Sample Page

ಮುಂಡಗೋಡದಲ್ಲಿ ಭತ್ತದ ಬೆಳೆ ಪ್ರದೇಶ ವೀಕ್ಷಿಸಿದ ಸಚಿವ ಲಕ್ಷ್ಮಣ ಸವದಿ, ಅಧಿಕಾರಿಗಳು, ಶಾಸಕರು ಸಾಥ್

ಮುಂಡಗೋಡ: ಸಚಿವ ಲಕ್ಷ್ಮಣ ಸವದಿ ಅವರು ಶುಕ್ರವಾರ ಮುಂಡಗೋಡ ತಾಲೂಕಿನ ಕಾತ್ತೂರು ಗ್ರಾಮದಲ್ಲಿ ಭತ್ತದ ಬೆಳೆ ಪ್ರದೇಶಕ್ಕೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ವೀಕ್ಷಿಸಿದರು. ನಂತರ ಸಚಿವರು ಮುಂಡಗೋಡ ತಾಲೂಕಿನ ಶಿಂಗೇನ ಹಳ್ಳಿಯಲ್ಲಿ ಶುಂಠಿ ಬೆಳೆ ಪ್ರದೇಶ ವೀಕ್ಷಣೆ ಮಾಡಿದರು. ಯಲ್ಲಾಪುರ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್, ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ಟಿ. ನಾಯ್ಕ, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸೇರಿದಂತೆ ಅಧಿಕಾರಿಗಳು […]

Continue Reading

ಆಳ್ವಾಸ್ ಪ್ರಗತಿ–2026ಕ್ಕೆ ಚಾಲನೆ: ಮೊದಲ ದಿನ 13 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳ ಹಾಜರಿ

ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಶುಕ್ರವಾರ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಮೊದಲ ದಿನವೇ 13,016 ಉದ್ಯೋಗಾಕಾಂಕ್ಷಿಗಳು ಮೇಳಕ್ಕೆ ಆಗಮಿಸಿದ್ದು, 326 ಕಂಪನಿಗಳು ಉದ್ಯೋಗ ನೇಮಕಾತಿಗಾಗಿ ಭಾಗವಹಿಸಿವೆ. ಕಾರ್ಯಕ್ರಮ ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ತಕ್ಕಂತೆ ಯುವಜನರು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣ […]

Continue Reading

ಗ್ರಾ.ಪಂ, ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ, ಆರೋಪಿಗಳು ಪರಾರಿ,ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡು

ಪಡುಬಿದ್ರೆ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿ ಎಂಬಲ್ಲಿ ನಡೆದಿದೆ. ಮುದರಂಗಡಿ ಗ್ರಾಮದ ಪಿಲಾರು ನಿವಾಸಿ ಡೇವಿಡ್ ಡಿಸೋಜ, ಮುದರಂಗಡಿಯಲ್ಲಿರುವ ಕಚೇರಿಯಿಂದ ಹತ್ತಿರ ಮುದರಂಗಡಿ ಸಂತ್ ಫ್ರಾನ್ಸಿಸ್ ಜೆವಿಯರ್ ಚರ್ಚ್‌ನ ಎದುರು ನಿಲ್ಲಿಸಿದ್ದ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡಿದ್ದ […]

Continue Reading

ಉನ್ನತ ಶಿಕ್ಷಣ ಮನೆ ಬಾಗಿಲಿಗೆ ಕೆಎಸ್‌ಒಯು ಗುರಿ: ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಜ್ಞಾನಪ್ರಕಾಶ್

ಮಂಗಳೂರು: ಉದ್ಯೋಗ, ಕುಟುಂಬ ಅಥವಾ ಇತರ ಕಾರಣಗಳಿಂದ ನಿಯಮಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) 2026–27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಪದವಿ, ಸ್ನಾತಕೋತ್ತರ, ಡಿಪ್ಲೊಮ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೆಎಸ್‌ಒಯು ಕುಲಪತಿ ಎ.ಪಿ. ಜ್ಞಾನಪ್ರಕಾಶ್ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕರ್ನಾಟಕದಲ್ಲಿ ದೂರಶಿಕ್ಷಣ ನೀಡಲು ಮಾನ್ಯತೆ […]

