Sample Page

ಮಂಗಳೂರಿನಲ್ಲಿ ಸಂಪುಟ, ಸ್ವಾಗತಿಸುತ್ತೇವೆ,ತುಳುನಾಡಿನಲ್ಲಿ ಸಂಭ್ರಮ: ಸಂಸದ ಚೌಟ

ಮಂಗಳೂರು: ಸೆ.18 ರಂದು ಮಂಗಳೂರಿನಲ್ಲಿ ನಡೆವ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಆಶಾದಾಯಕ ಬೆಳವಣಿಗೆ ಆಗಿದ್ದು, ಇದನ್ನು ಎಲ್ಲರೂ ಸ್ವಾಗತಿಸುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ, ಕರಾವಳಿ ಸಂಪರ್ಕ, ಆರ್ಥಿಕ ಪ್ರಗತಿ ಹಾಗೂ ಪ್ರವಾಸೋದ್ಯಮಕ್ಕೆ ವೇಗ ನೀಡುವಂತೆ 15 ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಡೇರಿಸುವ ಭರವಸೆ ಇದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕರ್ನಾಟಕ ರಾಜ್ಯ ಮೆರಿಟೈಮ್ ಮಂಡಳಿ ಹಾಗೂ ವಿಶೇಷ ಕರಾವಳಿ ಪ್ರವಾಸೋದ್ಯಮ […]

Continue Reading

ವಲಸೆ ತಡೆಗೆ ಕರಾವಳಿ–ಮಲೆನಾಡಿನಲ್ಲಿ ಹೊಸ ಅವಕಾಶ: ಸಿಎಂ ಡಿ.ಕೆ.ಶಿವಕುಮಾರ್

ಮಂಗಳೂರು: ಕರಾವಳಿ–ಮಲೆನಾಡಿನ ದಶಕಗಳ ಬೇಡಿಕೆಗಳಿಗೆ ಸ್ಪಂದಿಸುವುದರ ಜೊತೆಗೆ, ಈ ಭಾಗದ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರ್ಕಾರ ಹೊಸ ಅಭಿವೃದ್ಧಿಯ ರೂಪುರೇಷೆ ಸಿದ್ಧಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗವು 340 ಕಿ.ಮೀ ಉದ್ದದ ತೀರವನ್ನು ಹೊಂದಿದೆ. ಈ ಸಂಪತ್ತನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿಗೆ ಹೊಸ ದಿಕ್ಕು ನೀಡಬೇಕಿದೆ. ಕರಾವಳಿ ಹಾಗೂ ಮಲೆನಾಡಿನಿಂದ ಜನರು ವಲಸೆ ಹೋಗದಂತೆ ಸ್ಥಳೀಯವಾಗಿಯೇ ಉದ್ಯೋಗ ಮತ್ತು […]

Continue Reading

ರಾಷ್ಟ್ರೀಯ ಲೋಕ ಅದಾಲತ್‌ ಸೆ.19ಕ್ಕೆ, ರಾಜೀ ಸಂಧಾನದ ಮೂಲಕ ಶೀಘ್ರ ಇತ್ಯರ್ಥ: ನ್ಯಾಯಾಧೀಶ ಬಸವರಾಜ

ಮಂಗಳೂರು: ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸುವ ರಾಷ್ಟ್ರೀಯ ಲೋಕ ಅದಾಲತ್‌ ಸೆ.19ರಂದು ಜಿಲ್ಲೆಯ ವಿವಿಧ ನ್ಯಾಯಾಲಯಗಳ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಸವರಾಜ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣದಲ್ಲಿ ಮಧ್ಯಾಹ್ನ 2.30ರಿಂದ ಲೋಕ ಅದಾಲತ್‌ […]

Continue Reading

ಚುನಾವಣೆಯೇ ಬಿಜೆಪಿ ಅಜೆಂಡಾ ಆಗಿದ್ದರೆ, ಅಭಿವೃದ್ಧಿಯೇ ಕಾಂಗ್ರೆಸ್‌ ಅಜೆಂಡಾ : ಮಾಜಿ ಸಚಿವ ರಮಾನಾಥ ರೈ

