕ್ರೀಡಾಕೂಟಕ್ಕೆ ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಸಮೂಹ ಸಂಪನ್ಮೂಲ ಕೇಂದ್ರ ದಮನಬೈಲ್‌ನ ನೇತೃತ್ವ ಹಾಗೂ ಸಂಘಟನೆಯಲ್ಲಿ ಕ್ರೀಡಾಕೂಟ ಅಚ್ಚುಕಟ್ಟಾಗಿ ನಡೆಯಿತು. ಶಿರಸಿ […]

Continue Reading

ಉತ್ತರ ಕನ್ನಡ ಜಿಲ್ಲೆಯಲ್ಲಿ 11.23 ಲಕ್ಷ ಮತದಾರರು, 78 ಮತಗಟ್ಟೆ ಹೆಚ್ಚಳ, : ಡಿಸಿ ಲಕ್ಷ್ಮೀಪ್ರಿಯಾ

ಕಾರವಾರ: ವಿಶೇಷ ಸಮಗ್ರ ಪರಿಷ್ಕರಣೆ–2026ರ (ಎಸ್‌ಐಆರ್) ಬಳಿಕ ಉತ್ತರ ಕನ್ನಡ ಜಿಲ್ಲೆಯ ಕರಡು ಮತದಾರರ ಪಟ್ಟಿಯಲ್ಲಿ 11,23,022 ಮತದಾರರು ಸ್ಥಾನ ಪಡೆದಿದ್ದಾರೆ. ಮತಗಟ್ಟೆಗಳ ಪುನರ್‌ವಿಂಗಡಣೆ ಬಳಿಕ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ 1,523 ಮತಗಟ್ಟೆಗಳು ಇರಲಿದ್ದು, ಹಿಂದಿನ ಸಂಖ್ಯೆಗಿಂತ 78 ಮತಗಟ್ಟೆಗಳು ಹೆಚ್ಚಾಗಿವೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಟ್ಟಿಯಲ್ಲಿ 5,62,004 ಪುರುಷರು, 5,61,014 ಮಹಿಳೆಯರು ಹಾಗೂ ನಾಲ್ವರು ತೃತೀಯ ಲಿಂಗಿ ಮತದಾರರು ಇದ್ದಾರೆ. ಹಳಿಯಾಳ ಕ್ಷೇತ್ರದಲ್ಲಿ 1,67,767, ಕಾರವಾರದಲ್ಲಿ 1,98,962, […]

Continue Reading

ಉಡುಪಿ ಜಿಲ್ಲೆಯಲ್ಲಿ 10.01 ಲಕ್ಷ ಮತದಾರರ ಹೆಸರು ಕರಡು ಪಟ್ಟಿಯಲ್ಲಿ: ಡಿಸಿ ಸ್ವರೂಪ

ಉಡುಪಿ: ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಉಡುಪಿ ಜಿಲ್ಲೆಯ ಕರಡು ಮತದಾರರ ಪಟ್ಟಿಯಲ್ಲಿ 10,00,545 ಮತದಾರರು ಸ್ಥಾನ ಪಡೆದಿದ್ದಾರೆ. ಜೂನ್ 16ರ ಹಿಂದಿನ ಪಟ್ಟಿಯಲ್ಲಿದ್ದ 10,63,876 ಮತದಾರರ ಪೈಕಿ 63,331 ಮಂದಿಯ ಹೆಸರು ವಿವಿಧ ಕಾರಣಗಳಿಂದ ಕರಡು ಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಸೋಮವಾರ ತಿಳಿಸಿದರು. ಎಸ್‌ಐಆರ್‌ ಪ್ರಕ್ರಿಯೆಯ ವಿವರ ನೀಡಿದ ಅವರು, ಗೈರು, ಸ್ಥಳಾಂತರ, ಮರಣ, ನಕಲಿ ಹಾಗೂ ಇತರೆ ಕಾರಣಗಳಿಂದ 63,331 ಮತದಾರರ ಹೆಸರುಗಳು ಕರಡು ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. […]

Continue Reading

ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಆಳ್ವಾಸ್ ಶಾಲೆಯ ನಾಲ್ಕು ಮಂದಿ ರಾಜ್ಯಮಟ್ಟಕ್ಕೆ

ಮೂಡುಬಿದಿರೆ: ಜಿಲ್ಲಾ ಮಟ್ಟದ 14 ಹಾಗೂ 17 ವರ್ಷ ವಯೋಮಿತಿಯ ಈಜು ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 12 ಪದಕಗಳನ್ನು ಗೆದ್ದು ಗಮನ ಸೆಳೆದಿದ್ದು, ನಾಲ್ವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ (ಆಡಳಿತ), ಮಂಗಳೂರು ಹಾಗೂ ಬ್ಯಾರೀಸ್ ಪಬ್ಲಿಕ್ ಸ್ಕೂಲ್, ಲೇಡಿಹಿಲ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಈಜು ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು ಮೂರು ಚಿನ್ನ, ಆರು ಬೆಳ್ಳಿ […]

