Sample Page

ಬಿಗ್‌ ಬಾಸ್‌ ಕನ್ನಡ–13ಕ್ಕೆ ಚಾಲನೆ: ದೊಡ್ಮನೆಗೆ ಯಾರೆಲ್ಲ ಎಂಟ್ರಿ?, ಕಿಚ್ಚ ಸುದೀಪ್‌ ಸಾರಥ್ಯದಲ್ಲಿ ಮತ್ತೊಂದು ರಿಯಾಲಿಟಿ ಶೋ ಪಯಣ

ಬೆಂಗಳೂರು: ಕರ್ನಾಟಕದ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ ಬಾಸ್‌ ಕನ್ನಡ’ದ 13ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ ಸಂಜೆ 7 ಗಂಟೆಗೆ ಅದ್ದೂರಿ ಪ್ರೀಮಿಯರ್‌ ಕಾರ್ಯಕ್ರಮ ನಡೆಯಲಿದ್ದು, ಕಿಚ್ಚ ಸುದೀಪ್‌ ಅವರು ‘ದೊಡ್ಮನೆ’ ಫ್ಲೈಟ್‌ನ ಕ್ಯಾಪ್ಟನ್‌ ಆಗಿ ಸ್ಪರ್ಧಿಗಳನ್ನು ಬರಮಾಡಿಕೊಳ್ಳಲಿದ್ದಾರೆ. ಈ ಬಾರಿ ಬಿಗ್‌ ಬಾಸ್‌ ಕನ್ನಡ–13 ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಪ್ರಮುಖವಾಗಿ, ಜನಪ್ರಿಯ ನಟ-ನಟಿಯರು, ಕಿರುತೆರೆ ಕಲಾವಿದರ ಜತೆಗೆ ಸಾಮಾನ್ಯರಿಗೂ ಸ್ಪರ್ಧಿಗಳಾಗಿ ದೊಡ್ಮನೆ ಪ್ರವೇಶಿಸುವ ಅವಕಾಶ ನೀಡಲಾಗಿದೆ. ಈಗಾಗಲೇ ವಾಹಿನಿ ಇಬ್ಬರು ಸ್ಪರ್ಧಿಗಳ […]

Continue Reading

ಮಂಗಳೂರು: ವರ್ಲ್ಡ್ ಮಾಸ್ಟರ್ಸ್ ಕ್ರೀಡಾಕೂಟ ಪ್ರಶಸ್ತಿ ವಿಜೇತರಿಗೆ ಸನ್ಮಾನ, ಕ್ರೀಡಾ ಅನುಭವ ಹಂಚಿಕೊಂಡ ಗಿರಿಧರ ಸಾಲಿಯಾನ್

ಮಂಗಳೂರು: ದಕ್ಷಿಣ ಕೊರಿಯಾದ ದೇಗುನಲ್ಲಿ ನಡೆದ 2026ರ ವಿಶ್ವ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪ್ರಶಸ್ತಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳನ್ನು ದಕ್ಷಿಣ ಕನ್ನಡ ಮಾಸ್ಟರ್ ಅಥ್ಲೀಟ್ಸ್ ಅಸೋಸಿಯೇಷನ್ ವತಿಯಿಂದ ಭಾನುವಾರ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸನ್ಮಾನಿಸಲಾಯಿತು. ವಿಶ್ವ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ವಿಶ್ವದ ಸುಮಾರು 106 ದೇಶಗಳ ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಪ್ರತಿಷ್ಠಿತ ಅಂತರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪ್ರಶಸ್ತಿ ಗೆದ್ದ ಗಿರಿಧರ ಸಾಲಿಯಾನ್, ಗ್ಲಾಡಿಸ್ ಪಾಯಸ್, ಮೇರಿ ಹಿಲ್ಡಾ, ಸುಭಾಷ್ ರೈ ಹಾಗೂ […]

