Sample Page

ಸೆ.21ರಂದು ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ, 650 ಹಾಸಿಗೆ ಆಸ್ಪತ್ರೆ; ತುಳು ಭಾಷಿಕರಿಗೆ 54 ಸೀಟು: ಡಾ. ಎಂ. ಮೋಹನ್ ಆಳ್ವ

ಮೂಡುಬಿದಿರೆ: ಕರಾವಳಿಯ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ಉದ್ದೇಶದಿಂದ ಮಿಜಾರಿನಲ್ಲಿ ನಿರ್ಮಿಸಲಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್ (ಆಳ್ವಾಸ್ ಮೆಡಿಕಲ್ ಕಾಲೇಜು) ಸೆಪ್ಟೆಂಬರ್ 21ರಂದು ಲೋಕಾರ್ಪಣೆಯಾಗಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಿಜಾರಿನ ಶ್ರೀಮತಿ ಶೋಭಾ ಮೋಹನ್ ಆಳ್ವ ಆವರಣದಲ್ಲಿ ಸೆ.21ರಂದು ಸಂಜೆ 6 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು,  ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ […]

Continue Reading

ಜನರ ಬಳಿಗೇ ಆಡಳಿತ, 15 ದಿನದಲ್ಲಿ ಸಮಸ್ಯೆ ಪರಿಹರಿಸಲು ಸಚಿವ ಲಕ್ಷ್ಮಣ ಸವದಿ ಸೂಚನೆ

ಕುಮಟಾ: ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ತ್ವರಿತವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಪ್ರಜಾಸೇವಾ’ ಆಂದೋಲನಕ್ಕೆ ಮತ್ತಷ್ಟು ವೇಗ ನೀಡಿರುವ ಸರ್ಕಾರ, ಸ್ವೀಕರಿಸಿದ ಅರ್ಜಿಗಳನ್ನು ಗರಿಷ್ಠ 15 ದಿನಗಳೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಕುಮಟಾ ತಾಲ್ಲೂಕಿನ ದೀವಗಿಯ ಹಾಲಕ್ಕಿ ಸಮುದಾಯ ಭವನದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಹಕಾರ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ,‘ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಯಾವುದೇ ವಿಳಂಬ ಸಹಿಸುವುದಿಲ್ಲ’ಎಂದು ಅಧಿಕಾರಿಗಳಿಗೆ […]

Continue Reading

ವಿಮಾನ ನಿಲ್ದಾಣ, ಬಂದರು–ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು; ಕಸ್ತೂರಿರಂಗನ್ ವರದಿ ಕುರಿತು ವಿಧಾನಮಂಡಲದಲ್ಲಿ ಚರ್ಚೆ: ಸಚಿವ ಸವದಿ

ಕಾರವಾರ: ಉತ್ತರ ಕನ್ನಡ ಸೇರಿದಂತೆ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಹೊಸ ವೇಗ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುಮಾರು ₹10 ಸಾವಿರ ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ಸಹಕಾರ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕುಮಟಾದಲ್ಲಿ ಶನಿವಾರ ಮಾತನಾಡಿದ ಅವರು, ಕರಾವಳಿ ಅಭಿವೃದ್ಧಿಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಮೊತ್ತದ ಯೋಜನೆಗಳಿಗೆ […]

Continue Reading

20 ವರ್ಷಗಳ ಸಮುದ್ರ ಕಾವಲಿಗೆ ತೆರೆ: ‘ಸಾವಿತ್ರಿಬಾಯಿ ಫುಲೆ’ ನೌಕೆಗೆ ಗೌರವಯುತ ವಿದಾಯ

ಕಾರವಾರ: ಎರಡು ದಶಕಗಳ ಕಾಲ ಭಾರತದ ಸಮುದ್ರ ಗಡಿ ಹಾಗೂ ಕರಾವಳಿ ಭದ್ರತೆಯಲ್ಲಿ ಮಹತ್ವದ ಸೇವೆ ಸಲ್ಲಿಸಿದ ಭಾರತೀಯ ತಟರಕ್ಷಣಾ ಪಡೆಯ ‘ಸಾವಿತ್ರಿಬಾಯಿ ಫುಲೆ’ ನೌಕೆಗೆ ಶನಿವಾರ ಸಂಜೆ ಕಾರವಾರ ಬಂದರಿನ ಕೋಸ್ಟ್ ಗಾರ್ಡ್ ಜೆಟ್ಟಿಯಲ್ಲಿ ಗೌರವಯುತ ವಿದಾಯ ನೀಡಲಾಯಿತು. ಇದರೊಂದಿಗೆ ನೌಕೆಯನ್ನು ಅಧಿಕೃತವಾಗಿ ಸೇವೆಯಿಂದ ಡಿ-ಕಮಿಷನ್ ಮಾಡಲಾಯಿತು. ಸೂರ್ಯಾಸ್ತದ ಬಳಿಕ ನಡೆದ ಸಮಾರಂಭದಲ್ಲಿ ನೌಕೆಯ ಮೇಲಿದ್ದ ಭಾರತೀಯ ತಟರಕ್ಷಣಾ ಪಡೆಯ ಧ್ವಜ ಹಾಗೂ ರಾಷ್ಟ್ರಧ್ವಜವನ್ನು ಕೊನೆಯ ಬಾರಿಗೆ ಗೌರವಪೂರ್ವಕವಾಗಿ ಕೆಳಗಿಳಿಸಲಾಯಿತು. ಬಳಿಕ ನೌಕೆಯ ಉದ್ದಕ್ಕೆ ಸಮನಾದ […]