Continue Reading

ಜಿಲ್ಲಾಧಿಕಾರಿ ಗೈರು: ಎಸ್ಸಿ,ಎಸ್ಟಿ ಕುಂದುಕೊರತೆ ಸಭೆ ಮುಂದೂಡಿಕೆ, ಡಿಸಿ ಇಲ್ಲದೆ ಸಭೆಗೆ ಅರ್ಥವಿಲ್ಲ ಎಂದು ಆಕ್ರೋಶ

ಮಂಗಳೂರು: ಸುಮಾರು ಒಂದೂವರೆ ವರ್ಷದ ಬಳಿಕ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜಿಲ್ಲಾ ಮಟ್ಟದ ಕುಂದುಕೊರತೆ ಸಭೆ ಜಿಲ್ಲಾಧಿಕಾರಿ ಗೈರುಹಾಜರಾಗಿದ್ದನ್ನು ವಿರೋಧಿಸಿ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಗುರುವಾರ ಸಭೆ ಮುಂದೂಡಲಾಯಿತು. ಪಡೀಲ್‌ನ ಪ್ರಜಾಸೌಧದಲ್ಲಿ ನಡೆದ ಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣ ಆಗಿದ್ದು, ಕೊನೆಗೆ ಜಿಲ್ಲಾಧಿಕಾರಿ ಸೂಚನೆಯಂತೆ ಸಭೆಯನ್ನು ಅಗಸ್ಟ್‌ 20 ಕ್ಕೆ ಮರು ನಿಗದಿಪಡಿಸಿದ ಘಟನೆ ನಡೆದಿದೆ. ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಹಾನಿ […]

Continue Reading

ಇದೇ 9 ರಂದು ದೇಶದ ಸೇವೆ ಸಲ್ಲಿಸಿದ ಕುಲಾಲ ಸಮುದಾಯದ ನಿವೃತ್ತ ವೀರ ಯೋಧರು, ವೀರ ನಾರಿಯರಿಗೆ ಸನ್ಮಾನ: ಯತೀಶ್ ಕುಮಾರ್

ಮಂಗಳೂರು: ದೇಶದ ರಕ್ಷಣೆಗೆ ಸೇವೆ ಸಲ್ಲಿಸಿದ ಕುಲಾಲ ಸಮುದಾಯದ ನಿವೃತ್ತ ವೀರ ಯೋಧರು ಹಾಗೂ ವೀರ ನಾರಿಯರನ್ನು ಗೌರವಿಸುವ ವಿಶೇಷ ಸಮಾರಂಭವು ಆಗಸ್ಟ್ 9ರಂದು ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಪ್ರಧಾನ ಸಂಘಟಕ ಯತೀಶ್ ಕುಮಾರ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕ್ಷೇತ್ರದ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕುಲಾಲ ಸಮುದಾಯಕ್ಕೆ ಸೇರಿದ 60ಕ್ಕೂ ಅಧಿಕ ನಿವೃತ್ತ ವೀರ ಯೋಧರು ಹಾಗೂ ವೀರ ನಾರಿಯರನ್ನು […]

Continue Reading

ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ‘ಸಂಧ್ಯಾ ಕಿರಣ’ ಆರೋಗ್ಯ ಯೋಜನೆ: ಸಚಿವ ಯು.ಟಿ. ಖಾದರ್

ಮಂಗಳೂರು: ರಾಜ್ಯದ 60 ರಿಂದ 70 ವರ್ಷದ ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ರಕ್ಷಣೆ ಒದಗಿಸುವ ಉದ್ದೇಶದಿಂದ ‘ಸಂಧ್ಯಾ ಕಿರಣ’ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಗುರುವಾರ ಸುದ್ದೊಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ ತುರ್ತು ವೈದ್ಯಕೀಯ ಸೇವೆ ಬಲಪಡಿಸುವ ನಿಟ್ಟಿನಲ್ಲಿ ಹೊಸ ಅಂಬುಲೆನ್ಸ್‌ಗಳ ಸೇರ್ಪಡೆಗೂ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 450 ಹೊಸ ಅಂಬುಲೆನ್ಸ್‌ಗಳನ್ನು ಒದಗಿಸಲಾಗಿದ್ದು, ಶೀಘ್ರದಲ್ಲೇ ಹೊಸ ವಾಹನಗಳು ಸೇವೆಗೆ ಬರಲಿವೆ. ಇದರಿಂದ ರಾಜ್ಯದಲ್ಲಿ 750ಕ್ಕೂ ಹೆಚ್ಚು ಅಂಬುಲೆನ್ಸ್‌ಗಳು ಕಾರ್ಯನಿರ್ವಹಿಸಲಿವೆ […]

