Sample Page

ರೋಹನ್ ಸ್ಕ್ವೇರ್‌ನಲ್ಲಿ ಕೃಷಿ ವೃಕ್ಷಾನ್ವೇಷಕ ಸಾಧಕ ಪ್ರಶಸ್ತಿ ಪ್ರದಾನ, ಧ್ವಜಾರೋಹಣ ಸಂಭ್ರಮ

ಮಂಗಳೂರು: ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಗರದ ವಿವಿಧ ಯೋಜನೆಗಳ ಆವರಣದಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಪಿತಾನಿಯ ರೋಹನ್ ಸ್ಕ್ವೇರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ, ನಿರ್ದೇಶಕ ಡಿಯೋನ್ ಮೊಂತೆರೊ, ಪ್ರಧಾನ ವ್ಯವಸ್ಥಾಪಕಿ ಸುಮನಾ ಹಾಗೂ ವಿಶೇಷ ಅತಿಥಿ ಎಂ.ಕೆ. ಅಲಿ ಅವರ ಉಪಸ್ಥಿತಿಯಲ್ಲಿ ಕೃಷಿಕ ಜ್ಯಾಕ್ ಅನಿಲ್ ಧ್ವಜಾರೋಹಣ ನೆರವೇರಿಸಿದರು. ಕೃಷಿ ಕ್ಷೇತ್ರಕ್ಕೆ ಜ್ಯಾಕ್ ಅನಿಲ್ ನೀಡುತ್ತಿರುವ ಗಮನಾರ್ಹ ಕೊಡುಗೆಯನ್ನು ಗುರುತಿಸಿ ‘ಕೃಷಿ ವೃಕ್ಷಾನ್ವೇಷಕ […]

Continue Reading

ಅಂಕೋಲಾ: ಶಾಂತಿನಿಕೇತನ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ

ಅಂಕೋಲಾ: ಶಾಂತಿನಿಕೇತನ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಶಾಂತಿ ನಾಯಕ ಧ್ವಜಾರೋಹಣ ಮಾಡಿ ಹಿರಿಯರು ಒದಗಿಸಿಕೊಟ್ಟ ಸ್ವಾತಂತ್ರ್ಯವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು. ಕಲಾ ಭಾರತಿ ಟ್ರಸ್ಟ್ ಅಧ್ಯಕ್ಷ ಪ್ರಶಾಂತ ಶೆಟ್ಟಿ ಹಾಗೂ ದಂತವೈದ್ಯ ಡಾ. ಸಂಜು ನಾಯಕ ಹಾಗೂ ವಿದ್ಯಾರ್ಥಿಗಳ ಪಾಲಕರು ಇದ್ದರು. ದೇಶಭಕ್ತಿ ಗೀತೆಯನ್ನು ಮಕ್ಕಳು ಪ್ರಸ್ತುತಪಡಿಸಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿಯರಾದ ಶೀತಲ್ ನಾಯ್ಕ್, ಮಮತಾ ನಾಯ್ಕ, ಶ್ರದ್ಧಾ ಆಚಾರ್ಯ, ಮೈತ್ರಿ ಭಟ್, ಲಕ್ಷ್ಮೀ ಪೂಜಾರ, ಜ್ಯೋತಿ ವೆರ್ಣೇಕರ್ ಇದ್ದರು.

Continue Reading

ವಳಚ್ಚಿಲ್ ಎಕ್ಸ್ ಪರ್ಟ್ ಕಾಲೇಜಿನಲ್ಲಿ 80 ನೇ ಸ್ವಾತಂತ್ರ್ಯ ದಿನದ ಸಂಭ್ರಮದ ಧ್ವಜಾರೋಹಣ

ಮಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರವನ್ನು ನಾವು ಮರೆಯುವಂತಿಲ್ಲ. ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಮಹಾತ್ಮರು ಪ್ರಾತಃಸ್ಮರಣೀಯರು ಎಂದು ನಿವೃತ್ತ ಕರ್ನಲ್ ಎ. ಕೆ. ಜಯಚಂದ್ರನ್ ಅವರು ಹೇಳಿದರು. ವಳಚ್ಚಿಲ್ ಎಕ್ಸ್ ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. 1947 ರ ಯುವಕರ ಕೈಯಲ್ಲಿ ಮೊಬೈಲ್, ಇಂಟರ್ ನೆಟ್ ಇರಲಿಲ್ಲ. ಅವರ ಎದುರಿಗಿದ್ದದ್ದು ಕೇವಲ ಲಾಠಿ ಮಾತ್ರ. ಆದರೂ ಅವರ ಗುರಿ ನಿಶ್ಚಲವಾಗಿತ್ತು. ಸ್ವತಂತ್ರ ಭಾರತದಲ್ಲಿ ‘ಭಾರತ ಬಾಹ್ಯಾಕಾಶ ರಂಗದಲ್ಲಿ ಏನನ್ನೂ ಸಾಧಿಸಲು […]

