Sample Page

ವೆನ್ಲಾಕ್ ಆಸ್ಪತ್ರೆಗೆ ಆರೋಗ್ಯ ಇಲಾಖೆ ಕಾರ್ಯದರ್ಶಿ ರಿತ್ವಿಕ್ ರಂಜನಮ್ ಪಾಂಡೆ ಭೇಟಿ

ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಇಲಾಖೆ ಕಾರ್ಯದರ್ಶಿ ರಿತ್ವಿಕ್ ರಂಜನಮ್ ಪಾಂಡೆ ಶುಕ್ರವಾರ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಮುಂದಿನ ದಿನಗಳಲ್ಲಿ ನಿರ್ಮಾಣಗೊಳ್ಳಲಿರುವ ಹೊರರೋಗಿ ವಿಭಾಗದ ಕಟ್ಟಡದ ಸ್ಥಳವನ್ನು ವೀಕ್ಷಿಸಿದ ಅವರು, ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಬಳಿಕ ಸಿಸಿಬಿ ಕಟ್ಟಡದ ಕಾಮಗಾರಿಯನ್ನೂ ಪರಿಶೀಲಿಸಿದರು. ನಡೆಯುತ್ತಿರುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದರ ಜತೆಗೆ, ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಶೀಘ್ರ ಪೂರ್ಣಗೊಳಿಸಲು […]

Continue Reading

ರಾಜ್ಯದಾದ್ಯಂತ ಟಾಸ್ ಸಿನಿಮಾ ಉತ್ತಮ ಪ್ರದರ್ಶನ ಕಾಣಲಿ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಬಹುನಿರೀಕ್ಷಿತ ತುಳು ಸಿನಿಮಾ ‘ಟಾಸ್’ ರಾಜ್ಯಾದ್ಯಂತ ತೆರೆಕಂಡಿದ್ದು, ಮಂಗಳೂರಿನ ಬಿಗ್ ಸಿನೆಮಾಸ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸುವ ಮೂಲಕ ಚಿತ್ರ ಬಿಡುಗಡೆಗೆ ಚಾಲನೆ ನೀಡಿದರು. ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್‌ಬಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಚಿತ್ರಕ್ಕೆ ಅರ್ಜುನ್ ದೇವ್ ನಿರ್ದೇಶನದ ಜತೆಗೆ ನಾಯಕನಾಗಿ ಅಭಿನಯಿಸಿದ್ದಾರೆ. ಚಿತ್ರ ಬಿಡುಗಡೆಗೊಳಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್,“ಇಂದು ಎರಡು ವಿಶೇಷ ದಿನ. ಒಂದೆಡೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೆ, […]

Continue Reading

ಕಸ್ತೂರಿರಂಗನ್ ವರದಿ: ಹೆಬ್ರಿಯಲ್ಲಿ ಸಿಎಂ ಸಭೆ; ಪೂರ್ವಸಿದ್ಧತೆ ಪರಿಶೀಲಿಸಿದ ಸಚಿವ ರಿಝ್ವಾನ್ ಅರ್ಷದ್

ಹೆಬ್ರಿ: ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಜನರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಹೆಬ್ರಿಯಲ್ಲಿ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಸಭೆಯ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಹೆಬ್ರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ಅಪರಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ಕಸ್ತೂರಿರಂಗನ್ ವರದಿಯ ಸಾಧಕ–ಬಾಧಕಗಳ ಕುರಿತು ವರದಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಜನರೊಂದಿಗೆ ಮುಖ್ಯಮಂತ್ರಿ ಚರ್ಚಿಸಿ ಅವರ ಅಭಿಪ್ರಾಯಗಳನ್ನು ಆಲಿಸಲಿದ್ದಾರೆ. ಕುಂದಾಪುರ, ಕಾರ್ಕಳ, ಹೆಬ್ರಿ […]

