Sample Page

ನಾಗರಪಂಚಮಿ: ಉಡುಪಿ ಜಿಲ್ಲೆಗೆ ಅಗಸ್ಟ್ 17 ರಂದು ಸಾರ್ವತ್ರಿಕ ರಜೆ– ಡಿಸಿ ಸ್ವರೂಪ

ಉಡುಪಿ: ನಾಗರಪಂಚಮಿ ಪ್ರಯುಕ್ತ ಅಗಸ್ಟ್ 17 ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಲೆ–ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

Continue Reading

ಮಂಗಳೂರು: ಮೆಕ್ಡನಾಲ್ಡ್ಸ್ ಫ್ಯಾಮಿಲಿ ರೆಸ್ಟೋರೆಂಟ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ

ಮಂಗಳೂರು: ನಗರದಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಿಡೀರ್ ದಾಳಿ ಮುಂದುವರೆಸಿದ್ದು, ಶನಿವಾರ ಸಿಟಿ ಸೆಂಟರ್ ಮಾಲ್ ನಲ್ಲಿ ಇದ್ದ ಮಳಿಗೆ ಮೇಲೆ ದಾಳಿ ಮಾಡಿ, ಸುರಕ್ಷತೆ ಹಾಗೂ ಕೊಳೆತ ಮಾಂಸ ಪತ್ತೆ ಆಗಿರುವ ಹಿನ್ನಲೆಯಲ್ಲಿ ಬಂದ್ ಮಾಡಿಸಿದ್ದರು. ಇದರ ಬೆನ್ನಲ್ಲೆ ಭಾನುವಾರ ಮೆಕ್ಡನಾಲ್ಡ್ಸ್ ಫ್ಯಾಮಿಲಿ ರೆಸ್ಟೋರೆಂಟ್‌ಗೆ ದಾಳಿ ಮಾಡಿ ಅಧಿಕಾರಿಗಳು ಗುಣಮಟ್ಟ ಹಾಗೂ ಶುಚಿತ್ವವನ್ನು ಪರಿಶೀಲನೆ ನಡೆಸಿದರು. ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಮಳಿಗೆಯ ಅಡುಗೆ ಕೋಣೆ, […]

Continue Reading

ಮತದಾರರ ಪಟ್ಟಿ ಪರಿಷ್ಕರಣೆ, 11.23 ಲಕ್ಷ ಅರ್ಜಿಗಳ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಇದುವರೆಗೆ 11,23,004 ಎನ್ಯುಮರೇಷನ್ ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ 11,23,004 ಫಾರ್ಮ್‌ಗಳ ಗಣಕೀಕರಣ ಪೂರ್ಣಗೊಂಡಿದೆ. ಮನೆ–ಮನೆ ಭೇಟಿ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 1,07,033 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 45,638 […]

Continue Reading

ದ. ಕ. ಜಿಲ್ಲೆಗೆ ನಾಗರಪಂಚಮಿ ಪ್ರಯುಕ್ತ ಸಾರ್ವತ್ರಿಕ ರಜೆ 17 ರಂದು: ಡಿಸಿ ದರ್ಶನ್

ಮಂಗಳೂರು: ನಾಗರಪಂಚಮಿ ಅಂಗವಾಗಿ ಅ. 17 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಲೆ–ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

Continue Reading

ಕೊಳೆತ ಮಾಂಸ ಪತ್ತೆ, ಆಹಾರ ಮಳಿಗೆ, ಪಿಜಿ, ಹಾಸ್ಟೆಲ್‌ಗಳಿಗೂ ದಾಳಿ, ನಿಯಮ ಉಲ್ಲಂಘಿಸಿದರೆ ಯಾರನ್ನು ಬಿಡಲ್ಲ: ಸಚಿವ ಖಾದರ್

