Sample Page

ಕರಾವಳಿಯಲ್ಲಿ ಫಿಶಿಂಗ್ ಗೆ ದೋಣಿಗಳು, ಮೀನುಗಾರರಲಿ ಹೆಚ್ಚಿದ ಉತ್ಸಾಹ! ದಕ್ಕೆಯಲ್ಲಿ ಬಿರುಸಿನ ಚಟುವಟಿಕೆ

ಮಂಗಳೂರು: ಎರಡು ತಿಂಗಳ ಕಾಲ ಕರಾವಳಿಯ ಮೀನುಗಾರಿಕಾ ದಕ್ಕೆಗಳಲ್ಲಿ ನಿಶ್ಚಲವಾಗಿ ನಿಂತಿದ್ದ ಯಾಂತ್ರೀಕೃತ ಬೋಟ್‌ಗಳು ಮತ್ತೆ ಸಮುದ್ರದತ್ತ ಮುಖ ಮಾಡುವ ಕ್ಷಣ ಬಂದಿದ್ದರೂ, ಹವಾಮಾನ ಇಲಾಖೆಯ ಎಚ್ಚರಿಕೆ ಮೀನುಗಾರರ ಉತ್ಸಾಹಕ್ಕೆ ತಣ್ಣೀರೆರಚಿದೆ. 61 ದಿನಗಳ ಟ್ರಾಲಿಂಗ್ ನಿಷೇಧ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆಗಸ್ಟ್‌ ನಿಂದ ಆಳ ಸಮುದ್ರ ಮೀನುಗಾರಿಕೆ ಪುನರಾರಂಭಗೊಳ್ಳಬೇಕಿದ್ದರೂ, ಪ್ರತಿಕೂಲ ಹವಾಮಾನದಿಂದಾಗಿ ಬೋಟ್‌ಗಳು ಸಮುದ್ರಕ್ಕಿಳಿಯದ ಸಾಧ್ಯತೆ ಎದುರಾಗಿದೆ. ಮಂಗಳೂರು ಬಂದರಿನಲ್ಲಿ ಕಳೆದ ನಾಲ್ಕು ದಿನಗಳಿಂದಲೇ ಬಿರುಸಿನ ಸಿದ್ಧತೆಗಳು ನಡೆದಿವೆ. ಎರಡು ತಿಂಗಳ ವಿರಾಮದ ಬಳಿಕ ಮೀನುಗಾರರು, […]

Continue Reading

ಮೂರು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ, ಡಾ. ಪಿ.ಸಿ. ಜಾಫರ್ ಮೆಟ್ರೋ ಎಂಡಿ

ಬೆಂಗಳೂರು: ರಾಜ್ಯ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಡಾ. ಪಿ.ಸಿ. ಜಾಫರ್ ಅವರನ್ನು ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ಡಾ. ಎಂ.ಟಿ. ರೇಜು ಅವರನ್ನು ಆರ್ಥಿಕ ಇಲಾಖೆಯ ಕಾರ್ಯದರ್ಶಿಯಾಗಿ ಹಾಗೂ ಟಿ.ಎಚ್.ಎಂ. ಕುಮಾರ್ ಅವರನ್ನು ವಸತಿ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

Continue Reading

ರಾಜ್ಯ ಸರಕಾರದ ಒಳಮೀಸಲಾತಿ, ಹೈಕೋರ್ಟ್ ನಿಂದ ನೋಟಿಸ್ ಜಾರಿ

ಬೆಂಗಳೂರು: ರಾಜ್ಯದ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ನ್ಯಾಯಮೂರ್ತಿ ಎಚ್. ನಾಗಮೋಹನ್ ದಾಸ್ ಆಯೋಗದ ವರದಿ ಆಧರಿಸಿ 2025ರ ಆಗಸ್ಟ್ 19ರಂದು ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿತ್ತು.