ಮಂಗಳೂರು: ಚುನಾವಣೆಯೇ ಬಿಜೆಪಿಯ ಅಜೆಂಡಾ ಆಗಿದ್ದರೆ, ಕಾಂಗ್ರೆಸ್‌ನ ಅಜೆಂಡಾ ಅಭಿವೃದ್ಧಿ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಲಕ್ಷ್ಯಕ್ಕೆ ಒಳಗಾದ ಹಾಗೂ ತಳವರ್ಗದ ಜನರ, ಅದರಲ್ಲೂ ಕೊರಗ ಸಮುದಾಯದ ಅಭಿವೃದ್ಧಿಗೆ ಪೂರಕವಾದ ಕ್ರಮಗಳಿಗೆ ಸೆ.18 ದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆದ್ಯತೆ ದೊರೆಯಲಿದೆ ಎಂದರು. ‘ದುರ್ಬಲರು ಮತ್ತು ಬಡವರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರಗಳು ಒತ್ತು ನೀಡಿರುವುದು ಇತಿಹಾಸ. ಮೂಲನಿವಾಸಿ ಕೊರಗರು ತೀರಾ […]

Continue Reading

ಅಧಿಕಾರಕ್ಕಾಗಿ ತನಿಖಾ ಸಂಸ್ಥೆಗಳ ದುರ್ಬಳಕೆ, ತುಳು ಭಾಷೆ ನಮ್ಮ ಅಸ್ಮಿತೆಯ ಪ್ರತೀಕ: ಮಾಜಿ ಎಂಎಲ್ಸಿ ಹರೀಶ್ ಕುಮಾರ್

ಮಂಗಳೂರು: ಕರಾವಳಿಗರಿಗೆ ತುಳು ಭಾಷೆ ಕೇವಲ ಭಾವನಾತ್ಮಕ ವಿಷಯವಲ್ಲ; ಅದು ಅಸ್ಮಿತೆಯ ಪ್ರತೀಕ. ತುಳು ಭಾಷೆಗೆ ಸೂಕ್ತ ಮಾನ್ಯತೆ ದೊರೆಯಬೇಕು ಎಂಬುದು ಕರಾವಳಿಗರ ಆಶಯವಾಗಿದ್ದು, ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬೇಡಿಕೆ ಈಡೇರುವ ನಿರೀಕ್ಷೆಯಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ನಿಕಟಪೂರ್ವ ಅಧ್ಯಕ್ಷ ಹರೀಶ್ ಕುಮಾರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 100 ದಿನಗಳನ್ನು ಪೂರೈಸಿದ್ದು, ಜನರ ನಾಡಿಮಿಡಿತ ಅರಿತು ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. […]

Continue Reading

ಮಂಗಳೂರಿನಲ್ಲಿ ಸಂಪುಟ ಸಭೆ: ಸೆ.17 ರಿಂದ ಸಂಚಾರ ಬದಲಾವಣೆ

ಮಂಗಳೂರು: ನಗರದಲ್ಲಿ ಸೆ.18ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಸಚಿವರು ಆಗಮಿಸಲಿದ್ದು, ಸೆ.17ರ ಸಂಜೆದಿಂದ ಸೆ.19ರ ಬೆಳಿಗ್ಗೆವರೆಗೆ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸೂಚಿಸಿದ್ದಾರೆ. ಸೆ.18 ರಂದು ಪಡೀಲ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಂಡ ಬಳಿಕ ಮುಖ್ಯಮಂತ್ರಿ ಹಾಗೂ […]

Continue Reading

ವಿಶ್ವ ಹೃದಯ ದಿನದಂದು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ₹1,499ಕ್ಕೆ ಹೃದಯ ತಪಾಸಣೆ: ವಿಜಯ್ ಚಂದ್ರ

ಮಂಗಳೂರು: ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ವತಿಯಿಂದ ಹೃದಯ ತಪಾಸಣಾ ಪ್ಯಾಕೇಜ್‌ನ್ನು ₹1,499ರ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಸೆಪ್ಟೆಂಬರ್ 30, 2026ರವರೆಗೆ ಈ ಕೊಡುಗೆ ಲಭ್ಯ ಇರಲಿದೆ ಎಂದು ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್‌ಸ್ಟಿಟ್ಯೂಟ್ ಲಿಮಿಟೆಡ್ ನ ಗ್ರೂಪ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇ. ವಿಜಯ್ ಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯವಾಗಿ 3,000 ದರದ ಈ ತಪಾಸಣಾ ಪ್ಯಾಕೇಜ್‌ನಲ್ಲಿ ಹೃದಯದ ಸಮಗ್ರ ತಪಾಸಣೆಗೆ ಅಗತ್ಯವಿರುವ ವಿವಿಧ ಪರೀಕ್ಷೆಗಳು ಮತ್ತು ವೈದ್ಯಕೀಯ […]