ಮಂಗಳೂರು: ನಗರದ ಕೆಎಫ್‌ಸಿ ರೆಸ್ಟೋರೆಂಟ್‌ನಲ್ಲಿ ಕೊಳೆತ ಮಾಂಸ ಪತ್ತೆಯಾದ ಹಿನ್ನೆಲೆಯಲ್ಲಿ ಆಹಾರ ಮಳಿಗೆಗಳ ಫ್ರ್ಯಾಂಚೈಸಿಗಳಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲೆಡೆ ಇಂತಹ ದಾಳಿ ಹಾಗೂ ತಪಾಸಣೆಗಳು ನಡೆಯಲಿವೆ. ಆಹಾರ ಮಳಿಗೆಗಳ ಅಡುಗೆಮನೆ ಹಾಗೂ ಸಂಗ್ರಹ ಕೊಠಡಿಗಳಲ್ಲಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ಮಾತ್ರ ಇರಿಸಬೇಕು. ನೈರ್ಮಲ್ಯ ಕಾಪಾಡಬೇಕು. ಯಾವುದೇ ಸಂದರ್ಭದಲ್ಲೂ ದಾಳಿ ನಡೆಸಬಹುದು ಎಂದು ಅವರು ಎಚ್ಚರಿಸಿದರು. ಎಷ್ಟೇ ದೊಡ್ಡವರಾಗಿದ್ದರೂ, ಸಣ್ಣವರಾಗಿದ್ದರೂ ನಿಯಮ ಉಲ್ಲಂಘಿಸಿದರೆ ಬಿಡುವುದಿಲ್ಲ. ನಮಗೆ ಜನರ ಆರೋಗ್ಯವೇ ಮುಖ್ಯ. […]

Continue Reading

ಸಿರಸಿ: ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಕೆನರಾ ಬ್ಯಾಂಕ್‌ನಿಂದ ‘ವಿದ್ಯಾಜ್ಯೋತಿ’ ಪ್ರತಿಭಾ ಪುರಸ್ಕಾರ

ಸಿರಸಿ: ಶಿಕ್ಷಣದ ಜತೆಗೆ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಮಕ್ಕಳ ಭವಿಷ್ಯದ ಸಾಧನೆಗೆ ಬಲ ನೀಡುತ್ತದೆ. ಆ ನಿಟ್ಟಿನಲ್ಲಿ ಕೆನರಾ ಬ್ಯಾಂಕ್‌ನ ‘ವಿದ್ಯಾಜ್ಯೋತಿ’ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ನಗರದ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಸಿ.ಪಿ. ಬಜಾರ್ ಶಾಖೆಯ ಸಭಾಭವನದಲ್ಲಿ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳ ವಿದ್ಯಾರ್ಥಿನಿಯರಿಗೆ ಈ ಪುರಸ್ಕಾರ ವಿತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ವೈ.ಎಸ್ ಪಿ ಗೀತಾ ಪಾಟೀಲ್ ಅವರು […]

Continue Reading

ಗ್ರಾಹಕರ ದೂರು, ಆರೋಗ್ಯ, ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ, ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ

ಮಂಗಳೂರು: ಗ್ರಾಹಕರೊಬ್ಬರು ಆರ್ಡರ್ ಮಾಡಿದ್ದ ಕೋಳಿ ಆಹಾರದಿಂದ ಕೆಟ್ಟ ವಾಸನೆ ಬರುತ್ತಿದೆ ಎಂಬ ದೂರಿನ ಬೆನ್ನಲ್ಲೇ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ಮಾಲ್‌ನಲ್ಲಿರುವ ಮಳಿಗೆಗೆ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ವೇಳೆ ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಹಾಗೂ ಅನೈರ್ಮಲ್ಯ ಪತ್ತೆ ಆಗಿದ್ದು, ಮಳಿಗೆ ಬಂದ್ ಮಾಡಲಾಗಿದೆ. ಗ್ರಾಹಕಯೊಬ್ಬರು ಮಳಿಗೆಯೊಂದರಿಂದ ಚಿಕನ್ ಫೆರಿ ಆರ್ಡರ್ ಮಾಡಿದ್ದರು. ಆಹಾರದ ಬಾಕ್ಸ್ ತೆರೆದಾಗ ಮಾಂಸದಿಂದ ಕೆಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ […]