Continue Reading

ಕರಾವಳಿಗೆ ಅಭಿವೃದ್ಧಿಯ ಹೊಸ ದಿಕ್ಕು, ‘ಮಂಗಳೂರು ಐ’ಯಿಂದ ಮೆಡಿಕಲ್ ಕಾಲೇಜುವರೆಗೆ– 61 ಯೋಜನೆಗಳಿಗೆ ಸಂಪುಟ ಅಸ್ತು: ಡಿಸಿಎಂ ಡಾ. ಪರಮೇಶ್ವರ್

ಮಂಗಳೂರು: ಕರಾವಳಿಯ ಪ್ರವಾಸೋದ್ಯಮ, ಮೀನುಗಾರಿಕೆ, ಬಂದರು, ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ಕ್ಷೇತ್ರಗಳಿಗೆ ಹೊಸ ವೇಗ ನೀಡುವ ಹಲವು ಮಹತ್ವದ ಯೋಜನೆಗಳಿಗೆ ರಾಜ್ಯ ಸರ್ಕಾರ ಶುಕ್ರವಾರ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಸುಮಾರು 200 ಮೀಟರ್ ಎತ್ತರದ ‘ಮಂಗಳೂರು ಐ’ ನಿರ್ಮಾಣ, 343 ಕಿ.ಮೀ. ಕರಾವಳಿ ದೋಣಿ ಸೇವೆ, ಮೀನುಗಾರಿಕಾ ವಿಶ್ವವಿದ್ಯಾಲಯ, ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಮಂಗಳೂರು ಮಹಾನಗರ ಪಾಲಿಕೆಗೆ ₹400 ಕೋಟಿ ವಿಶೇಷ ಅನುದಾನ ಸೇರಿದಂತೆ ಒಟ್ಟು […]

Continue Reading

ತುಳು 2ನೇ ಹೆಚ್ಚುವರಿ ಆಡಳಿತ ಭಾಷೆ:ಸಿಎಂ ಡಿಕೆಶಿ ಘೋಷಣೆ, ಕರಾವಳಿಗೆ 32,611 ಕೋಟಿ ಯೋಜನೆ; ಮಂಗಳೂರು ಜಿಲ್ಲೆ ಮರುನಾಮಕರಣ ಜನಾಭಿಪ್ರಾಯದ ಹೆಗಲಿಗೆ, ಸಂಪುಟ ನಿರ್ಣಯ

ಮಂಗಳೂರು: ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಇದರೊಂದಿಗೆ ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್, ಮೀನುಗಾರಿಕೆ ಮತ್ತು ನೀಲಿ ಆರ್ಥಿಕತೆ ವಿಶ್ವವಿದ್ಯಾಲಯ ಸೇರಿದಂತೆ ಒಟ್ಟು ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ದೊರೆತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ […]

Continue Reading

ವಿಶ್ವ ಹೃದಯ ದಿನ, ಇಂಡಿಯಾನಾ ಆಸ್ಪತ್ರೆಯಲ್ಲಿ 1,499ಕ್ಕೆ ಹೃದಯ ತಪಾಸಣೆ, ಸೆ.30 ರವರೆಗೆ ವಿಶೇಷ ಕೊಡುಗೆ: ಶಿವಪ್ರಸಾದ್ ಶೆಟ್ಟಿ