Continue Reading

ಸಚಿವ ಸಂಪುಟ ಸಭೆ ಹಿನ್ನೆಲೆ,ಡ್ರೋನ್ ಹಾರಾಟಕ್ಕೆ ನಿರ್ಬಂಧ:ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಸಂಪುಟ ದರ್ಜೆಯ ಸಚಿವರ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಂಗಳೂರಿನ ಕೆಲವು ಪ್ರದೇಶಗಳಲ್ಲಿ ಡ್ರೋನ್ ಹಾರಾಟ ಹಾಗೂ ಕಾರ್ಯಾಚರಣೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 17ರ ಸಂಜೆ 4 ಗಂಟೆಯಿಂದ ಸೆಪ್ಟೆಂಬರ್ 19ರ ಬೆಳಿಗ್ಗೆ 10 ಗಂಟೆಯವರೆಗೆ ಮೇರಿಹಿಲ್ ಹೆಲಿಪ್ಯಾಡ್, ಮುಖ್ಯಮಂತ್ರಿ ವಾಸ್ತವ್ಯ ಹೂಡುವ ಹೋಟೆಲ್ ತಾಜ್ ವಿವಾಂತ ಹಾಗೂ ಪಡೀಲ್‌ನಲ್ಲಿರುವ ದಕ್ಷಿಣ ಕನ್ನಡ […]

Continue Reading

ವೇಟ್‌ಲಿಫ್ಟಿಂಗ್‌ನಲ್ಲಿ ಆಳ್ವಾಸ್‌ಗೆ ಅವಳಿ ಸಮಗ್ರ ಪ್ರಶಸ್ತಿ, ಹುಡುಗರ ವಿಭಾಗದಲ್ಲಿ 5 ಚಿನ್ನ; ಹುಡುಗಿಯರ ವಿಭಾಗದಲ್ಲಿ 5 ಚಿನ್ನ, ಬೆಳ್ಳಿ–ಕಂಚಿನ ಪದಕಗಳ ಸಾಧನೆ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಮಂಗಳೂರಿನ ಬದ್ರಿಯಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ವೇಟ್‌ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜು ಹುಡುಗರ ಹಾಗೂ ಹುಡುಗಿಯರ ಎರಡೂ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿ ಗೆದ್ದು ಅವಳಿ ಗೌರವಕ್ಕೆ ಪಾತ್ರವಾಗಿದೆ. ಹುಡುಗರ ವಿಭಾಗದಲ್ಲಿ ಆಳ್ವಾಸ್ ತಂಡದ ಕ್ರೀಡಾಪಟುಗಳು ಐದು ವಿಭಾಗಗಳಲ್ಲೂ ಪ್ರಥಮ ಸ್ಥಾನ ಪಡೆದು ಐದು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು. 60 ಕೆ.ಜಿ. ವಿಭಾಗದಲ್ಲಿ ಸಂತೋಷ್, 71 ಕೆ.ಜಿ.ಯಲ್ಲಿ ಪ್ರಫುಲ್, […]

Continue Reading

ಪ್ರಜಾಸೇವೆ ಆಂದೋಲನ, 1,163 ಅರ್ಜಿಗಳ ವಿಲೇವಾರಿ,ಬಾಕಿ ಅರ್ಜಿಗಳಿಗೆ ವೇಗ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಸೆಪ್ಟೆಂಬರ್ 5ರಂದು ನಡೆದ ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸ್ವೀಕರಿಸಲಾದ 1,641 ಅರ್ಜಿಗಳ ಪೈಕಿ 1,163 ಅರ್ಜಿಗಳನ್ನು ಇದುವರೆಗೆ ವಿಲೇವಾರಿ ಮಾಡಲಾಗಿದೆ. ಬಾಕಿ ಇರುವ 478 ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಇನ್ನೆರಡು ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಇತ್ಯರ್ಥಪಡಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಜಾಸೇವೆ ಆಂದೋಲನದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರ್ಜಿದಾರರಿಗೆ ಹಿಂಬರಹ […]

Continue Reading