Sample Page

ಅಪಘಾತ ರಹಿತ ಸಂಚಾರಕ್ಕೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್

ಕಾರವಾರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕರು ಹಾಗೂ ವಾಹನಗಳ ಸುರಕ್ಷಿತ, ಅಪಘಾತರಹಿತ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕು. ಪೊಲೀಸ್ ಇಲಾಖೆ ಸೂಚಿಸುವ ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರವಾರದ ಕಾಳಿ ಸೇತುವೆ ಮೇಲೆ ದ್ವಿಚಕ್ರ ವಾಹನಗಳು ಸಂಚರಿಸುವಾಗ ಬಲವಾದ ಗಾಳಿಯಿಂದ ಚಾಲನೆಗೆ ಅಡಚಣೆಯಾಗುತ್ತಿರುವ ಕುರಿತು […]

Continue Reading

ದೊಡ್ಡ ಸಾಮ್ರಾಜ್ಯಕ್ಕೆ ಅಧಿಪತಿ ಡಾ.ತುಂಬೆ ಮೊಯ್ದೀನ್…ತುಂಬೆ ಗ್ರಾಮದಿಂದ ಆರಂಭದ ಪಯಣದ ಹಾದಿ

ಮಂಗಳೂರು: ಸಣ್ಣ ಉದ್ಯಮ ಕನಸಿನೊಂದಿಗೆ ಆರಂಭವಾದ ಪ್ರಯತ್ನವನ್ನು ನಿರಂತರ ಪರಿಶ್ರಮ, ದೂರದೃಷ್ಟಿ ಹಾಗೂ ಸಾಮಾಜಿಕ ಬದ್ಧತೆಯೊಂದಿಗೆ ಬೆಳೆಸಿದ ತುಂಬೆ ಗ್ರೂಪ್‌, ಹಲವು ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಸಂಸ್ಥೆಯ ಮುಂದಿನ ಬೆಳವಣಿಗೆಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತುಂಬೆ ಗ್ರೂಪ್‌ ಸಂಸ್ಥಾಪಕ ಡಾ.ತುಂಬೆ ಮೊಯ್ದೀನ್ ಅವರು ಪತ್ರಿಕಾಗೋಷ್ಠಿಯಲ್ಲಿ ಮನಬಿಚ್ಚಿ ಮಾತನಾಡಿದರು. ಮಂಗಳೂರಿನ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಯುವಕನಾಗಿ ಉದ್ಯಮ ಕ್ಷೇತ್ರದ ಕನಸು ಕಂಡಿದ್ದೆ. ಮೂರು ದಶಕಗಳ ಹಿಂದೆ ಗಲ್ಫ್‌ಗೆ ತೆರಳಿ ತಮ್ಮ ಉದ್ಯಮ […]

Continue Reading

ಕಾರವಾರದಲ್ಲಿ ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮದಿನ ಆಚರಣೆ

ಕಾರವಾರ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನವನ್ನು ಕಾರವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಅವರ 82ನೇ ಹಾಗೂ ದೇವರಾಜ ಅರಸು ಅವರ 111ನೇ ಜನ್ಮದಿನೋತ್ಸವದ ಅಂಗವಾಗಿ ಇಬ್ಬರು ನಾಯಕರ ಭಾವಚಿತ್ರಗಳಿಗೆ ಪುಷ್ಪಹಾರ ಅರ್ಪಿಸಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮ ರಾಷ್ಟ್ರಗೀತೆಯೊಂದಿಗೆ ಆರಂಭಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, […]