Continue Reading

ಸ್ವಾತಂತ್ರ್ಯ ದೊರಕಿಸುವಲ್ಲಿ ಕಾಂಗ್ರೆಸ್‌ನ ಕೊಡುಗೆ ಅನನ್ಯ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಭಾರತಕ್ಕೆ ಸ್ವಾತಂತ್ರ್ಯ ದೊರಕಿಸುವಲ್ಲಿ ಕಾಂಗ್ರೆಸ್‌ನ ಕೊಡುಗೆ ಅನನ್ಯ ಆಗಿದ್ದು, ಕಾಂಗ್ರೆಸ್‌ ಅನ್ನು ದೇಶದ್ರೋ ಹಿ ಎಂದು ಆರೋಪಿಸುವ ಬಿಜೆಪಿಗೆ ಆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಾಗ್ದಾಳಿ ನಡೆಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಬ್ರಿಟಿಷರ ಆಳ್ವಿಕೆಯಲ್ಲಿದ್ದ ಸಂದರ್ಭದಲ್ಲಿ ಬಿಜೆಪಿ ಎಲ್ಲಿತ್ತು. ವಿಜಯನಗರದಲ್ಲಿ ಸಚಿವ ಜಮೀರ್ ಅಹ್ಮದ್ […]

Continue Reading

ರಾಜ್ಯದ ಅಭಿವೃದ್ಧಿಯ ತೇರು ಎಳೆಯಲು ಎಲ್ಲರ ಕೈಗಳು ನನ್ನ ಜತೆ ಕೈಜೋಡಿಸಬೇಕು: ಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದ ಅಭಿವೃದ್ಧಿಯ ತೇರನ್ನು ಎಳೆಯಲು ಕೇವಲ ಎರಡು ಕೈಗಳು ಸಾಲುವುದಿಲ್ಲ. ಕನ್ನಡ ಕುಲಕೋಟಿಯ ಕೈಗಳು ನನ್ನ ಜೊತೆ ಕೈಜೋಡಿಸಬೇಕು. ಬನ್ನಿ, ಅಭಿವೃದ್ಧಿಯ ತೇರನ್ನು ಒಟ್ಟಾಗಿ ಎಳೆಯೋಣ ಎಂದು ಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಮಾಣಿಕ್ ಷಾ ಮೈದಾನದಲ್ಲಿ ಶನಿವಾರ ನಡೆದ 80 ನೇ ಸ್ವಾತಂತ್ರ್ಯ ದಿನವನ್ನು ಧ್ವಜಾರೋಹಣ ನೆರವೇರಿಸಿದ ನಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನನ್ನನ್ನು ನಂಬಿ ಇಲ್ಲಿಯವರೆಗೆ ಕರೆತಂದ ನಾಡಿನ ಜನತೆಗೆ ನಾನು ಸಾಕ್ಷಿಗುಡ್ಡೆ ಉಳಿಸುತ್ತೇನೆ. ಕರ್ನಾಟಕದ ಅಭಿವೃದ್ಧಿ […]

Continue Reading

ಸರ್ಕಾರಿ ಯೋಜನೆಗಳ ಮಾಹಿತಿ ನೀಡುವ ಡಿಜಿಟಲ್ ಫಲಕ ಉದ್ಘಾಟಿಸಿದ ಸಚಿವ ಲಕ್ಷ್ಮಣ ಸವದಿ

ಕಾರವಾರ: ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಒಳಗೊಂಡ ಡಿಜಿಟಲ್ ಫಲಕವನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಶನಿವಾರ ಉದ್ಘಾಟಿಸಿದರು. ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ಮಾಹಿತಿಯನ್ನು ಡಿಜಿಟಲ್ ಫಲಕದ ಮೂಲಕ ಸುಲಭವಾಗಿ ತಿಳಿದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಕೆಎಸ್‌ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, […]

Continue Reading

ಆರ್ಥಿಕ ಹಿಂದುಳಿದ ವಿದ್ಯಾರ್ಥಿಗಳಿಗೆ ಬಿಸಿಎಫ್‌ನಿಂದ ವಿದ್ಯಾರ್ಥಿವೇತನ: ಬಿಸಿಎಫ್ ಅಧ್ಯಕ್ಷ ಬಿ.ಕೆ. ಯೂಸುಫ್