Continue Reading

ಅತಿವೃಷ್ಠಿ ಹಾನಿಗೆ ತಕ್ಷಣ ಪರಿಹಾರ; ಸಚಿವರ ಸಭೆಯಲ್ಲಿ ಕ್ಷೇತ್ರದ ಸಮಸ್ಯೆಗಳ ಪ್ರಸ್ತಾಪ

ಸಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿ ಪರಿಸ್ಥಿತಿಯ ಪರಿಶೀಲನೆಗಾಗಿ ಶಿರಸಿಯ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು, ಬನವಾಸಿ ಸೇರಿದಂತೆ ತಮ್ಮ ಕ್ಷೇತ್ರದಲ್ಲಿ ಅತಿವೃಷ್ಠಿಯಿಂದ ಉಂಟಾಗಿರುವ ಹಾನಿಯ ಕುರಿತು ಸಚಿವರ ಗಮನ ಸೆಳೆದರು. ಕೃಷಿ ಬೆಳೆಗಳು, ರಸ್ತೆ, ಸೇತುವೆಗಳು ಹಾಗೂ ಸಾರ್ವಜನಿಕ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿದ್ದು, ಸಂತ್ರಸ್ತರಿಗೆ ತಕ್ಷಣ ಪರಿಹಾರ ವಿತರಿಸುವುದರ ಜೊತೆಗೆ ಹಾನಿಗೊಳಗಾದ ಕಾಮಗಾರಿಗಳ ದುರಸ್ತಿಯನ್ನು ತುರ್ತಾಗಿ ಕೈಗೊಳ್ಳುವಂತೆ […]

Continue Reading

ಮಕ್ಕಳಿಗಾಗಿ ‘ಫ್ರೀಡಮ್ ಪ್ಯಾಲೆಟ್ 2026’ ಚಿತ್ರಕಲಾ ಸ್ಪರ್ಧೆ; 25 ಸಾವಿರ ಪ್ರಥಮ ಬಹುಮಾನ

ಮಂಗಳೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಕ್ಕಳಲ್ಲಿ ದೇಶಪ್ರೇಮ, ಸೃಜನಶೀಲತೆ ಮತ್ತು ಕಲಾತ್ಮಕ ಅಭಿವ್ಯಕ್ತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಮಂಗಳೂರಿನ ರೋಹನ್ ಕಾರ್ಪೊರೇಶನ್ ‘ಫ್ರೀಡಮ್ ಪ್ಯಾಲೆಟ್ 2026’ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಈ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಸ್ಪರ್ಧಿಗಳು ಸ್ವಾತಂತ್ರ್ಯೋತ್ಸವ ವಿಷಯಾಧಾರಿತ ಚಿತ್ರವನ್ನು ರಚಿಸಿ ಆಗಸ್ಟ್ 10ರೊಳಗೆ ರೋಹನ್ ಕಾರ್ಪೊರೇಶನ್‌ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿರುವ ಲಿಂಕ್ ಅಥವಾ ಕ್ಯೂಆರ್ ಕೋಡ್ ಮೂಲಕ […]

Continue Reading

ಬೀದರ್ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಸುರೇಖಾ

ಬೀದರ್‌: ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ ಆಗಿ ಸುರೇಖಾ ಅವರನ್ನು ನೇಮಕ ಮಾಡಿ ಸರ್ಕಾರದ ಅಧಿನ ಕಾರ್ಯದರ್ಶಿ‌ ಕೇಶವಪ್ರಸಾದ್ ಕೆ.ಎಚ್‌ ಅವರು ಆದೇಶ ಹೊರಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯ ಉಪ ಕಾರ್ಯದರ್ಶಿಯಾಗಿದ್ದ ಸುರೇಖಾ ಅವರನ್ನು ಬೀದರ್‌ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೀದರ್‌ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಆಗಿದ್ದ ಶಿವಾನಂದ್‌ ಕರಾಳೆ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರ ಆಪ್ತ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. […]

Continue Reading