Continue Reading

ಪಾಲಿಕೆ ವ್ಯಾಪ್ತಿಯ ನಗರದ ವಿವಿಧೆಡೆ ಪಾಲಿಕೆ ಕಮಿಷನರ್ ರಾಹುಲ್ ರತ್ನಂ ಪಾಂಡೆ ಪರಿಶೀಲನೆ

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪಾಲಿಕೆ ಕಮಿಷನರ್ ರಾಹುಲ್ ರತ್ನಂ ಪಾಂಡೆ ಅವರು ಮಂಗಳವಾರ ಪರಿಶೀಲಿಸಿದರು. ಸುಲ್ತಾನ್ ಬತ್ತೇರಿ– ತಣ್ಣೀರುಬಾವಿ ಬೋ ಸ್ಟ್ರಿಂಗ್ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಆಯುಕ್ತರು, ಕಾಮಗಾರಿಯ ಪ್ರಗತಿ ಕುರಿತು ಸ್ಮಾರ್ಟ್ ಸಿಟಿ ಹಾಗೂ ಎಂಜಿನಿಯರಿಂಗ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸುಲ್ತಾನ್ ಬತ್ತೇರಿ ಸುತ್ತಲಿನ ರಸ್ತೆಗಳಿಗೆ ಭೇಟಿ ನೀಡಿ ರಸ್ತೆ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ […]

Continue Reading

ಎಂ.ಡಿ. ಶಿಕ್ಷಣಕ್ಕೆ 1.5 ಕೋಟಿ ವಿದ್ಯಾರ್ಥಿವೇತನ, ತುಂಬೆ ಟರ್‌ನ್ಯಾಷನಲ್ ಪಾಥ್‌ವೇ ನೆರವು

ಮಂಗಳೂರು: ಅರ್ಹ ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬರ ವೈದ್ಯಕೀಯ ಸ್ನಾತಕೋತ್ತರ ಪದವಿ ಎಂ.ಡಿ. ಶಿಕ್ಷಣಕ್ಕಾಗಿ ತುಂಬೆ ಗ್ರೂಪ್‌ನ ಸಂಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯ್ದೀನ್ ಅವರು 1.5 ಕೋಟಿ ಮೊತ್ತದ ವಿದ್ಯಾರ್ಥಿವೇತನ ಘೋಷಣೆ ಮಾಡಿದ್ದಾರೆ. ಮಂಗಳೂರಿನ ಪುರಭವನದಲ್ಲಿ ನಡೆದ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವಿದ್ಯಾರ್ಥಿವೇತನ ವಿತರಣೆ, ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಣೆ ಹಾಗೂ ‘ಗ್ಲೋಬಲ್ ಲೀಡರ್‌ಶಿಪ್ ಅವಾರ್ಡ್‌–2026’ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿನಿಗೆ ‘ತುಂಬೆ ಇಂಟರ್‌ನ್ಯಾಷನಲ್ ಪಾಥ್‌ವೇ ಪ್ರೋಗ್ರಾಂ’ನ ವಿದ್ಯಾರ್ಥಿವೇತನ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು. ಬಿಸಿಎಫ್ […]

Continue Reading

ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 15,539 ಅಭ್ಯರ್ಥಿಗಳು, ಸ್ಥಳದಲ್ಲಿಯೇ 2416 ಮಂದಿಗೆ ಆಫರ್: ವಿವೇಕ್ ಆಳ್ವ

ಮಂಗಳೂರು; ಉದ್ಯೋಗ ಅರಸಿ ಬಂದ ಸಾವಿರಾರು ಅಭ್ಯರ್ಥಿಗಳ ಪೈಕಿ 2,416 ಮಂದಿಗೆ ಸ್ಥಳದಲ್ಲೇ ಉದ್ಯೋಗದ ಆಫರ್ ದೊರೆತಿದ್ದು, ಮತ್ತೊಂದು 6,183 ಮಂದಿ ಮುಂದಿನ ಹಂತದ ನೇಮಕಾತಿ ಪ್ರಕ್ರಿಯೆಗೆ ಆಯ್ಕೆಯಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳ ಈ ಬಾರಿ ಗಮನಾರ್ಹ ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 332 ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು, 15,539 ಅಭ್ಯರ್ಥಿಗಳು ವಿವಿಧ […]