Continue Reading

ಶಾಲೆ–ಕಾಲೇಜುಗಳ ಬಳಿ ಜಂಕ್ ಫುಡ್‌ಗೆ ಬ್ರೇಕ್: ಇಲಾಖೆಯ ಅಧಿಕೃತ ಆದೇಶ

ಬೆಂಗಳೂರು: ವಿದ್ಯಾರ್ಥಿಗಳಿಗೆ ಸುರಕ್ಷಿತ, ಗುಣಮಟ್ಟಯುತ ಹಾಗೂ ಆರೋಗ್ಯಕರ ಆಹಾರ ಲಭ್ಯ ಆಗುವಂತೆ ಮಾಡಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯೂ ಶಾಲೆ–ಕಾಲೇಜುಗಳ ಆವರಣ ಹಾಗೂ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್‌ ಮತ್ತು ಅನಾರೋಗ್ಯಕರ ಆಹಾರ ಮಾರಾಟ ಮಾಡದಂತೆ ಅಧಿಕೃತ ಆದೇಶ ಹೊರಡಿಸಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾರ್ಗಸೂಚಿಯಂತೆ ಈ ಕ್ರಮ ಜುಲೈ 21 ರಿಂದ ಜಾರಿಗೆ ಬಂದಿದೆ ಎಂದು ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಜುಲೈ ತಿಂಗಳಲ್ಲಿ ರಾಜ್ಯದ […]

Continue Reading

ಭೂಕುಸಿತ ತೆರವು ಬಳಿಕ ಶಿರಾಡಿ ಘಾಟ್ ರೈಲು ಮಾರ್ಗ ಪುನರಾರಂಭ, ಪ್ರಯಾಣಿಕರಿಗೆ ನೆಮ್ಮದಿ

ಸುಬ್ರಮಣ್ಯ: ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ ಸ್ಥಗಿತಗೊಂಡಿದ್ದ ಮೈಸೂರು ವಿಭಾಗದ ಶಿರಿಬಾಗಿಲು–ಎಡಕುಮಾರಿ ನಡುವಿನ ಶಿರಾಡಿ ಘಾಟ್ ರೈಲು ಮಾರ್ಗದಲ್ಲಿ ರೈಲು ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಮರು ಆರಂಭಿಸಿದೆ. ಹಳಿ ಮೇಲಿನ ಮಣ್ಣು, ಕಲ್ಲು ಹಾಗೂ ಮರಗಳ ಅವಶೇಷಗಳನ್ನು ತೆರವುಗೊಳಿಸಿ ಸುರಕ್ಷತಾ ಪರಿಶೀಲನೆ ಪೂರ್ಣಗೊಳಿಸಿದ ಬಳಿಕ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರೈಲ್ವೆ ಇಲಾಖೆ ಪ್ರಕಟಣೆಯ ಪ್ರಕಾರ, ಆಗಸ್ಟ್ 3ರಂದು ಸಂಜೆ 7.25ಕ್ಕೆ ಹಳಿ ಸುರಕ್ಷತಾ ತಪಾಸಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ತಾಂತ್ರಿಕ ತಜ್ಞರು ಮಾರ್ಗವನ್ನು ಸುರಕ್ಷಿತ ಎಂದು ಪ್ರಮಾಣೀಕರಿಸಿದ […]