Continue Reading

ಎಸ್‌ಐಆರ್‌: ದ.ಕ.ದಲ್ಲಿ 1.50 ಲಕ್ಷ ಮತದಾರರಿಗೆ ನೋಟಿಸ್- ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಭಾಗವಾಗಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16,46,387 ಮತದಾರರ ಹೆಸರುಗಳು ದಾಖಲಾಗಿವೆ. ಕರಡು ಪಟ್ಟಿಯಿಂದ ಹೊರಗುಳಿದಿರುವ 1,50,153 ಮತದಾರರಿಗೆ ಆ.24 ರಿಂದ ಸೆ.23ರೊಳಗೆ ಬಿಎಲ್‌ಒಗಳ ಮೂಲಕ ನೋಟಿಸ್ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸೋಮವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮ್ಯಾಪಿಂಗ್ ಆಗದಿರುವುದು, ಹೆಸರು ಅಥವಾ ಪೋಷಕರ ಹೆಸರಿನಲ್ಲಿ ಬದಲಾವಣೆ, ವಯಸ್ಸಿನ ಅಂತರ ಸೇರಿದಂತೆ ವಿವಿಧ ಕಾರಣಗಳಿಂದ ಕರಡು ಮತದಾರರ ಪಟ್ಟಿಯಿಂದ […]

Continue Reading

ಈದ್ ಮಿಲಾದ್: ಆಗಸ್ಟ್ 25 ರಂದು ದ.ಕ., ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ

ಮಂಗಳೂರು/ ಉಡುಪಿ: ಈದ್ ಮಿಲಾದ್ ಆಚರಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆ.26 ರ ಬದಲಿಗೆ ಆ.25 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿ ಅವರ ಕೋರಿಕೆ ಮೇರೆಗೆ ಆ.25 ರಂದು ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಜಿಲ್ಲಾಧಿಕಾರಿ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ಕೈಗೊಳ್ಳುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. […]

Continue Reading

ಸಾಂಕ್ರಾಮಿಕ ರೋಗ, ಎಚ್‌1ಎನ್‌1 ತಡೆಗೆ ಆರೋಗ್ಯ ಇಲಾಖೆ ಸನ್ನದ್ಧ, 4,212 ಇನ್‌ಫ್ಲುಯೆಂಜಾ ಪ್ರಕರಣ: ಸಚಿವ ಖಾದರ್

ಬೆಂಗಳೂರು: ರಾಜ್ಯದಲ್ಲಿ ಋತುಮಾನದ ಜ್ವರ ಹಾಗೂ ಎಚ್‌1ಎನ್‌1 ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಚಿಕಿತ್ಸಾ ಸಿದ್ಧತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ರಾಜ್ಯದ ಎಲ್ಲ ಜಿಲ್ಲೆಗಳ ಆರೋಗ್ಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ವಿಡಿಯೊ ಸಂವಾದ ನಡೆಸಿದರು. ಪ್ರಕರಣಗಳ ಸಂಖ್ಯೆ ಹೆಚ್ಚಾದರೂ ಅಥವಾ ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಥವಾಗಿ ನಿಭಾಯಿಸಲು ರಾಜ್ಯದ ಆರೋಗ್ಯ ವ್ಯವಸ್ಥೆ ಸಜ್ಜಾಗಿದೆ. ಅಗತ್ಯ ಮೂಲಸೌಕರ್ಯ, ಔಷಧಗಳು ಹಾಗೂ ವೈದ್ಯಕೀಯ […]

Continue Reading

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, ಆರು ಮಂದಿ ಮೀನುಗಾರರ ರಕ್ಷಣೆ

ಮಂಗಳೂರು: ಮೀನುಗಾರಿಕೆಗೆ ತೆರಳುತ್ತಿದ್ದ ಟ್ರಾಲರ್ ಬೋಟ್‌ವೊಂದು ಅರಬ್ಬಿ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಸಂಜೆ ಮಂಗಳೂರಿನ ಹಳೆ ಬಂದರಿನ ಸಮೀಪ ನಡೆದಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರ ಬೋಟ್‌ಗಳ ಮೀನುಗಾರರು ತಕ್ಷಣ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬಂಟ್ವಾಳ ತಾಲೂಕಿನ ಇಬ್ರಾಹಿಂ ಖಲೀಲ್ ಮೂಸಾ ಅವರಿಗೆ ಸೇರಿದ ‘ಅಯಾನ್’ ಹೆಸರಿನ ಟ್ರಾಲರ್ ಬೋಟ್‌ (ನೋಂದಣಿ ಸಂಖ್ಯೆ: IND-KA-01-MM-3992) ಮಂಗಳೂರು ಹಳೆ ಬಂದರಿನಿಂದ ದಡದ ಸಮೀಪದ ಮೀನುಗಾರಿಕೆಗೆ ತೆರಳುತ್ತಿತ್ತು. ಅಳಿವೆಬಾಗಿಲು ದಾಟಿದ ಕೆಲವೇ ಕ್ಷಣಗಳಲ್ಲಿ ಸಮುದ್ರದಲ್ಲಿ […]

Continue Reading