Continue Reading

ಮೂಡುಬಿದಿರೆಯಲ್ಲಿ ಶ್ರೀ ಲಕ್ಷ್ಮಣಾನಂದ ಸಹಕಾರ ಸಂಘದ 7 ನೇ ಶಾಖೆ ಶುಭಾರಂಭ

ಮೂಡುಬಿದಿರೆ: ಕರಾವಳಿ ಭಾಗದಾದ್ಯಂತ ಸೇವಾ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶ ಹೊಂದಿರುವ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘವು ಮೂಡುಬಿದಿರೆಯಲ್ಲಿ ತನ್ನ 7ನೇ ಶಾಖೆಯನ್ನು ಆರಂಭಿಸಿದೆ. ಸರ್ಕಾರಿ ಆಸ್ಪತ್ರೆ ಬಳಿಯ ಪ್ರಭು ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ಶ್ರೀ ಲಕ್ಷ್ಮಣಾನಂದ ಸ್ವಾಮೀಜಿ ಮೂಲತಃ ವೈದ್ಯರಾಗಿದ್ದು, ಸಮಾಜ ನಿರ್ಮಾಣದ ದೃಷ್ಟಿಯಿಂದ ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದರು. ರಾಮಕ್ಷತ್ರೀಯ ಸಮುದಾಯಕ್ಕೆ ಸಹಕಾರ […]

Continue Reading

ಮುಂಡಾಲ  ಸಮಾಜವನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗಲಿ: ಸ್ವಾಮೀಜಿ

ಮಂಗಳೂರು: ಅಸೂಯೆ, ದ್ವೇಷ ಹಾಗೂ ಬೇಡವಾದ ವಿಚಾರಗಳು ಮನುಷ್ಯನನ್ನು ಸಣ್ಣವರನ್ನಾಗಿ ಮಾಡುತ್ತವೆ. ಎಲ್ಲ ಧರ್ಮಗಳ ಸಾರವೂ ಮನುಷ್ಯನಿಗೆ ಒಳಿತು ಮಾಡುವುದೇ ಆಗಿದೆ. ಆದ್ದರಿಂದ ಯಾರನ್ನೂ ದ್ವೇಷಿಸದೆ, ಮುಂಡಾಲ ಸಮಾಜದ ಎಲ್ಲರನ್ನೂ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಚಿತ್ರದುರ್ಗದ ಆದಿಜಾಂಬವ ಮಹಾಸಂಸ್ಥಾನ ಮಠದ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಲಾಲ್‌ಬಾಗ್‌ನ ಸ್ಕೌಟ್ಸ್‌ ಅಂಡ್ ಗೈಡ್ಸ್‌ ಸಭಾಂಗಣದಲ್ಲಿ ಭಾನುವಾರ ನಡೆದ ಮುಂಡಾಲ ಮಹಾಸಭಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭ, ಮುಂಡಾಲ ಸಮುದಾಯದ ಸ್ನೇಹ […]

Continue Reading

ಗಣೇಶ ಚತುರ್ಥಿ: ಎನ್ ಡಬ್ಲು ಕೆಎಸ್ ಆರ್ ಟಿಸಿ ಯಿಂದ 312 ಹೆಚ್ಚುವರಿ ವಿಶೇಷ ಬಸ್‌

ಕಾರವಾರ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ 312 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಹಾಗೂ ಬಾಗಲಕೋಟೆ ವಿಭಾಗಗಳಿಂದ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುವುದು. ವಾರಾಂತ್ಯದ ದಿನಗಳು ಹಾಗೂ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು […]

Continue Reading

ನನ್ನನ್ನು ನಾಡಿನ ದೊರೆ ಎನ್ನಬೇಡಿ, “ಪ್ರಜಾಸೇವಕ” ಎನ್ನಿ: ಸಿಎಂ ಶಿವಕುಮಾರ್

ಕೂಡ್ಲಿಗಿ: “ಸರ್ಕಾರದ ಯಶಸ್ಸು ಜಾಹಿರಾತಿನಲ್ಲಿ ಇರುವುದಿಲ್ಲ. ಜನರ ಮುಖದಲ್ಲಿ ನಗು ಮೂಡಿದೆ ಎಂಬುದೇ ಯಶಸ್ಸಿನ ಮಾನದಂಡ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಜಾಸೇವೆ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು. “ಜನ ಸೇವೆಯೇ ಜನಾರ್ಧನ ಸೇವೆ ಎಂದು ಭಾವಿಸಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮ ಸೇವೆ ಮಾಡಲು 136 ಸೀಟು ನೀಡಿ ರಾಜ್ಯವನ್ನು ಹೊಸ ದಿಕ್ಕಿನಲ್ಲಿ ಮುನ್ನಡೆಸಲು ಅವಕಾಶ ಕೊಟ್ಟಿದ್ದೀರಿ. ಇದು ಕೇವಲ […]