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ದುಬೈನ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ಆ.16ರಂದು ವಿದ್ಯಾರ್ಥಿವೇತನ ವಿತರಣೆ ಹಾಗೂ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ನಗರದ ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಬಿಸಿಎಫ್ ಅಧ್ಯಕ್ಷ ಬಿ.ಕೆ. ಯೂಸುಫ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬಿಸಿಎಫ್ ಕಳೆದ 25 ವರ್ಷಗಳಿಂದ […]

Continue Reading

100 ದಿನಗಳಲ್ಲಿ ಅಭಿವೃದ್ಧಿಯ ಹೊಸ ಹೆಜ್ಜೆ, ಉತ್ತರ ಕನ್ನಡಕ್ಕೆ ಹಲವು ಯೋಜನೆಗಳ ಘೋಷಣೆ: ಸಚಿವ ಸವದಿ

ಕಾರವಾರ: ರೈತರು, ಯುವಜನರು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ರಾಜ್ಯದ ಆಡಳಿತ ವ್ಯವಸ್ಥೆಗೆ ಮತ್ತಷ್ಟು ವೇಗ ನೀಡಲು ಸರ್ಕಾರ ಮುಂದಾಗಿದೆ. ಮುಂದಿನ 100 ದಿನಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಘೋಷಿಸಿದರು. ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹೊಸ ಯೋಜನೆಗಳ ಜಾರಿ: ರೈತ ಮಿತ್ರ–ಬಡವರ […]

Continue Reading

ಕೃಷ್ಣೋತ್ಸವ ಪ್ರಶಸ್ತಿಗೆ ಎಕ್ಸಲೆಂಟ್ ಪಿಯು ಕಾಲೇಜಿನ ಅಧ್ಯಕ್ಷ ಯುವರಾಜ್ ಜೈನ್ ಆಯ್ಕೆ

ಮೂಡುಬಿದಿರೆ: ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ‘ಬೆದ್ರದ ಕೃಷ್ಣೋತ್ಸವ 2026’ರಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ ‘ಕೃಷ್ಣೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಸೆಪ್ಟೆಂಬರ್ 5ರಂದು ಮೂಡುಬಿದಿರೆಯ ಕೆ. ಅಮರನಾಥ ಶೆಟ್ಟಿ ವೃತ್ತದ ಬಳಿಯ ವೇಣೂರು ಕೃಷ್ಣಯ್ಯ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜವನೆರ್ ಬೆದ್ರ ಫೌಂಡೇಶನ್ ಸ್ಥಾಪಕ ಅಮರ್ ಕೋಟೆ ತಿಳಿಸಿದ್ದಾರೆ. ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರದ […]

Continue Reading

ಮಂಗಳೂರಿನಲ್ಲಿ 80ನೇ ಸ್ವಾತ್ರ್ಯೋತ್ಸವಕ್ಕೆ ಅದ್ದೂರಿ ಚಾಲನೆ, ಆರೋಗ್ಯ  ಸಚಿವ ಯು.ಟಿ. ಖಾದರ್ ಧ್ವಜಾರೋಹಣ

ಮಂಗಳೂರು: ಕರಾವಳಿಯ ಮಂಗಳೂರು ವಿವಿಧ ಧರ್ಮ, ಭಾಷೆ, ಸಂಸ್ಕೃತಿ ಮತ್ತು ವೈವಿಧ್ಯಮಯ ಜೀವನ ಪದ್ಧತಿಯ ಜನರು ಪರಸ್ಪರ ಪ್ರೀತಿ, ಗೌರವ ಹಾಗೂ ಸಹಬಾಳ್ವೆಯಿಂದ ಬದುಕುತ್ತಿರುವ ‘ಮಿನಿ ಭಾರತ’ದಂತಿದೆ. ನಂಬಿಕೆ, ಭಾಷೆ ಹಾಗೂ ರಾಜಕೀಯ ಅಭಿಪ್ರಾಯಗಳು ಭಿನ್ನವಾಗಿರಬಹುದು. ಆದರೆ ರಾಷ್ಟ್ರಧ್ವಜದಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಒಂದೇ. ಭಾರತೀಯತೆ ನಮ್ಮ ಹೆಮ್ಮೆಯ ಗುರುತು ಮತ್ತು ಅದುವೇ ನಮ್ಮ ಪ್ರಬಲ ಶಕ್ತಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ […]

Continue Reading