Sample Page

ಕಳಪೆ ಕಾಮಗಾರಿ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಇಒ ಡಾ. ದಿಲೀಷ್ ಶಶಿ ಎಚ್ಚರಿಕೆ

ಕಾರವಾರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಕಾರ್ಯ ಪಡೆ ಸೇರಿದಂತೆ ಎಲ್ಲ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ಲೋಪ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಪಂ ಸಿಇಒ ಡಾ. ದಿಲೀಷ್ ಶಶಿ ಅವರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಗುಣಮಟ್ಟದ ಮೂಲಸೌಕರ್ಯ ಒದಗಿಸುವುದು ಇಲಾಖೆಯ […]

Continue Reading

ಕ್ರಿಮ್ಸ್‌ಗೆ 200 ಎಂಬಿಬಿಎಸ್ ಸೀಟುಗಳ ಅನುಮೋದನೆ: 2026-27 ರಿಂದ ಹೆಚ್ಚುವರಿ ಪ್ರವೇಶ, ಹೊಸ ಆರೋಗ್ಯ ವಿಜ್ಞಾನ ಕೋರ್ಸ್‌

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್)ಗೆ ಮಹತ್ವದ ಉತ್ತೇಜನ ದೊರೆತಿದ್ದು, 2026-27ನೇ ಶೈಕ್ಷಣಿಕ ವರ್ಷದಿಂದ ಒಟ್ಟು 200 ಎಂಬಿಬಿಎಸ್ ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ), ನವದೆಹಲಿಯಿಂದ ಅನುಮೋದನೆ ಲಭಿಸಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕಿ ಡಾ. ಪೂರ್ಣಿಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗೆ ಕ್ರಿಮ್ಸ್‌ಗೆ 150 ಎಂಬಿಬಿಎಸ್ ಸೀಟುಗಳಿಗೆ ಮಾತ್ರ ಅನುಮತಿ ಇದ್ದು, ಇದೀಗ ಹೆಚ್ಚುವರಿ 50 ಸೀಟುಗಳನ್ನು ಮಂಜೂರು ಮಾಡಲಾಗಿದೆ. ಇದರಿಂದ ಮುಂದಿನ […]

Continue Reading

ರೋಹನ್ ಕಾರ್ಪೊರೇಷನ್‌ನಿಂದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ

ಮಂಗಳೂರು: ರೋಹನ್ ಕಾರ್ಪೊರೇಷನ್ ವತಿಯಿಂದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ನಗರದ ಬಿಜೈಯಲ್ಲಿರುವ ರೋಹನ್ ಸಿಟಿಯಲ್ಲಿ ವಿಶೇಷ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರು ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು. ರೋಹನ್ ಕಾರ್ಪೊರೇಷನ್‌ನ ನಿರ್ದೇಶಕ ಡಿಯೋನ್ ಮೊಂಟೇರೊ ಹಾಗೂ ಮಹಾಪ್ರಬಂಧಕಿ ಸುಮನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ, ಕರಾವಳಿ ಭಾಗಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ತಂದ ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ‘ಮಿಥ್ಯ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದ ರೂಪಶ್ರೀ […]

Continue Reading

ಹಿಪ್ಪರಗಿಯಲ್ಲಿ ಕಾರು ಸ್ಫೋಟ: ಬಿಡಿಭಾಗಗಳು ಚದುರಿ ಆತಂಕ, ತನಿಖಾ ತಂಡಗಳ ಪರಿಶೀಲನೆ, ಎಸ್ಪಿ ಸಿದ್ದಾರ್ಥ ಗೋಯಲ್ ಭೇಟಿ

ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಶನಿವಾರ ರಾತ್ರಿ ನಿಲ್ಲಿಸಿದ್ದ ಎಕ್ಸ್‌ಯು–300 ಕಾರೊಂದು ಏಕಾಏಕಿ ಸ್ಫೋಟಗೊಂಡು ಭಾರಿ ಆತಂಕ ಸೃಷ್ಟಿಸಿದೆ. ಸ್ಫೋಟದ ತೀವ್ರತೆಗೆ ಕಾರಿನ ಬಿಡಿಭಾಗಗಳು ಹಲವು ದಿಕ್ಕುಗಳಿಗೆ ಚದುರಿದ್ದು, ಸುತ್ತಲಿನ ಮನೆಗಳಲ್ಲಿ ಕಂಪನ ಉಂಟಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಿಪ್ಪರಗಿ ವೈನ್ ಶಾಪ್ ಎದುರು ನಿಲ್ಲಿಸಿದ್ದ ಈ ಕಾರು, ಅಲ್ಲಿನ ಉದ್ಯಮಿ ಹಣಮಂತ ಅಥಣಿ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ. ಸ್ಫೋಟದ ತೀವ್ರತೆಗೆ ಕಾರು ಸುಮಾರು 10 ಅಡಿಗೂ ಹೆಚ್ಚು […]

Continue Reading

ಅಮೆರಿಕದಲ್ಲಿ ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಆರೋಗ್ಯ ಸಚಿವ ಖಾದರ್