Continue Reading

ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊಗೆ ಮಾತೃ ವಿಯೋಗ

ಮಂಗಳೂರು: ಮೂಡುಜೆಪ್ಪು–ಕೆಲರಾಯಿ ನಿವಾಸಿ, ದಿವಂಗತ ಗಿಲ್ಬರ್ಟ್ ಮೊಂತೆರೊ ಅವರ ಪತ್ನಿ ಪ್ರೆಸಿಲ್ಲಾ ಮೊಂತೆರೊ (81) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಪರೋಪಕಾರಿ ಸ್ವಭಾವದವರಾಗಿದ್ದ ಪ್ರೆಸಿಲ್ಲಾ ಮೊಂತೆರೊ ಅವರು ನೆರೆಹೊರೆಯವರು ಹಾಗೂ ಪರಿಚಿತರ ಜತೆಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಸರಳತೆ ಹಾಗೂ ಸೌಹಾರ್ದ ಸ್ವಭಾವದಿಂದ ಎಲ್ಲರೊಂದಿಗೂ ಉತ್ತಮ ಸಂಬಂಧ ಹೊಂದಿದ್ದ ಅವರು, ಕುಟುಂಬ ಹಾಗೂ ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗಿದ್ದರು. ಮೃತರು ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊ ಸೇರಿದಂತೆ ಮೂರು ಮಂದಿ […]

Continue Reading

ಮಾಜಿ ಸಚಿವ ನಾಗೇಶ್ ನಿಧನಕ್ಕೆ ಸಿಎಂ ಡಿಕೆಶಿ ಸಂತಾಪ

ಬೆಂಗಳೂರು: ಬಹಳ ವರ್ಷಗಳಿಂದ ನನಗೆ ಚಿರಪರಿಚಿತರಾದ ಮಾಜಿ ಸಚಿವ ನಾಗೇಶ್ ಅವರು ಮಂತ್ರಿಗಳಾಗಿ , ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಉತ್ತಮ ಮಾಡಿದ್ದರು. ಅವರೊಬ್ಬ ಪ್ರಾಮಾಣಿಕ ವ್ಯಕ್ತಿಯಾಗಿದ್ದರು” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಮಾಜಿ ಸಚಿವ ಬಿ ಸಿ.ನಾಗೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಶಿಕ್ಷಣ ಕ್ಷೇತ್ರದಲ್ಲಿ ಶಿಸ್ತು ತರಲು ನಾಗೇಶ್ ಬಹಳ ಪ್ರಯತ್ನಿಸಿದರು. ನೊಣವಿನಕೆರೆಗೆ ಭೇಟಿ ನೀಡಿದಾಗಲೆಲ್ಲ ನೊಣವಿನಕೆರೆ ಮಠದ ಎಲ್ಲಾ […]

Continue Reading

ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಮಾಧ್ಯಮ:ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳ ಮಾಹಿತಿ ಜನರಿಗೆ ತಲುಪಿಸುವುದರ ಜತೆಗೆ, ಸಾರ್ವಜನಿಕರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವಲ್ಲಿಯೂ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ), ಬೆಂಗಳೂರು ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ […]

Continue Reading

100 ಕೋಟಿ ವೆಚ್ಚದ ಭೂಕುಸಿತ ತಡೆ ಕಾಮಗಾರಿ, ನಿಗದಿತ ಅವದಿಯೊಳಗೆ ಮುಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವನೀಯ ಭೂಕುಸಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಂಡಿರುವ ₹100 ಕೋಟಿ ವೆಚ್ಚದ ಭೂಕುಸಿತ ತಡೆ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭೂಕುಸಿತ ತಡೆಗಾಗಿ ₹100 ಕೋಟಿ ವೆಚ್ಚದಲ್ಲಿ ಒಟ್ಟು 99 ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಎಲ್ಲಾ ಕಾಮಗಾರಿಗಳ […]

Continue Reading