Sample Page

ಬೀಳಗಿ: ಪತ್ನಿ ನೇಣಿಗೆ ಶರಣಾಗುತ್ತಿದ್ದರೂ ವಿಡಿಯೊ ಮಾಡಿದ ಪತಿ: ಕೊಲೆ ಶಂಕೆ, ಆರೋಪಿ ವಶಕ್ಕೆ

ಬೀಳಗಿ: ಪತ್ನಿ ನೇಣಿಗೆ ಶರಣಾಗಿ ಉಸಿರುಗಟ್ಟಿ ಸಾವನ್ನಪ್ಪುತ್ತಿದ್ದ ವೇಳೆ ರಕ್ಷಿಸುವ ಬದಲು ವಿಡಿಯೋ ಚಿತ್ರೀಕರಿಸಿದ ಆರೋಪ ಪತಿಯ ವಿರುದ್ಧ ಕೇಳಿಬಂದಿದ್ದು, ಈ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ಭಾಗ್ಯಶ್ರೀ (23) ಎಂದು ಗುರುತಿಸಲಾಗಿದೆ. 6 ವರ್ಷಗಳ ಹಿಂದೆ ಭಾಗ್ಯಶ್ರೀ ಮತ್ತು ಪ್ರವೀಣ್ ಮದುವೆ ಆಗಿದ್ದರು. ದಂಪತಿಗೆ ಮಗು ಇತ್ತು. ಪತ್ನಿ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಾಗಿ ದಂಪತಿ ನಡುವೆ ಆಗಾಗ್ಗೆ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಘಟನೆ ನಡೆದ […]

Continue Reading

ಅಕ್ರಮ ಪಡಿತರ ಅಕ್ಕಿ ಸಾಗಣೆ ಪತ್ತೆ, 17 ಕ್ವಿಂಟಲ್ ಅಕ್ಕಿ, ವಾಹನ ಜಪ್ತಿ: ಬನವಾಸಿ ಪೊಲೀಸರ ಕಾರ್ಯಾಚರಣೆ

ಸಿರಸಿ: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಜಾಲವನ್ನು ಬನವಾಸಿ ಪೊಲೀಸರು ಭೇದಿಸಿದ್ದು, ವಾಹನ ಸಮೇತ 17 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಬನವಾಸಿ ದಾಸನಕೊಪ್ಪ ಕ್ರಾಸ್ ಬಳಿ ಬನವಾಸಿ ಪೊಲೀಸ್ ಠಾಣೆ ಪಿಎಸ್ಐ ಮಹಾಂತಪ್ಪ ಕುಂಬಾರ್ ಅವರ ನೇತೃತ್ವದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ತಪಾಸಣೆ ವೇಳೆ ವಾಹನದಲ್ಲಿ ಯಾವುದೇ ಪರವಾನಗಿ ಅಥವಾ ದಾಖಲೆಗಳಿಲ್ಲದೆ ಪಡಿತರ ಅಕ್ಕಿ ಸಾಗಿಸಲಾಗುತ್ತಿತ್ತು ಎಂಬುದು ಪತ್ತೆ […]

Continue Reading

ಉ. ಕದಲ್ಲಿ 11.05 ಲಕ್ಷ ಎನ್ಯುಮರೇಷನ್ ಫಾರ್ಮ್‌ಗಳ ಗಣಕೀಕರಣ ಪೂರ್ಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೆ 11,05,024 ಎನ್ಯುಮರೇಷನ್ ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರು ಇದ್ದು, ಪ್ರತಿಯೊಬ್ಬ ಮತದಾರರಿಗೂ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಫಾರ್ಮ್‌ಗಳ ಡಿಜಿಟಲ್ ದಾಖಲಾತಿ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಮನೆ ಮನೆ ಭೇಟಿಯ ವೇಳೆ ಸ್ಥಳಾಂತರ, ಮರಣ ಹಾಗೂ […]