Continue Reading

ಹೋಬಳಿ ಮಟ್ಟದಲ್ಲೇ ಜನರ ಅಹವಾಲು ಆಲಿಕೆ, ಉತ್ತರ ಕನ್ನಡದಲ್ಲಿ ಪ್ರಜಾಸೇವೆ ಆಂದೋಲನ: ಡಿಸಿ ಲಕ್ಷ್ಮಿಪ್ರೀಯಾ

ಕಾರವಾರ: ಜನರ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಸ್ಪಂದಿಸಿ, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಹೋಬಳಿ ಮಟ್ಟದಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಗಳಲ್ಲಿ ತಾಲೂಕು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ಅಧಿಕಾರಿಗಳ ಮುಂದೆ ನೇರವಾಗಿ ಸಲ್ಲಿಸಬಹುದಾಗಿದೆ. ಅಲ್ಲದೆ, ಸರ್ಕಾರದ ವಿವಿಧ […]

Continue Reading

ಬಡ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ಸೂರು ಕಲ್ಪಿಸುವ ಉದ್ದೇಶ: ಸಚಿವ ಮುನಿಯಪ್ಪ

ಮಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಬಡ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ಸೂರು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆ ಮಾಡುವ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಿವೇಶನದ ಜತೆಗೆ ಬಡವರ ಬದುಕಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದಕ್ಕೂ ಸರ್ಕಾರ ಆದ್ಯತೆ ನೀಡಿದೆ. ಭೂ ಒಡೆತನ ಯೋಜನೆಯಡಿ ಭೂಮಿಯಿಲ್ಲದ ಪರಿಶಿಷ್ಟರಿಗೆ ಭೂಮಿ ಒದಗಿಸುವ ಪ್ರಕ್ರಿಯೆ ಮುಂದುವರೆದಿದ್ದು, ನಿರಾಶ್ರಿತರಿಗೆ […]

Continue Reading

ಜಲಸಿರಿ ವಿಳಂಬಕ್ಕೆ ಅಧಿಕಾರಿಗಳಿಗೆ ತರಾಟೆ: ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ಧರಾಮಯ್ಯ

ಮಂಗಳೂರು: ವರ್ಷಗಳಿಂದ ನಗರದ ಅಭಿವೃದ್ಧಿಗೆ ಸವಾಲಾಗಿರುವ ಒಳಚರಂಡಿ ವ್ಯವಸ್ಥೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ₹1,250 ಕೋಟಿ ಮೊತ್ತದ ಪ್ರಸ್ತಾವನೆ ಸಿದ್ಧವಾಗಿದ್ದು, ಮೊದಲ ಹಂತದ ₹350 ಕೋಟಿ ಕಾಮಗಾರಿಗೆ ಇಲಾಖಾ ಮಟ್ಟದಲ್ಲಿ ಅನುಮೋದನೆ ದೊರೆತಿದೆ. ಸೆ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುದಾನ ಬಿಡುಗಡೆಗೆ ಅಂತಿಮ ಮಂಜೂರಾತಿ ದೊರೆಯುವ ನಿರೀಕ್ಷೆ ಇದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ಧರಾಮಯ್ಯ ತಿಳಿಸಿದರು. ಮಂಗಳಾ ಸಭಾಂಗಣದಲ್ಲಿ ಗುರುವಾರ ನಡೆದ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ […]

Continue Reading

ಪ್ರವಾಸೋದ್ಯಮಕ್ಕೆ ಹೊಸ ವೇಗ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ಸಚಿವ ಸಂಪುಟ: ಡಾ. ಮಂಜುನಾಥ ಭಂಡಾರಿ