Continue Reading

ಇಂದಿರಾಗಾಂಧಿ ಹೆಸರಿನ ಶಾಲೆ ಮುಚ್ಚಲು ಅವಕಾಶ ನೀಡಲ್ಲ, ಶಿಕ್ಷಕಿಯರಿಗೆ ಸಿಎಂ‌ ಶಿವಕುಮಾರ್ ಅಭಯ

ಕೂಡ್ಲಿಗಿ: “ಇಂದಿರಾಗಾಂಧಿ ಅವರ ಹೆಸರಿರುವ ಶಾಲೆ ಮುಚ್ಚಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದಾಗ ಮನವಿ ನೀಡಲು ಬಂದಿದ್ದ ಶಿಕ್ಷಕಿಯರು ಮುಖ್ಯಮಂತ್ರಿಯವರ ಕೈ ಹಿಡಿದು ಭಾವುಕರಾದರು. ಕೂಡ್ಲಿಗಿಯಲ್ಲಿ ಶನಿವಾರ ನಡೆದ ಪ್ರಜಾಸೇವೆ ಅಭಿಯಾನದ ಮೊದಲ ಕಾರ್ಯಕ್ರಮ ಭಾವುಕ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಶಾಲೆಯ ಶಿಕ್ಷಕಿಯರಾದ ಶಾಂತಾ, ಜಗನ್ಮಾಥೆ, ಭಾರತಿ, ವೆಂಕಟೇಶ್ ಅವರುಗಳು ಸಿಎಂಗೆ ಮನವಿ ನೀಡಿ, “ಸಿಎಂ‌ ಸಾರ್ ಹಗರಿಬೊಮ್ಮನಹಳ್ಳಿ, ರಾಮನಗರದಲ್ಲಿ ಇಂದಿರಾಗಾಂಧಿ ಅವರ ಹೆಸರಿನಲ್ಲಿ ನಡೆಯುತ್ತಿರುವ ಏಕೈಕ ಅನುದಾನಿತ […]

Continue Reading

ದ.ಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿದ ಸಚಿವ ಯು.ಟಿ. ಖಾದರ್

ಮಂಗಳೂರು: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದ ಮೂಲಕ ದೇಶದ ಶಿಲ್ಪಿಗಳನ್ನು ರೂಪಿಸುವ ಶಕ್ತಿ ಶಿಕ್ಷಕರಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಮಂಗಳೂರು ಉತ್ತರ ವಲಯದ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೆತ್ತವರು […]

Continue Reading

ಅಜ್ಞಾನದಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರು ಶಿಕ್ಷಕರು:ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯ ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಬ್ರಹ್ಮಾವರ ವಲಯ ಹಾಗೂ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಮತ್ತು ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಚಿಂತನೆಯಂತೆ ಶಿಕ್ಷಕರು […]

Continue Reading

ಶಿಕ್ಷಕರ ಪರಿಶ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡ ಉತ್ತಮ ಸಾಧನೆ:ಸಚಿವ ಲಕ್ಷ್ಮಣ ಸವದಿ

ಅಂಕೋಲಾ: ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಉತ್ತರ ಕನ್ನಡ ಜಿಲ್ಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಮೂರನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು. ಅಂಕೋಲಾದ ನಾಡವರ ಸಭಾಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಕೇವಲ ಸಂಬಳಕ್ಕಾಗಿ ಕೆಲಸ ಮಾಡುವವರಲ್ಲ. ಸಮಾಜ ನಿರ್ಮಾಣದಲ್ಲಿ […]

Continue Reading