Continue Reading

ಕದ್ರಿ ಮಂಜುನಾಥ ದೇವಸ್ಥಾನ: 29 ರಂದು ಗುರುಪೂರ್ಣಿಮೆ

ಮಂಗಳೂರು: ಐತಿಹಾಸಿಕ ಪ್ರಸಿದ್ದಿಯ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಇದೇ 29 ರಂದು ಗುರುಪೂರ್ಣಿಮೆ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿದೆ. ಗುರುಪೂರ್ಣಿಮೆಯ ಪವಿತ್ರ ದಿನದ ಅಂಗವಾಗಿ ಬೆಳಗ್ಗಿನಿಂದಲೇ ವಿಶೇಷ ಪೂಜಾ ಕೈಂಕರ್ಯಗಳು, ರುದ್ರಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಮಧ್ಯಾಹ್ನ 11.30ಕ್ಕೆ ಶ್ರೀ ಮತ್ಸೇಂದ್ರನಾಥ, ಶ್ರೀ ಗೋರಕ್ಷನಾಥ ಹಾಗೂ ಶ್ರೀ ಚೌರಂಗಿನಾಥ ಗುರುಗಳಿಗೆ ವಿಶೇಷ ಗುರುಪೂಜೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಶ್ರೀ ಮಂಜುನಾಥ […]

Continue Reading

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ, ಎರಡು ಪ್ರಕರಣಗಳ ತನಿಖೆ ಸಿಐಡಿಗೆ ವರ್ಗಾವಣೆ: ಸಚಿವ ಖರ್ಗೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ ಸಾರ್ವಜನಿಕ ಪರೀಕ್ಷೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಆರೋಪಗಳ ಹಿನ್ನೆಲೆಯಲ್ಲಿ ದಾಖಲಾಗಿರುವ ಎರಡು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ಭ್ರಷ್ಟಾಚಾರ ಮತ್ತು ನೇಮಕಾತಿಯಲ್ಲಿನ ಅನ್ಯಾಯದ ವಿಧಾನಗಳ ತಡೆ) ಅಧಿನಿಯಮ, 2023ರ ಕಲಂ 10ರಡಿ ದಾಖಲಾಗಿರುವ ಎರಡು ಪ್ರಕರಣಗಳ ಕುರಿತು […]

Continue Reading

500 ಕ್ಕೂ ಅಧಿಕ ಅಂಕ ಪಡೆದ ನೀಟ್ ಸಾಧಕರಿಗೆ ಎಕ್ಸಲೆಂಟ್ ಕಾಲೇಜಿನಲ್ಲಿ ಸನ್ಮಾನ

ಮೂಡುಬಿದಿರೆ: ನೀಟ್ ಪರೀಕ್ಷೆಯಲ್ಲಿ 500 ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ರಾಜ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರು ಮಾತನಾಡಿ, ವಿದ್ಯಾರ್ಥಿಯ ಸಾಮರ್ಥ್ಯವನ್ನು ಕೇವಲ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ ನಿರ್ಧರಿಸಲು ಸಾಧ್ಯವಿಲ್ಲ. ಸೂಕ್ತ ಮಾರ್ಗದರ್ಶನ, ಶಿಸ್ತುಬದ್ಧ ಶಿಕ್ಷಣ ವ್ಯವಸ್ಥೆ ಹಾಗೂ ನಿರಂತರ ಪ್ರೋತ್ಸಾಹ ದೊರೆತರೆ ಸಾಮಾನ್ಯ ವಿದ್ಯಾರ್ಥಿಯೂ ರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಬಹುದು ಎಂದರು. ಸಂಸ್ಥೆಯ […]