Continue Reading

ಬೀಳ್ಕೊಡುಗೆಯಲ್ಲಿ ಹಾರ-ತುರಾಯಿ ಬೇಡ, ಶಾಲೆಗೆ ಉಪಯುಕ್ತ ವಸ್ತು ನೀಡಿ: ಜಯಕರ ಶೆಟ್ಟಿ ಮನವಿ

ಕುಂದಾಪುರ: ಕಂಡ್ಲೂರಿನ ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಎ. ಜಯಕರ ಶೆಟ್ಟಿ ಅವರ ಬೀಳ್ಕೊಡುಗೆ ಸಮಾರಂಭವು ವಿಭಿನ್ನ ಸಂದೇಶದೊಂದಿಗೆ ನಡೆಯಿತು. ತಮ್ಮನ್ನು ಹಾರ-ತುರಾಯಿಗಳಿಂದ ಸನ್ಮಾನಿಸುವ ಬದಲು ಶಾಲೆಗೆ ಉಪಯುಕ್ತವಾಗುವ ವಸ್ತುಗಳನ್ನು ನೀಡುವಂತೆ ಅವರು ಮನವಿ ಮಾಡಿದ್ದು, ಅದಕ್ಕೆ ಸ್ಪಂದಿಸಿದ ಆಡಳಿತ ಮಂಡಳಿ, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳು ಶಾಲೆಗೆ ಅಗತ್ಯ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದರು. ಸುದೀರ್ಘ ಅವಧಿಯವರೆಗೆ ಕ್ರೀಡಾ ಶಿಕ್ಷಕರಾಗಿ ಹಾಗೂ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಜಯಕರ ಶೆಟ್ಟಿ ಅವರನ್ನು […]

Continue Reading

ತಲಪಾಡಿಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜು: ಗೆಲುವಿನ ಗುಟ್ಟು ಪ್ರೇರಣಾ ಉಪನ್ಯಾಸ ಕಾರ್ಯಕ್ರಮ

ತಲಪಾಡಿ: ಇಲ್ಲಿನ ದೇವಿನಗರದ ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಮತ್ತು ಯಶಸ್ಸಿನ ಮನೋಭಾವ ಬೆಳೆಸುವ ಉದ್ದೇಶದಿಂದ ಗೆಲುವಿನ ಗುಟ್ಟು ವಿಷಯದಡಿ ಪ್ರೇರಣಾ ಉಪನ್ಯಾಸ ಕಾರ್ಯಕ್ರಮ ನಡೆಯಿತು. ನಾಡಿನ ಖ್ಯಾತ ಉಪನ್ಯಾಸಕ, ಯಕ್ಷಗಾನದ ಮೇರು ಅರ್ಥದಾರಿ, ಕವಿ ಹಾಗೂ ಪ್ರಸಂಗಕರ್ತ ಪ್ರೊ. ಪವನ್ ಕಿರಣ ಕೆರೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಜೀವನದಲ್ಲಿ ಯಶಸ್ಸು ಸಾಧಿಸಲು ಗುರಿ, ಆತ್ಮವಿಶ್ವಾಸ, ನಿರಂತರ ಪರಿಶ್ರಮ ಮತ್ತು ಸಮಯದ ಸದ್ಬಳಕೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ತಿಳಿಸಿದರು. ಗೆಲುವಿನ […]

Continue Reading

ಎಕ್ಕೂರಿನ ಡ್ರೈನೇಜ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ನಗರದ ಎಕ್ಕೂರು ಅಯ್ಯಪ್ಪ ಭಜನಾ ಮಂದಿರದ ಹಿಂಭಾಗದ ಕೆಲವು ಮನೆಗಳಿಗೆ ಡ್ರೈನೇಜ್ ಸಮಸ್ಯೆಯಿಂದ ಉಂಟಾಗುತ್ತಿರುವ ತೊಂದರೆ ಕುರಿತು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳ ಸಭೆ ನಡೆಯಿತು. ಸಭೆಯಲ್ಲಿ ಸ್ಥಳೀಯರ ಪರವಾಗಿ ಮಾತನಾಡಿದ ಎಕ್ಕೂರು ನಿವಾಸಿ ತನುಜಾ, ಡ್ರೈನೇಜ್ ಸಮಸ್ಯೆಯಿಂದ ಹತ್ತಾರು ಮನೆಗಳ ನಿವಾಸಿಗಳು ಎದುರಿಸುತ್ತಿರುವ ಸಂಕಷ್ಟವನ್ನು ವಿವರಿಸಿದರು. ಮಳೆಗಾಲದಲ್ಲಿ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು. ಸ್ಥಳೀಯರ ಅಹವಾಲು ಆಲಿಸಿದ ಶಾಸಕ ವೇದವ್ಯಾಸ ಕಾಮತ್, ಸಂಬಂಧಪಟ್ಟ […]