ಮಂಗಳೂರು: ಕರಾವಳಿ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಹೊಸ ವೇಗ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ನಡೆವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಹಲವು ಪ್ರಮುಖ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕರಾವಳಿ ಅಭಿವೃದ್ಧಿಯ ದೃಷ್ಟಿಕೋನದಿಂದ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕು ಎಂಬುದು ಬಹುದಿನಗಳ ಕನಸಾಗಿತ್ತು. ಇದೀಗ ಅದು ಸಾಕಾರಗೊಳ್ಳುತ್ತಿದೆ.ಕಡಲ ತಡಿಯಲ್ಲಿ ಸಂಪುಟ ಸಭೆ ನಡೆಯುತ್ತಿರುವುದರಿಂದ ಕರಾವಳಿಯ ಹಲವು […]

Continue Reading

ಕರಾವಳಿಯ ಬಹುದಿನಗಳ ಬೇಡಿಕೆಗಳಿಗೆ ಸಂಪುಟ ಸಭೆ ಮೂಲಕ ವೇಗ:ಸಚಿವ ಖಾದರ್

ಮಂಗಳೂರು: ಕರಾವಳಿಯ ಬಹುದಿನಗಳ ಬೇಡಿಕೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡುವ ನಿರೀಕ್ಷೆಯೊಂದಿಗೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದ್ದು, ಆರೋಗ್ಯ, ಶಿಕ್ಷಣ, ಪ್ರವಾಸೋದ್ಯಮ ಸೇರಿದಂತೆ ಕರಾವಳಿ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಸಭೆಯಲ್ಲಿ ಗಮನ ಹರಿಸಲಾಗುವುದು ಎಂದು ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಪ್ರಜಾಸೌಧದಲ್ಲಿ ಸೆ.18ರಂದು ನಡೆವ ಸಚಿವ […]

Continue Reading

ಉಮರ್ ಖಾಲಿದ್ ‘ದೇಶಭಕ್ತ’ ಎಂಬ ಕಾಂಗ್ರೆಸ್ ಹೇಳಿಕೆ ವಿರುದ್ಧ ಶಾಸಕ ಭರತ್ ಶೆಟ್ಟಿ ಆಕ್ರೋಶ

ಮಂಗಳೂರು: ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಉಮರ್ ಖಾಲಿದ್ ಅವರನ್ನು ‘ದೇಶಭಕ್ತ’ ಎಂದು ಬಣ್ಣಿಸಿರುವುದು ಖಂಡನೀಯ ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬದ್ಧ ಆರೋಪಗಳನ್ನು ಎದುರಿಸುತ್ತಿರುವ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧನದಲ್ಲಿರುವ ವ್ಯಕ್ತಿಯನ್ನು ‘ದೇಶಭಕ್ತ’ ಎಂದು ಕರೆಯುವುದು ಕಾಂಗ್ರೆಸ್‌ನ ತುಷ್ಟೀಕರಣ […]

Continue Reading

ಸಂಪುಟ ಸಭೆಗೆ ಮಂಗಳೂರು ಸಿಂಗಾರ: ನಗರದೆಲ್ಲೆಡೆ ಸ್ವಾಗತದ ಕಳೆ, ಬ್ಯಾನರ್ ಗಳ ಅಬ್ಬರ

ಮಂಗಳೂರು: ಕರಾವಳಿಯ ಬಹುದಿನಗಳ ಬೇಡಿಕೆಗಳು, ಅಭಿವೃದ್ಧಿಯ ಪ್ರಸ್ತಾವಗಳು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜಾಗಿದೆ. ಸೆ.18ರಂದು ಪಡೀಲ್‌ನ ಜಿಲ್ಲಾ ಕಚೇರಿಗಳ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆಯಲಿರುವ ಸಭೆಯತ್ತ ಕರಾವಳಿಯ ಮೂರು ಜಿಲ್ಲೆಗಳ ಜನರ ಗಮನ ನೆಟ್ಟಿದೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ, ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿ, ಮೀನುಗಾರರ ಸಮಸ್ಯೆಗಳು, ಕೈಗಾರಿಕಾ ವಿಸ್ತರಣೆ ಸೇರಿದಂತೆ ಹಲವು […]

Continue Reading