Continue Reading

ಬ್ಯಾಂಕ್ ಆಫ್ ಬರೋಡಾ ಹಣಕಾಸು ಸಾಧನೆ: ಜಾಗತಿಕ ವ್ಯವಹಾರ 30.50 ಲಕ್ಷ ಕೋಟಿಗೆ ಏರಿಕೆ

ಮುಂಬೈ: ಬ್ಯಾಂಕ್ ಆಫ್ ಬರೋಡಾ 2026ರ ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕದ ಹಣಕಾಸು ಫಲಿತಾಂಶ ಪ್ರಕಟಿಸಿದ್ದು, ಬ್ಯಾಂಕ್‌ನ ಜಾಗತಿಕ ವ್ಯವಹಾರವು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ15.4ರಷ್ಟು ಏರಿಕೆಯಾಗಿ 30,50,457 ಕೋಟಿಗೆ ತಲುಪಿದೆ. ಬ್ಯಾಂಕ್‌ನ ಜಾಗತಿಕ ಸಾಲ ವಿತರಣೆ ಶೇ17.4 ಹಾಗೂ ದೇಶೀಯ ಸಾಲ ವಿತರಣೆ ಶೇ16.1ರಷ್ಟು ಹೆಚ್ಚಳ ಕಂಡಿದೆ. ವಾಹನ ಸಾಲ ಶೇ 25.3, ಅಡಮಾನ ಸಾಲ ಶೇ 27.4, ಗೃಹ ಸಾಲ ಶೇ14.7 ಮತ್ತು ಶಿಕ್ಷಣ ಸಾಲ ಶೇ10.8ರಷ್ಟು ಬೆಳವಣಿಗೆ ದಾಖಲಿಸಿದೆ. ಚಿಲ್ಲರೆ, […]

Continue Reading

ಕಳಪೆ ಕಾಮಗಾರಿ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಇಒ ಡಾ. ದಿಲೀಷ್ ಶಶಿ ಎಚ್ಚರಿಕೆ

ಕಾರವಾರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಕಾರ್ಯ ಪಡೆ ಸೇರಿದಂತೆ ಎಲ್ಲ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ಲೋಪ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಪಂ ಸಿಇಒ ಡಾ. ದಿಲೀಷ್ ಶಶಿ ಅವರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಗುಣಮಟ್ಟದ ಮೂಲಸೌಕರ್ಯ ಒದಗಿಸುವುದು ಇಲಾಖೆಯ […]

Continue Reading

ಕ್ರಿಮ್ಸ್‌ಗೆ 200 ಎಂಬಿಬಿಎಸ್ ಸೀಟುಗಳ ಅನುಮೋದನೆ: 2026-27 ರಿಂದ ಹೆಚ್ಚುವರಿ ಪ್ರವೇಶ, ಹೊಸ ಆರೋಗ್ಯ ವಿಜ್ಞಾನ ಕೋರ್ಸ್‌

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್)ಗೆ ಮಹತ್ವದ ಉತ್ತೇಜನ ದೊರೆತಿದ್ದು, 2026-27ನೇ ಶೈಕ್ಷಣಿಕ ವರ್ಷದಿಂದ ಒಟ್ಟು 200 ಎಂಬಿಬಿಎಸ್ ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ), ನವದೆಹಲಿಯಿಂದ ಅನುಮೋದನೆ ಲಭಿಸಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕಿ ಡಾ. ಪೂರ್ಣಿಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗೆ ಕ್ರಿಮ್ಸ್‌ಗೆ 150 ಎಂಬಿಬಿಎಸ್ ಸೀಟುಗಳಿಗೆ ಮಾತ್ರ ಅನುಮತಿ ಇದ್ದು, ಇದೀಗ ಹೆಚ್ಚುವರಿ 50 ಸೀಟುಗಳನ್ನು ಮಂಜೂರು ಮಾಡಲಾಗಿದೆ. ಇದರಿಂದ ಮುಂದಿನ […]

Continue Reading

ರೋಹನ್ ಕಾರ್ಪೊರೇಷನ್‌ನಿಂದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ

ಮಂಗಳೂರು: ರೋಹನ್ ಕಾರ್ಪೊರೇಷನ್ ವತಿಯಿಂದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ನಗರದ ಬಿಜೈಯಲ್ಲಿರುವ ರೋಹನ್ ಸಿಟಿಯಲ್ಲಿ ವಿಶೇಷ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರು ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು. ರೋಹನ್ ಕಾರ್ಪೊರೇಷನ್‌ನ ನಿರ್ದೇಶಕ ಡಿಯೋನ್ ಮೊಂಟೇರೊ ಹಾಗೂ ಮಹಾಪ್ರಬಂಧಕಿ ಸುಮನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ, ಕರಾವಳಿ ಭಾಗಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ತಂದ ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ‘ಮಿಥ್ಯ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದ ರೂಪಶ್ರೀ […]

Continue Reading