Continue Reading

ಕಲಿಕಾ ತೊಂದರೆ ಇರುವ ಮಕ್ಕಳಿಗೆ ಒಂದೇಸೂರಿನಡಿ ವ್ಯವಸ್ಥೆ, ಅ. 8ಕ್ಕೆ ಉದ್ಘಾಟನೆ: ಅರ್ಜುನ್ ಶೆಟ್ಟಿ ಪ್ರತಿಷ್ಠಾನದ ಸ್ಥಾಪಕ ಸುಧೀರ್ ಶೆಟ್ಟಿ

ಮಂಗಳೂರು: ಸ್ವಲೀನತೆ ಹಾಗೂ ನಿರ್ದಿಷ್ಟ ಕಲಿಕಾ ತೊಂದರೆ ಹೊಂದಿರುವ ಮಕ್ಕಳಿಗೆ ಶಿಕ್ಷಣ, ಚಿಕಿತ್ಸೆ ಮತ್ತು ಕೌಶಲಾಭಿವೃದ್ಧಿಯನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಮಂಗಳೂರಿನ ಶಕ್ತಿನಗರದ ಸಾನಿಧ್ಯ ಸಂಸ್ಥೆಯಲ್ಲಿ ಅರ್ಜುನ್ ಶೆಟ್ಟಿ ಸ್ಮರಣಾರ್ಥ ವಿಶೇಷ ಶಾಲೆ ಆರಂಭಿಸಲಾಗುತ್ತಿದ್ದು, ಶಾಲೆಯ ಉದ್ಘಾಟನಾ ಸಮಾರಂಭ ಇದೇ 8 ರಂದು ನಡೆಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅರ್ಜುನ್ ಶೆಟ್ಟಿ ಪ್ರತಿಷ್ಠಾನದ ಸ್ಥಾಪಕ ಸುಧೀರ್ ಶೆಟ್ಟಿ ಅವರು ತಿಳಿಸಿದರು. ತಮ್ಮ ಪುತ್ರ ಅರ್ಜುನ್ ಶೆಟ್ಟಿ ಅವರ ಸ್ಮರಣಾರ್ಥ ಈ ಶಾಲೆ ಆರಂಭಿಸಲಾಗುತ್ತಿದೆ. ಸ್ವಲೀನತೆ ಹಾಗೂ […]

Continue Reading

ಮಂಗಳೂರಿನಲ್ಲಿ ಇದೇ 7 ರಿಂದ ಯುರಾಲಜಿ ಸಮ್ಮೇಳನ, ಎಜೆ, ಯುರಾಲಜಿ ಫೋರಂ ಸಾರಥ್ಯ: ಡಾ. ಪ್ರಶಾಂತ್ ಮಾರ್ಲ

ಮಂಗಳೂರು: ಮೂತ್ರಶಾಸ್ತ್ರ ಕ್ಷೇತ್ರದ ಇತ್ತೀಚಿನ ಸಂಶೋಧನೆ, ಹೊಸ ತಂತ್ರಜ್ಞಾನ ಹಾಗೂ ವೈದ್ಯಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದಕ್ಷಿಣ ಭಾರತದ ಪ್ರತಿಷ್ಠಿತ ‘ಅಸೋಸಿಯೇಷನ್ ಆಫ್ ಸದರ್ನ್ ಯುರಾಲಜಿಸ್ಟ್ಸ್ 37ನೇ ವಾರ್ಷಿಕ ಸಮ್ಮೇಳನ ಇದೇ ಅ. 7 ರಿಂದ 9 ರವರೆಗೆ ಮಂಗಳೂರಿನ ಮೇರಿ ಹಿಲ್‌ನಲ್ಲಿ ಇರುವ ಪಾಲೇಮಾರ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಸಮ್ಮೇಳನಾ ಸಂಘಟನಾ ಸಮಿತಿ ಅಧ್ಯಕ್ಷ ಡಾ. ಪ್ರಶಾಂತ್ ಮಾರ್ಲ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯಿನ್ಸ್ ಹಾಗೂ […]

Continue Reading