ಕಾರವಾರ:ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ಮತ್ತು ಹಾರ್ಟ್ ಇನ್‌ಸ್ಟಿಟ್ಯೂಟ್ ಸಾರ್ವಜನಿಕರಿಗಾಗಿ ವಿಶೇಷ ಹೃದಯ ತಪಾಸಣಾ ಪ್ಯಾಕೇಜ್ ಘೋಷಿಸಿದೆ. ಸಾಮಾನ್ಯವಾಗಿ ₹3,000 ವೆಚ್ಚವಾಗುವ ತಪಾಸಣೆಯನ್ನು ₹1,499ಕ್ಕೆ ನೀಡಲಾಗುತ್ತಿದ್ದು, ಈ ಸೌಲಭ್ಯ ಸೆಪ್ಟೆಂಬರ್ 30ರವರೆಗೆ ಲಭ್ಯವಿರಲಿದೆ ಎಂದು ಸಂಸ್ಥೆಯ ಪ್ರತಿನಿಧಿ ಶಿವಪ್ರಸಾದ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಿಯಾಯಿತಿ ದರದ ಪ್ಯಾಕೇಜ್‌ನಲ್ಲಿ ಇಸಿಜಿ, ಎಕೋ ಅಥವಾ ಟಿಎಂಟಿ, ಲಿಪಿಡ್ ಪ್ರೊಫೈಲ್, ಕ್ರಿಯೇಟಿನೈನ್, ರಕ್ತದಲ್ಲಿನ ಸಕ್ಕರೆ ಪ್ರಮಾಣದ ಪರೀಕ್ಷೆ ಸೇರಿದಂತೆ ಸಂಪೂರ್ಣ ರಕ್ತ ಮತ್ತು ಹೃದಯ ತಪಾಸಣೆಗಳನ್ನು […]

Continue Reading

ಉತ್ತರ ಕನ್ನಡದ ಅಭಿವೃದ್ಧಿಗೆ ಭರಪೂರ ಕೊಡುಗೆ: ವಿಮಾನ ನಿಲ್ದಾಣ, ಬಂದರು, ಪ್ರವಾಸೋದ್ಯಮಕ್ಕೆ ಸಚಿವ ಸಂಪುಟ ಸಭೆ ಅಸ್ತು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ದೊರೆತಿದೆ. ವಿಮಾನ ನಿಲ್ದಾಣ ವಿಸ್ತರಣೆ, ನೂತನ ಬಂದರು, ದ್ವೀಪಗಳ ಪ್ರವಾಸೋದ್ಯಮ ಅಭಿವೃದ್ಧಿ, ಶಿಕ್ಷಣ, ಮೀನುಗಾರಿಕೆ ಹಾಗೂ ಬುಡಕಟ್ಟು ಸಮುದಾಯಗಳ ಉದ್ಯೋಗಾವಕಾಶಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ವಿಮಾನ ನಿಲ್ದಾಣದ ರನ್‌ವೇಯನ್ನು 3,250 ಮೀಟರ್‌ಗೆ ವಿಸ್ತರಿಸಿ, ಎ-320 ಮಾದರಿಯ ವಿಮಾನಗಳ ಸಂಚಾರಕ್ಕೆ ಅನುಕೂಲ […]

Continue Reading

ತುಳುವಿಗೆ ಅಧಿಕೃತ ಸ್ಥಾನಮಾನ,ದಶಕಗಳ ಹೋರಾಟಕ್ಕೆ ಜಯ–ವೇದವ್ಯಾಸ ಕಾಮತ್

ಮಂಗಳೂರು: ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ದೊರೆತಿರುವುದು ತುಳುವರ ಹಲವು ವರ್ಷಗಳ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ತುಳುಪರ ಹೋರಾಟಗಾರರೊಂದಿಗೆ ಈ ಬೇಡಿಕೆಗಾಗಿ ಹಲವು ರೀತಿಯಲ್ಲಿ ಕೈಜೋಡಿಸಿದ್ದಾಗಿ ಅವರು ತಿಳಿಸಿದರು. ವಿಧಾನಸಭೆ ಅಧಿವೇಶನಗಳಲ್ಲಿಯೂ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಕುರಿತು ಪ್ರಸ್ತಾಪಿಸಿದ್ದಾಗಿ ಹೇಳಿದರು. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದ ವಿ. ಸುನಿಲ್ […]

Continue Reading

ತುಳುವಿಗೆ ಅಧಿಕೃತ ಭಾಷಾ ಸ್ಥಾನಮಾನ: ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮ

ಮಂಗಳೂರು: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಶುಕ್ರವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗ ತುಳು ಧ್ವಜ ಹಿಡಿದು ಜಮಾಯಿಸಿದ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಘೋಷಣೆಗಳೊಂದಿಗೆ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ತುಳು ನಮ್ಮ ನೆಲದ ಭಾಷೆ ಮಾತ್ರವಲ್ಲ; ನಾಡಿನ ಅಸ್ಮಿತೆ, […]

Continue Reading