ಮಂಗಳೂರು: ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಇಲಿನಾಯ್ಸ್ ರಾಜ್ಯದ ನೇಪರ್ವಿಲ್ಲೆಯ ಯೆಲ್ಲೋ ಬಾಕ್ಸ್ ಸಭಾಂಗಣದಲ್ಲಿ ನಡೆದ ಅಮೆರಿಕನ್ ಬಹುಜನಾಂಗೀಯ ಆಯೋಗದ 15ನೇ ವಾರ್ಷಿಕ ಜಾಗತಿಕ ಸಾಧಕರ ಸನ್ಮಾನ ಸಮಾರಂಭದಲ್ಲಿ ಪ್ರತಿಷ್ಠಿತ ಜಾಗತಿಕ ನಾಗರಿಕ ನಾಯಕತ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿ, ಈ ಗೌರವ ತಮ್ಮ ಸಾರ್ವಜನಿಕ ಸೇವೆಗೆ ದೊರೆತ ಮಹತ್ವದ ಮಾನ್ಯತೆ ಆಗಿದ್ದು, ಜನಸೇವೆಯ ಹಾದಿಯಲ್ಲಿ ಇನ್ನಷ್ಟು ಜವಾಬ್ದಾರಿಯಿಂದ ಕೆಲಸ ಮಾಡಲು ಇದು ಪ್ರೇರಣೆ ನೀಡುತ್ತದೆ. ಈ ಪ್ರಶಸ್ತಿಯನ್ನು ಕರ್ನಾಟಕದ […]

Continue Reading

ಜನವರಿಯಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ರಾಷ್ಟ್ರಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಆಳ್ವಾಸ್ ನುಡಿಸಿರಿ–ವಿರಾಸತ್ ಅನ್ನು ಮುಂಬರುವ ವರ್ಷದ ಜನವರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಬಾರಿ ನುಡಿಸಿರಿ ಮತ್ತು ವಿರಾಸತ್ ಉತ್ಸವಗಳನ್ನು ಒಂದೇ ವೇದಿಕೆಯಲ್ಲಿ ನಡೆಸುವ ಮೂಲಕ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟ ಸಂಗಮಕ್ಕೆ ವೇದಿಕೆ ಕಲ್ಪಿಸಲಾಗುತ್ತಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ಸ್ವಗೃಹದಲ್ಲಿ ನಡೆದ ಪ್ರಾಥಮಿಕ ಸಮಾಲೋಚನಾ ಸಭೆಯಲ್ಲಿ ಉತ್ಸವದ ರೂಪುರೇಷೆಗಳ ಕುರಿತು ಸುದೀರ್ಘ […]

Continue Reading

ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ, ಯೋಧರ ತ್ಯಾಗದ ಸ್ಮರಣೆ

ಮಂಗಳೂರು: ಶಕ್ತಿನಗರದಲ್ಲಿ ಇರುವ ಶಕ್ತಿ ವಿದ್ಯಾ ಸಂಸ್ಥೆಯ ರೆಸಿಡೆನ್ಶಿಯಲ್ ಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್‌ವನ್ನು ದೇಶಭಕ್ತಿ ಮತ್ತು ಸೈನಿಕರ ತ್ಯಾಗದ ಸ್ಮರಣೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ದೀಪ ಬೆಳಗಿಸಿ, ಕಾರ್ಗಿಲ್ ವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಅವರು ಮಾತನಾಡಿ, ದೇಶದ […]

Continue Reading

ಉ.ಕ ಜಿಲ್ಲೆಯಲ್ಲಿ 10,88,604 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಅರ್ಜಿಗಳನ್ನು ತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 10,88,604 ಅರ್ಜಿಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 70052 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 24043 ಶಾಶ್ವತ ವಲಸೆ ಹಾಗೂ […]

Continue Reading

ರಾಜ್ಯದ ಸುದೀರ್ಘ ಸಿಎಂ ಆಗಿದ್ದ ಸಿದ್ದರಾಮಯ್ಯ ಮಹತ್ವದ ಘೋಷಣೆ, ಚುನಾವಣಾ ರಾಜಕೀಯಕ್ಕೆ ಗುಡ್ ಬೈ

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಘೋಷಣೆ ಮಾಡಿದ್ದು, ಚುನಾವಣಾ ರಾಜಕೀಯದಿಂದ ಹಿಂದೆ ಸರಿದರೂ ಸಾರ್ವಜನಿಕ ಬದುಕಿನಲ್ಲಿ ಸಕ್ರಿಯ ಆಗಿಯೇ ಉಳಿದು ಜನರ ಪರವಾಗಿ ಧ್ವನಿ ಆಗುವುದಾಗಿ ಅವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಳಿಕ ತಮ್ಮ ನಿರ್ಧಾರವನ್ನು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ. ಹಿಂದೆ ಚುನಾವಣೆಗೆ ಸ್ಪರ್ಧಿಸಿದಾಗ ಕ್ಷೇತ್ರದ ಜನರೇ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸುತ್ತಿದ್ದರು. […]

Continue Reading

ನೀಟ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿಗೆ ಉತ್ತಮ ಸಾಧನೆ

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಫಲಿತಾಂಶದಲ್ಲಿ ಮೂಡುಬಿದಿರೆ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಕಾಲೇಜಿನ ನಿಖಿಲ್ ಎಸ್.ಎಸ್. 720 ಕ್ಕೆ 650 ಅಂಕ ಗಳಿಸಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ತಿಳಿಸಿದ್ದಾರೆ. ನಿಖಿಲ್ ಅವರ ಬಳಿಕ ತನ್ಮಯಿ ಎ. ಕೋಟಿ 647, ಚಿನ್ಮಯಿ ಬೆಳ್ಳೂರು 629, ಹೇಮಾ ಯು. 624, ಶ್ಲೋಕ್ ರಾಘವೇಂದ್ರ ರಾವ್ 615, ಈಶ್ವರ ಪುಂಡಲೀಕಪ್ಪ ಕೊಪ್ಪಲ್ 612 ಹಾಗೂ ಮೋಹಿತ್ ವೈ.ಪಿ. 611 ಅಂಕಗಳನ್ನು […]

Continue Reading