Continue Reading

ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಸಾಕಾರ, ಉತ್ತರ ಕನ್ನಡದ ಅಭಿವೃದ್ಧಿಗೆ ಹೊಸ ಚೈತನ್ಯ: ಮಾಜಿ ಶಾಸಕಿ ರೂಪಾಲಿ ನಾಯ್ಕ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಕನಸಾಗಿದ್ದ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಸಾಕಾರಗೊಳ್ಳುತ್ತಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರವಾಗಿದೆ. ಯೋಜನೆಯ ವಿದ್ಯುದ್ದೀಕರಣದೊಂದಿಗೆ ಬ್ರಾಡ್‌ಗೇಜ್ ರೈಲು ಮಾರ್ಗವಾಗಿ ಪರಿವರ್ತನೆಯಾಗುತ್ತಿರುವುದು ಜಿಲ್ಲೆಯ ಸಾರಿಗೆ ಸಂಪರ್ಕಕ್ಕೆ ಮಹತ್ವದ ಬಲ ನೀಡಲಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ್ ಅವರು ತಿಳಿಸಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ, ಕೈಗಾರಿಕಾ ಚಟುವಟಿಕೆಗಳ ವಿಸ್ತರಣೆ, ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಗೂ ಜನರ ಸಂಪರ್ಕ ವ್ಯವಸ್ಥೆಯ ಸುಧಾರಣೆಯ ದೃಷ್ಟಿಯಿಂದ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಮಹತ್ವದ ಯೋಜನೆಯಾಗಿದೆ. ಈ ಮಾರ್ಗದ ಮೂಲಕ […]

Continue Reading

ತಲಪಾಡಿ ಶಾರದಾ ವಿದ್ಯಾನಿಕೇತನದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ, ಧ್ವಜಾರೋಹಣ

ತಲಪಾಡಿ: ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ಪರಿಸರ ಕಾಳಜಿಯ ಸಂದೇಶದೊಂದಿಗೆ ತಲಪಾಡಿಯ ಶಾರದಾ ವಿದ್ಯಾನಿಕೇತನದಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ, ಧ್ವಜಾರೋಹಣ ಹಾಗೂ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು. ಎನ್‌ಡಿಎ ಮತ್ತು ಎನ್‌ಸಿಸಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಗೌರವ ರಕ್ಷೆ ಸ್ವೀಕರಿಸಿದ ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಗಟ್ಟಿ ಮಾತನಾಡಿ, ಸ್ವಾತಂತ್ರ್ಯ […]

Continue Reading

ನೈಸ್ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂ ಡಿಕೆಶಿಗೆ ಕೇಂದ್ರ ಮಂತ್ರಿ ಕುಮಾರಸ್ವಾಮಿ ಪತ್ರ

ಬೆಂಗಳೂರು: ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಗೆ ಸಂಬಂಧಿಸಿದ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಯೋಜನೆ ಅನುಷ್ಠಾನದಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿವರವಾದ ಪತ್ರ ಬರೆದಿದ್ದಾರೆ. ನೈಸ್ ಸಂಸ್ಥೆಯು ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ, ಪರಿಹಾರ ವಿತರಣೆ ಹಾಗೂ ಟೋಲ್ ಸಂಗ್ರಹ ಸೇರಿದಂತೆ ಹಲವು ವಿಚಾರಗಳಲ್ಲಿ ಒಪ್ಪಂದದ ಷರತ್ತುಗಳು ಮತ್ತು ನ್ಯಾಯಾಲಯದ ನಿರ್ದೇಶನಗಳನ್ನು ಉಲ್ಲಂಘಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಸಮಗ್ರ […]

Continue Reading